ETV Bharat / state

ಬೇಕರಿಗೆ ನುಗ್ಗಿ ಹಲ್ಲೆ, ದರೋಡೆ: ವ್ಯಾಪಾರ ಚೆನ್ನಾಗಿ ಆಗುತ್ತಿದ್ದ ದ್ವೇಷದಿಂದ ಕೃತ್ಯ - etv bharat kannada

ಬೆಂಗಳೂರಿನ ಕುಂದಲಹಳ್ಳಿಯಲ್ಲಿನ ಬೇಕರಿಗೆ ನುಗ್ಗಿ ಅಂಗಡಿಯಲ್ಲಿದ್ದವರ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದ ಪ್ರಕರಣ ಸಂಬಂಧ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.

one-more-arrested-in-bengaluru-bakery-assault-case
ಬೇಕರಿಗೆ ನುಗ್ಗಿ ಹಲ್ಲೆ, ದರೋಡೆ: ವ್ಯಾಪಾರ ಚೆನ್ನಾಗಿ ಆಗುತ್ತಿದ್ದ ದ್ವೇಷದಿಂದ ಕೃತ್ಯ
author img

By

Published : Dec 10, 2022, 10:58 PM IST

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿನ ಬೇಕರಿಗೆ ನುಗ್ಗಿ ಅಂಗಡಿಯಲ್ಲಿದ್ದವರ ಮೇಲೆ ಹಲ್ಲೆಗೈದು ದರೋಡೆ ಮಾಡಿದ್ದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಹೆಚ್​ಎಎಲ್​ ಪೊಲೀಸರು ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದಂತಾಗಿದೆ.

ಈಗಾಗಲೇ ಡೆಲಿವರಿ ಬಾಯ್ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್(20) ಖಾಸಗಿ ಹೋಟೆಲ್ ಮ್ಯಾನೇಜರ್ ಕಾರ್ತಿಕ್(23) ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇಂದು ಮತ್ತೊಬ್ಬ ಆರೋಪಿ ಮಂಜುನಾಥ್​ ಎಂಬಾತನ ಬಂಧನವಾಗಿದೆ.

ಆರೋಪಿ ಮಂಜುನಾಥ ಅದೇ ಏರಿಯಾದಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದ. ಆದರೆ ಸಮೀಪದಲ್ಲಿನ ಬೇಕರಿಯಲ್ಲಿ ಚೆನ್ನಾಗಿ ವ್ಯಾಪಾರ ಆಗುತ್ತಿದ್ದರಿಂದ ಅವರ ಮೇಲೆ ದ್ವೇಷ ಸಾಧಿಸುತ್ತಿದ್ದ. ಈ ಜಿದ್ದಿನಿಂದ ಡಿಸೆಂಬರ್ 8ರಂದು ರಾತ್ರಿ ಬೇಕರಿಯಲ್ಲಿದ್ದವರಿಗೆ ಹಲ್ಲೆ ಮಾಡಿ ದರೋಡೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಪತ್ತೆಗಾಗಿ ತಂಡ ರಚಿಸಲಾಗಿತ್ತು ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೇಕರಿಗೆ ನುಗ್ಗಿ ಹಲ್ಲೆ

ಘಟನೆಯಲ್ಲಿ ಉಡುಪಿಯ ಬೈಂದೂರು ಮೂಲದ ನವೀನ್ ಕುಮಾರ್ ಹಾಗೂ ಪ್ರಜ್ವಲ್ ಶೆಟ್ಟಿ, ನಿತೀನ್ ಶೆಟ್ಟಿ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಈ ಘಟನೆ ಅಂಗಡಿಯಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಬೇಕರಿಯವರು ಸಿಗರೇಟ್ ನೀಡಿ ಹಣ ಕೇಳಿದ್ದಾರೆ. ಹಣ ಕೇಳಿದ್ದಕ್ಕೆ ಬೇಕರಿ ಹುಡುಗರಿಗೆ ಪುಡಿ ರೌಡಿಗಳು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತ, ಮನಸೋಇಚ್ಚೆ ಹಿಗ್ಗಾಮುಗ್ಗಾ ಥಳಿಸಿ ಹಣ ತೆಗೆದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಹಲ್ಲೆಗೊಳಗಾದವರು ಹೆಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಸಿಗರೇಟ್ ಹಣ ಕೇಳಿದಕ್ಕೆ ಕೊಲೆ ಬೆದರಿಕೆ ಹಾಕಿ ಹಲ್ಲೆ: ಮೂವರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.