ETV Bharat / state

ಎಸ್ಎಸ್ಎಲ್​​ಸಿ ಗಣಿತ ಸಮಾಜಶಾಸ್ತ್ರ ಪರೀಕ್ಷೆ: 1 ಡಿಬಾರ್, 13765 ವಿದ್ಯಾರ್ಥಿಗಳು ಗೈರು

author img

By

Published : Apr 3, 2023, 6:07 PM IST

ಇಂದು ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಲ್ಲಿ ಯಾವ ವಿದ್ಯಾರ್ಥಿಯನ್ನೂ ಡಿಬಾರ್ ಮಾಡಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆ
ಎಸ್​ಎಸ್​ಎಲ್​ಸಿ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಇಂದು ಗಣಿತ ಹಾಗೂ ಸಮಾಜಶಾಸ್ತ್ರ ವಿಷಯಗಳ ಪರೀಕ್ಷೆ ನಡೆದಿದೆ. ಒಟ್ಟು 13,765 ವಿದ್ಯಾರ್ಥಿಗಳು ಗೈರಾಗಿದ್ದು, ಪರೀಕ್ಷಾ ಅಕ್ರಮದ ಆರೋಪದ ಮೇಲೆ 1 ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.

ಎಸ್ಎಸ್ಎಲ್​ಸಿ ಪರೀಕ್ಷೆ ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಲ್ಲಿ ಶೇ. 98.48 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಯಾವುದೇ ರೀತಿಯ ಪರೀಕ್ಷಾ ಅಕ್ರಮ ನಡೆದಿಲ್ಲ. ಯಾವ ವಿದ್ಯಾರ್ಥಿಯನ್ನೂ ಡಿಬಾರ್ ಮಾಡಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಇಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಎಸ್ಎಸ್ಎಲ್​ಸಿ ಪರೀಕ್ಷೆಯ ಎರಡನೇ ದಿನದ ಪರೀಕ್ಷೆ ನಡೆದಿದ್ದು, 100 ಅಂಕಗಳಿಗೆ ನಡೆದ ಗಣಿತ ಮತ್ತು ಸಮಾಜಶಾಸ್ತ್ರ ವಿಷಯದ ಪರೀಕ್ಷೆ ಶಾಂತಿಯುತವಾಗಿ ಮುಕ್ತಾಯಗೊಂಡಿತು. ಗಣಿತ ಮತ್ತು ಸಮಾಜಶಾಸ್ತ್ರಕ್ಕೆ ನೋಂದಾಯಿಸಿಕೊಂಡಿದ್ದ 8,28,273 ವಿದ್ಯಾರ್ಥಿಗಳಲ್ಲಿ 8,14,508 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 13,765 ವಿದ್ಯಾರ್ಥಿಗಳು ಮಾತ್ರ ಗೈರಾಗಿದ್ದಾರೆ. ಶೇ.98.34 ರಷ್ಟು ಹಾಜರಾತಿ ಇದ್ದು, ಯಾದಗಿರಿಯಲ್ಲಿ ಕನಿಷ್ಠ ಹಾಜರಾತಿ ದಾಖಲಾಗಿದೆ.

ಇಲ್ಲಿ ಶೇ. 96. 17 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರೆ, ಬೆಳಗಾವಿ ಜಿಲ್ಲೆಯಲ್ಲಿ ಗರಿಷ್ಟ ಹಾಜರಾತಿ ದಾಖಲಾಗಿದ್ದು, ಶೇ.99.80 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಕಲಬುರಗಿಯಲ್ಲಿ ಒಂದು ಡಿಬಾರ್ ಆಗಿದ್ದು ಹೊರತುಪಡಿಸಿದರೆ ಯಾವುದೇ ರೀತಿಯಲ್ಲೂ ಪರೀಕ್ಷಾ ಅಕ್ರಮ ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಕೃತ ಮಾಹಿತಿ ನೀಡಿದೆ.

ಇಂದು ಗಣಿತ, ಸಮಾಜ ಶಾಸ್ತ್ರ, ವಿಷಯದ ಪರೀಕ್ಷೆ ನಡೆದಿದ್ದು, ಏಪ್ರಿಲ್ 6 ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಏಪ್ರಿಲ್ 8 ರಂದು ಅರ್ಥಶಾಸ್ತ್ರ, ಏಪ್ರಿಲ್ 10 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಏಪ್ರಿಲ್ 12 ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಏಪ್ರಿಲ್ 15ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಎಸ್​ಎಸ್​ಎಲ್​ಸಿ ಗಣಿತ ಶಾಸ್ತ್ರ ಪ್ರಶ್ನೆ ಪತ್ರಿಕೆ ಲೀಕ್?: ಎಸ್​ಎಸ್​ಎಲ್​ಸಿ ಗಣಿತಶಾಸ್ತ್ರ ಪ್ರಶ್ನೆ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿರುವ ಘಟನೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ 10.30 ರಿಂದ 1.45 ರವರೆಗೆ ಗಣಿತಶಾಸ್ತ್ರದ ಪರೀಕ್ಷೆ ನಡೆದಿತ್ತು. ಹಣಬರಟ್ಟಿ ಸರ್ಕಾರಿ ಪ್ರೌಢ ಶಾಲೆಗೆ ಸಂಬಂಧಿಸಿದೆ ಎನ್ನಲಾದ ಎಸ್​ಎಸ್​ಎಲ್​ಸಿ ಪ್ರಶ್ನೆ ಪತ್ರಿಕೆಯ ಪ್ರತಿಯೊಂದು ಸೊಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದ್ದರೂ, ಸ್ಥಳೀಯ ಶಿಕ್ಷಕರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಎನ್ ಪ್ಯಾಟಿ, ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಪರಿಶೀಲನೆ ನಡೆಸಿದರು. ಸೋರಿಕೆ ಆದ ಪ್ರಶ್ನೆ ಪತ್ರಿಕೆ ಹಣಬರಟ್ಟಿ ಶಾಲೆಗೆ ಸಂಬಂಧಿಸಿದ್ದಲ್ಲ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಹೇಳಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿರುವ ಡಿಡಿಪಿಐ ಬಸವರಾಜ ನಲತವಾಡ, ಇಬ್ಬರು ಅಧಿಕಾರಿಗಳನ್ನು ಪ್ರತ್ಯೇಕವಾಗಿ ಹಣಬರಟ್ಟಿ ಮತ್ತು ಸಮೀಪದ ಶಾಲೆಗಳಿಗೆ ಕಳುಹಿಸಿ ಮಾಹಿತಿ ಪಡೆಯಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ : ಎನ್​ಸಿಇಆರ್​ಟಿ 10, 11, 12ನೇ ತರಗತಿ ಪಠ್ಯಪುಸ್ತಕ ಪರಿಷ್ಕರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.