ETV Bharat / state

ನಾಳೆಗೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ.. ಸಿಎಂ ಹೆಚ್‌ಡಿಕೆ ಹೀಗೆ ಹೇಳಿದರು.. - ಹೆಚ್.ಡಿ.ಕುಮಾರಸ್ವಾಮಿ

ರೈತರ ನೋವಿಗೆ ಸ್ಪಂದಿಸಿದ ನಮ್ಮ ಮೈತ್ರಿ ಸರ್ಕಾರ, ಈ ನಿಟ್ಟಿನಲ್ಲಿ ಕೆಲವು ಮಹತ್ವಪೂರ್ಣ ಹೆಜ್ಜೆಗಳನ್ನಿಟ್ಟಿದೆ. ಕೃಷಿ ಸಾಲಮನ್ನಾ ಯೋಜನೆಯನ್ನು ಅತ್ಯಂತ ಪಾರದರ್ಶಕವಾಗಿ ಜಾರಿಗೊಳಿಸಲಾಗುತ್ತಿದ್ದು, ಈಗಾಗಲೇ 15.5 ಲಕ್ಷ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
author img

By

Published : May 22, 2019, 10:34 PM IST

ಬೆಂಗಳೂರು : ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಹೊಂಗನಸಿನೊಂದಿಗೆ ನಮ್ಮ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾಗುತ್ತಿದೆ. ಈ ಅವಧಿಯಲ್ಲಿ ನಾವು ಮಂಡಿಸಿದ ಎರಡು ಆಯವ್ಯಯಗಳು ನಮ್ಮ ಸರ್ಕಾರದ ಒಲವು-ನಿಲುವುಗಳು ಸಾಗಬೇಕಾದ ಹಾದಿಯನ್ನು ಸ್ಪಷ್ಟಪಡಿಸಿವೆ ಎಂದು ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ನಾವು ರೂಪಿಸಿರುವ ಕಾರ್ಯಕ್ರಮಗಳು ಜನರಲ್ಲಿ ಜನಪರ, ರೈತರ ಪರ ಹಾಗೂ ಎಲ್ಲ ವರ್ಗದವರ ಆಶೋತ್ತರಗಳಿಗೆ ಸ್ಪಂದಿಸುವ ಸರ್ಕಾರ ಎಂಬ ಭಾವನೆ ಮೂಡಿಸಿರುವ ತೃಪ್ತಿಯಿದೆ. ಜೊತೆಗೆ ನಮ್ಮ ಮುಂದಿನ ನಡೆಗೆ ಸ್ಫೂರ್ತಿಯೂ ಆಗಿದೆ. ರೈತರ ನೋವಿಗೆ ಸ್ಪಂದಿಸಿದ ನಮ್ಮ ಮೈತ್ರಿ ಸರ್ಕಾರ ಈ ನಿಟ್ಟಿನಲ್ಲಿ ಕೆಲ ಮಹತ್ವಪೂರ್ಣ ಹೆಜ್ಜೆಗಳನ್ನಿಟ್ಟಿದೆ. ಕೃಷಿ ಸಾಲಮನ್ನಾ ಯೋಜನೆಯನ್ನು ಅತ್ಯಂತ ಪಾರದರ್ಶಕವಾಗಿ ಜಾರಿಗೊಳಿಸಲಾಗುತ್ತಿದೆ. ಈಗಾಗಲೇ 15.5 ಲಕ್ಷ ರೈತರ ಸಾಲಮನ್ನಾ ಮಾಡಲಾಗಿದೆ ಎಂದಿದ್ದಾರೆ ಸಿಎಂ.

ಇಸ್ರೇಲ್ ಮಾದರಿ ಕೃಷಿ, ಸಾವಯವ ಕೃಷಿಗೆ ಒತ್ತು, ರೈತ ಸಲಹಾ ಸಮಿತಿ ಸ್ಥಾಪನೆ ಮತ್ತಿತರ ಉಪಕ್ರಮಗಳು ರೈತರಲ್ಲಿ ಹೊಸ ಭರವಸೆ ಮೂಡಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಪ್ರಯತ್ನಗಳು. ಮುಂದಿನ ದಿನಗಳಲ್ಲಿಯೂ ಇಂತಹ ಹಲವಾರು ಉಪಕ್ರಮಗಳ ಮೂಲಕ ರೈತರ ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆಯುವ ಆಶಯ ನಮ್ಮದು ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಅಂತೆಯೇ ಕೈಗಾರಿಕೆಗಳ ಮೂಲಕ ಉದ್ಯೋಗ ಸೃಷ್ಟಿ, ಬೆಂಗಳೂರು ನಗರ, ಎರಡನೇ ಹಂತದ ನಗರಗಳ ಅಭಿವೃದ್ಧಿ, ನಾಡಿನ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡುವ ಮೂಲಕ ರಾಜ್ಯದ ಆರ್ಥಿಕ ಅಭಿವೃದ್ಧಿ ಉತ್ತಮಪಡಿಸುವತ್ತ ಅಡಿಯಿಟ್ಟಿದ್ದೇವೆ. ಶಾಲೆಗಳ ಮೂಲಸೌಕರ್ಯಕ್ಕೆ ಆದ್ಯತೆ, ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದು, ಆಶಾದಾಯಕ ಬೆಳವಣಿಗೆಯನ್ನೂ ಸಾಧಿಸಿದ್ದೇವೆ. ಕಡು ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿ ಮುಂದುವರಿದಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ವಲಯದಲ್ಲಿಯೂ ನಮ್ಮ ಕಳಕಳಿ, ಕಾರ್ಯಕ್ರಮಗಳ ರೂಪು ತಳೆದು ದಮನಿತರ ಬದುಕು ಹಸನುಗೊಳಿಸಲು ಮುಂದಾಗಿದೆ. ನಮ್ಮ ಮಿತ್ರ ಪಕ್ಷ ತನ್ನ ಆಡಳಿತಾವಧಿಯಲ್ಲಿ ಜಾರಿಗೊಳಿಸಿರುವ ಮಹತ್ವಾಕಾಂಕ್ಷಿ ಹಾಗೂ ಜನಪ್ರಿಯ ಯೋಜನೆಗಳನ್ನೂ ಸಹ ಮುಂದುವರೆಸಿಕೊಂಡು ಜನಪರ ಆಡಳಿತದ ಹೊಸ ಮಾದರಿ ಸೃಷ್ಟಿಸುವತ್ತ ಮುನ್ನಡೆದಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಕೃತಿ ಮಾತೆಯ ಮುನಿಸಿನಿಂದ ನಾಡು ಪ್ರವಾಹ, ಭೂಕುಸಿತ ಹಾಗೂ ತೀವ್ರ ಬರದಂತಹ ವೈರುಧ್ಯವನ್ನು ಈ ವರ್ಷ ರಾಜ್ಯ ಎದುರಿಸಿದೆ. ಈ ಪರಿಸ್ಥಿತಿಯನ್ನು ನಮ್ಮ ಸರ್ಕಾರ, ಕೇಂದ್ರ-ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ ನೆರವಿನೊಂದಿಗೆ ಯಶಸ್ವಿಯಾಗಿ ನಿರ್ವಹಿಸಿದೆ. ಕಳೆದ ಎರಡು ತಿಂಗಳಿನಿಂದ ಚುನಾವಣಾ ನೀತಿ ಸಂಹಿತೆ ಘೋಷಣೆಯಾದ ನಂತರವೂ ಅಧಿಕಾರಿಗಳು ಬರ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.

ಈ ನಿಟ್ಟಿನಲ್ಲಿ ನಮ್ಮ ಸರ್ಕಾರವನ್ನು ಬೆಂಬಲಿಸಿ ಸಹಕರಿಸಿದ ನಾಡಿನ ಜನತೆಗೆ, ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ, ನನ್ನ ಮಾರ್ಗದರ್ಶಕರೂ ಆದ ನನ್ನ ತಂದೆ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ, ಎಲ್ಲ ಜನಪ್ರತಿನಿಧಿಗಳಿಗೆ ಹಾಗೂ ಎಲ್ಲ ಅಧಿಕಾರಿ ವೃಂದದವರಿಗೆ ಸಿಎಂ ಕುಮಾರಸ್ವಾಮಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Intro:ಬೆಂಗಳೂರು : ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಹೊಂಗನಸಿನೊಂದಿಗೆ ನಮ್ಮ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾಗುತ್ತಿದೆ. ಈ ಅವಧಿಯಲ್ಲಿ ನಾವು ಮಂಡಿಸಿದ ಎರಡು ಆಯವ್ಯಯಗಳು ನಮ್ಮ ಸರ್ಕಾರದ ಒಲವು, ನಿಲುವುಗಳು, ಸಾಗಬೇಕಾದ ಹಾದಿಯನ್ನು ಸ್ಪಷ್ಟಪಡಿಸಿವೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.Body:ಈ ಅವಧಿಯಲ್ಲಿ ನಾವು ರೂಪಿಸಿರುವ ಕಾರ್ಯಕ್ರಮಗಳು ಜನರಲ್ಲಿ ಜನಪರ ಸರ್ಕಾರ, ರೈತರ ಪರವಾದ ಸರ್ಕಾರ, ಎಲ್ಲ ವರ್ಗದವರ ಆಶೋತ್ತರಗಳಿಗೆ ಸ್ಪಂದಿಸುವ ಸರ್ಕಾರ ಎಂಬ ಭಾವನೆ ಮೂಡಿಸಿರುವುದು ತೃಪ್ತಿ ತಂದಿದೆ. ಜೊತೆಗೆ ನಮ್ಮ ಮುಂದಿನ ನಡೆಗೆ ಸ್ಫೂರ್ತಿಯೂ ಆಗಿದೆ.
ರೈತರ ನೋವಿಗೆ ಸ್ಪಂದಿಸಿದ ನಮ್ಮ ಮೈತ್ರಿ ಸರ್ಕಾರ ಈ ನಿಟ್ಟಿನಲ್ಲಿ ಕೆಲವು ಮಹತ್ವಪೂರ್ಣ ಹೆಜ್ಜೆಗಳನ್ನಿಟ್ಟಿದೆ. ಕೃಷಿ ಸಾಲ ಮನ್ನಾ ಯೋಜನೆಯನ್ನು ಅತ್ಯಂತ ಪಾರದರ್ಶಕವಾಗಿ ಜಾರಿಗೊಳಿಸಲಾಗುತ್ತಿದ್ದು, ಈಗಾಗಲೇ 15.5 ಲಕ್ಷ ರೈತರ ಸಾಲ ಮನ್ನಾ ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಎಲ್ಲ ಅರ್ಹ ರೈತರಿಗೂ ಈ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ಇಸ್ರೇಲ್ ಮಾದರಿ ಕೃಷಿ, ಸಾವಯವ ಕೃಷಿಗೆ ಒತ್ತು, ರೈತ ಸಲಹಾ ಸಮಿತಿ ಸ್ಥಾಪನೆ ಮತ್ತಿತರ ಉಪಕ್ರಮಗಳು ರೈತರಲ್ಲಿ ಹೊಸ ಭರವಸೆ ಮೂಡಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಪ್ರಯತ್ನಗಳು. ಮುಂದಿನ ದಿನಗಳಲ್ಲಿಯೂ ಇಂತಹ ಹಲವಾರು ಉಪಕ್ರಮಗಳ ಮೂಲಕ ರೈತರ ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆಯುವ ಆಶಯ ನಮ್ಮದು ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಅಂತೆಯೇ ಕೈಗಾರಿಕೆಗಳ ಮೂಲಕ ಉದ್ಯೋಗ ಸೃಷ್ಟಿ, ಬೆಂಗಳೂರು ನಗರ, ಎರಡನೇ ಹಂತದ ನಗರಗಳ ಅಭಿವೃದ್ಧಿ, ನಾಡಿನ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡುವ ಮೂಲಕ ರಾಜ್ಯದ ಆರ್ಥಿಕ ಅಭಿವೃದ್ಧಿ ಉತ್ತಮಪಡಿಸುವತ್ತ ಅಡಿಯಿಟ್ಟಿದ್ದೇವೆ. ಶಾಲೆಗಳ ಮೂಲಸೌಕರ್ಯಕ್ಕೆ ಆದ್ಯತೆ, ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದು, ಆಶಾದಾಯಕ ಬೆಳವಣಿಗೆಯನ್ನೂ ಸಾಧಿಸಿದ್ದೇವೆ. ಕಡು ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿ ಮುಂದುವರಿದಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ವಲಯದಲ್ಲಿಯೂ ನಮ್ಮ ಕಳಕಳಿ, ಕಾರ್ಯಕ್ರಮಗಳ ರೂಪು ತಳೆದು ದಮನಿತರ ಬದುಕು ಹಸನುಗೊಳಿಸಲು ಮುಂದಾಗಿದೆ. ನಮ್ಮ ಮಿತ್ರ ಪಕ್ಷ ತನ್ನ ಆಡಳಿತಾವಧಿಯಲ್ಲಿ ಜಾರಿಗೊಳಿಸಿರುವ ಮಹತ್ವಾಕಾಂಕ್ಷಿ ಹಾಗೂ ಜನಪ್ರಿಯ ಯೋಜನೆಗಳನ್ನೂ ಸಹ ಮುಂದುವರೆಸಿಕೊಂಡು ಜನಪರ ಆಡಳಿತದ ಹೊಸ ಮಾದರಿ ಸೃಷ್ಟಿಸುವತ್ತ ಮುನ್ನಡೆದಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರಕೃತಿ ಮಾತೆಯ ಮುನಿಸಿನಿಂದ ನಾಡು ಪ್ರವಾಹ, ಭೂಕುಸಿತ ಹಾಗೂ ತೀವ್ರ ಬರದಂತಹ ವೈರುಧ್ಯವನ್ನು ಈ ವರ್ಷ ರಾಜ್ಯ ಎದುರಿಸಿದೆ. ಈ ಪರಿಸ್ಥಿತಿಯನ್ನು ನಮ್ಮ ಸರ್ಕಾರ, ಕೇಂದ್ರ – ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ ನೆರವಿನೊಂದಿಗೆ ಯಶಸ್ವಿಯಾಗಿ ನಿರ್ವಹಿಸಿದೆ. ಕಳೆದ ಎರಡು ತಿಂಗಳಿನಿಂದ ಚುನಾವಣಾ ನೀತಿ ಸಂಹಿತೆ ಘೋಷಣೆಯಾದ ನಂತರವೂ ಅಧಿಕಾರಿಗಳು ಬರ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
ಈ ನಿಟ್ಟಿನಲ್ಲಿ ನಮ್ಮ ಸರ್ಕಾರವನ್ನು ಬೆಂಬಲಿಸಿ ಸಹಕರಿಸಿದ ನಾಡಿನ ಜನತೆಗೆ, ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ, ನನ್ನ ಮಾರ್ಗದರ್ಶಕರೂ ಆದ ನನ್ನ ತಂದೆ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ, ಎಲ್ಲ ಜನಪ್ರತಿನಿಧಿಗಳಿಗೆ ಹಾಗೂ ಎಲ್ಲ ಅಧಿಕಾರಿ ವೃಂದದವರಿಗೆ ಸಿಎಂ ಕುಮಾರಸ್ವಾಮಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.