ETV Bharat / state

ಗಗನಕ್ಕೇರಿದ್ದ ಈರುಳ್ಳಿ ಬೆಲೆ ಕುಸಿತ: ರಫ್ತು ನಿಷೇಧ ಹಿಂಪಡೆಯವಂತೆ ವರ್ತಕರ ಆಗ್ರಹ - Onion Export

ಎರಡು ತಿಂಗಳ ಹಿಂದೆ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಇದೀಗ 20 ರೂಪಾಯಿಗೆ ಕುಸಿದಿದೆ. ಹಾಗಾಗಿ ಈರುಳ್ಳಿ ರಫ್ತನ್ನು ನಿಷೇಧಿಸಿರುವುದನ್ನ ಹಿಂಪಡೆದರೆ ರೈತರಿಗೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

Onion price decreased
ಇಪ್ಪತ್ತಕ್ಕೆ ಇಳಿದ ಈರುಳ್ಳಿ
author img

By

Published : Feb 5, 2020, 3:45 PM IST

ಬೆಂಗಳೂರು: ಡಿಸೆಂಬರ್ ತಿಂಗಳಿನಲ್ಲಿ ಗಗನಕ್ಕೇರಿದ್ದ ಈರುಳ್ಳಿ ಬೆಲೆ, ಈಗ ಮತ್ತೆ ಕೆ.ಜಿ.ಗೆ ಇಪ್ಪತ್ತು ರೂಪಾಯಿ ಆಗಿದೆ. ರೈತರ ಎರಡನೇ ಬೆಳೆ ಮಾರುಕಟ್ಟೆಗೆ ಬಂದಿರುವುದರಿಂದ ಈರುಳ್ಳಿ ಬೆಲೆ ಕಡಿಮೆಯಾಗಿದ್ದು, ಈ ನಡುವೆ ಕೇಂದ್ರ ಸರ್ಕಾರ ನಮ್ಮ ದೇಶದ ಈರುಳ್ಳಿ ರಫ್ತನ್ನು ನಿಷೇಧ ಮಾಡಿರುವುದರಿಂದ ರೈತರಿಗೆ ಅನಾನುಕೂಲವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಬಗ್ಗೆ ಈಟಿವಿ ಭಾರತ ಜೊತೆ ಮಾತನಾಡಿರುವ ಎಪಿಎಂಸಿ ಈರುಳ್ಳಿ ವರ್ತಕರ ಸಂಘದ ಅಧ್ಯಕ್ಷ ಲೋಕೇಶ್, ಸದ್ಯಕ್ಕೆ ಮಹಾರಾಷ್ಟ್ರ ರಾಜ್ಯದ ಸೋಲಾಪುರ್, ನಾಸಿಕ್, ಅಹ್ಮದ್ ನಗರ್ ಹಾಗೂ ರಾಜ್ಯದ ವಿಜಯಪುರ ಜಿಲ್ಲೆಯಿಂದ ಈರುಳ್ಳಿಯ ಎರಡನೇ ಬೆಳೆ ಬರುತ್ತಿದೆ. ಇದರಿಂದ ಈರುಳ್ಳಿ ಬೆಲೆ ಕಡಿಮೆಯಾಗಿದೆ. ಅಲ್ಲದೆ ಕೇಂದ್ರ ಸರ್ಕಾರ ರಫ್ತು ರದ್ದು ಮಾಡಿರುವುದರಿಂದ ಈರುಳ್ಳಿ ಬೆಲೆಯಲ್ಲಿ ಇಳಿಕೆ ಕಂಡಿದೆ. ಕೇಂದ್ರ ಸರ್ಕಾರ ರೈತರಿಗಾಗುವ ನಷ್ಟ ತಡೆಯಲು ರಫ್ತು ಆರಂಭಿಸಿದರೆ ಒಳಿತು. ಹೀಗಾಗಿ ರೈತರ ರಕ್ಷಣೆಗಾಗಿ ರಫ್ತನ್ನು ಕೂಡಲೇ ಪುನಾರಂಭಿಸಬೇಕೆಂದು ಒತ್ತಾಯಿಸಿದರು.

20 ರೂಪಾಯಿಗೆ ಇಳಿದ ಈರುಳ್ಳಿ ಬೆಲೆ: ರಫ್ತು ನಿಷೇಧ ತೆರವಿಗೆ ವರ್ತಕರ ಒತ್ತಾಯ

ಇನ್ನು, ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿಯನ್ನು ಕೆ.ಜಿಗೆ 20 ರಿಂದ 30 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ರೈತರಿಗೂ ಅನಾನುಕೂಲವಾಗುತ್ತಿದೆ. ಸಾರಿಗೆ ವೆಚ್ಚ, ಕೂಲಿ ವೆಚ್ಚಗಳು ಹೆಚ್ಚಾಗಿರುವುದರಿಂದ ರೈತರಿಗೆ ಈ ಬೆಲೆಯಿಂದ ನಷ್ಟ ಉಂಟುಮಾಡುತ್ತಿದೆ. ರಫ್ತು ಆರಂಭಿಸುವುದರಿಂದ ಕೆ.ಜಿಗೆ 40-50 ರೂ. ಸಿಕ್ಕರೆ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಎಪಿಎಂಸಿಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಕ್ವಿಂಟಾಲ್ ಗೆ 2600-2700 ರೂ, ಮಧ್ಯಮ ಗಾತ್ರದ ಈರುಳ್ಳಿ 2000-2300 ರೂ, ಸಣ್ಣ ಈರುಳ್ಳಿ 400-600 ರೂಪಾಯಿಗೆ ಮಾರಾಟವಾಗುತ್ತಿದೆ. ಮಾರುಕಟ್ಟೆಯಲ್ಲಿ ಗ್ರಾಹಕರಿಗೆ 30-40 ರೂಪಾಯಿಗೆ ಕೆ.ಜಿ ಈರುಳ್ಳಿ ದೊರೆಯುತ್ತಿದ್ದು, ಈ ತಿಂಗಳಾಂತ್ಯಕ್ಕೆ 10-20 ರೂಪಾಯಿಗೆ ಈರುಳ್ಳಿ ಬೆಲೆ ಇಳಿಕೆಯಾಗಲಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ಲೋಕೇಶ್​ ಹೇಳಿದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.