ಬೆಂಗಳೂರು: ಸರ್ಕಾರಿ ನೌಕರರಿಗೆ ಪ್ರತಿ ವರ್ಷ ನೀಡಲಾಗುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಸಕ್ತ ಸಾಲಿನ ರಾಜ್ಯ ಮಟ್ಟ, ಇಲಾಖಾ ಮಟ್ಟ ಮತ್ತು ಜಿಲ್ಲಾ ಮಟ್ಟದ ವಿಭಾಗದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನೌಕರರು ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು.
ಜಿಲ್ಲಾ ಮಟ್ಟದ 300 ಪ್ರಶಸ್ತಿಗಳಿಗೆ 10 ಸಾವಿರ ರೂ.ನಗದು, ಇಲಾಖಾವಾರು 30 ಪ್ರಶಸ್ತಿಗೆ 15 ಸಾವಿರ ರೂ. ಹಾಗೂ ರಾಜ್ಯ ಮಟ್ಟದ 10 ಪ್ರಶಸ್ತಿಗಳಿಗೆ 25 ಸಾವಿರ ರೂ. ನಗದು ಬಹುಮಾನವನ್ನು ನೀಡಲಾಗುತ್ತದೆ.
ನಾಮ ನಿರ್ದೇಶನ ಬಯಸುವವರು ಮೂರು ಹಂತದ ಪ್ರಶಸ್ತಿಗಳಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ https://dparar.karnataka.gov.in ಅಥವಾ https://sarvothamaawardskarnataka.gov.in ಮೂಲಕ ಅಕ್ಟೋಬರ್ 31ರೊಳಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.