ಬೆಂಗಳೂರು: ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರೋಗವನ್ನು ತಡೆಗಟ್ಟಲು ಸರ್ಕಾರದ ಆದೇಶದಂತೆ 14 ದಿನಗಳ ಕಾಲ ಕೊರೊನಾ ಕರ್ಫ್ಯೂ ಘೋಷಣೆ ಮಾಡಲಾಗಿದೆ.
ಈ ಸಂಬಂಧ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಯಂತೆ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಅನುದಾನಿತ ಎಲ್ಲಾ ಪದವಿ, ಸ್ನಾತಕೋತ್ತರ, ಬಿಇಡಿ, ಕಾನೂನು ಕಾಲೇಜು ಸೇರಿದಂತೆ ಸಂಸ್ಕೃತ, ಚಿತ್ರಕಲಾ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧ್ಯಾಪಕರುಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಾಠ ಪ್ರವಚನಗಳನ್ನು ಆನ್‌ಲೈನ್ ಮುಖಾಂತರ ಮನೆಯಿಂದಲೇ (Work from home) ನಿರ್ವಹಿಸಲು ತಿಳಿಸಲಾಗಿದೆ.
ಮುಂದುವರಿದು, ಅವಶ್ಯಕತೆಗೆ ಅನುಗುಣವಾಗಿ ಕಾಲೇಜಿನ ಪ್ರಾಂಶುಪಾಲರ ಆದೇಶಕ್ಕನುಗುಣವಾಗಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾಲೇಜಿಗೆ ಬಂದು ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.