ಬೆಂಗಳೂರು : ನಿನ್ನೆ ನಡೆದ ಆರ್ಸಿಬಿ ಮತ್ತು ಹೈದರಾಬಾದ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅರುಣ್ ಜೈನ್ ಹಾಗೂ ನವೀನ್ ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರೂ ಆರ್ಸಿಬಿ ಮತ್ತು ಹೈದರಾಬಾದ್ ನಡುವಿನ ಪಂದ್ಯಕ್ಕೆ ಲಕ್ಷ-ಲಕ್ಷ ಹಣವಿಟ್ಟು ಬೆಟ್ಟಿಂಗ್ ನಡೆಸುತ್ತಿದ್ದರು.
ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಆನ್ಲೈನ್ ಮೂಲಕ ಎಲ್ಲಾ ಪಂದ್ಯಗಳಿಗೂ ಬೆಟ್ಟಿಂಗ್ ಕಟ್ಟಿಸಿಕೊಂಡು ಕಮೀಷನ್ ಪಡೆಯುತ್ತಿದ್ದರು.
ಇಬ್ಬರು ಆರೋಪಿಗಳಿಂದ ₹10 ಲಕ್ಷ ನಗದು ಮತ್ತು ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸದ್ಯ ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.