ETV Bharat / state

Online Gambling: ಸರ್ಕಾರದ ಧೋರಣೆಗೆ ಹೈಕೋರ್ಟ್ ಖಂಡನೆ

ರಾಜ್ಯದಲ್ಲಿ ಆನ್​ಲೈನ್​ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ದಾವಣಗೆರೆ ನಿವಾಸಿ ಡಿ. ಆರ್ ಶಾರದಾ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ. ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

high-court
ಹೈಕೋರ್ಟ್
author img

By

Published : Jun 29, 2021, 10:35 PM IST

ಬೆಂಗಳೂರು: ರಾಜ್ಯದಲ್ಲಿ ಆನ್​ಲೈನ್​ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧಿಸುವ ಕುರಿತು ಸ್ಪಷ್ಟ ನಿಲುವು ತಿಳಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಈ ಕುರಿತು ಒಂದು ವಾರದಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತಾಕೀತು ಮಾಡಿದೆ.

ರಾಜ್ಯದಲ್ಲಿ ಆನ್​ಲೈನ್​ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ದಾವಣಗೆರೆ ನಿವಾಸಿ ಡಿ. ಆರ್ ಶಾರದಾ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ. ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ, ಸರ್ಕಾರದ ಪರ ವಕೀಲರು, ಆನ್​ಲೈನ್​ ಗ್ಯಾಂಬ್ಲಿಂಗ್ ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಂಬಂಧ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದೆ. ಅಂತಿಮ ನಿರ್ಧಾರ ಕೈಗೊಳ್ಳಲು ಎರಡು ವಾರ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು.

ಇದಕ್ಕೆ ತೀವ್ರ ಆಕ್ಷೇಪಿಸಿದ ಪೀಠ, ಆನ್​ಲೈನ್​ ಗ್ಯಾಂಬ್ಲಿಂಗ್ ಮತ್ತು ಬೆಟ್ಟಿಂಗ್ ನಿಷೇಧಿಸುವ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ. ಇಷ್ಟೊಂದು ಹಿಂಜರಿಕೆ ಯಾಕೆ? ಕಳೆದ ನಾಲ್ಕು ನಾವೂ ಪ್ರತಿಕ್ರಿಯೆ ಕೇಳುತ್ತಲೇ ಇದ್ದೇವೆ, ಸರ್ಕಾರವೂ ಕಾಲಾವಕಾಶ ಕೇಳುತ್ತಲೇ ಇದೆ. ಈವರೆಗೂ ಯಾವುದೇ ನಿರ್ಧಾರ ಕೈಗೊಳ್ಳದ ಸರ್ಕಾರ ಈಗ ಮತ್ತೆ ಕಾಲಾವಕಾಶ ಕೇಳುತ್ತಿದೆ. ಇಂತಹ ಧೋರಣೆ ಸೂಕ್ತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಅಲ್ಲದೇ, ಆನ್​ಲೈನ್​ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ನಿಷೇಧಿಸುವ ಸಂಬಂಧ ಸ್ಪಷ್ಟ ನಿಲುವು ತಿಳಿಸುವಂತೆ 2021ರ ಫೆಬ್ರವರಿ 16ರಂದು ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದೆ. ಅಂದಿನಿಂದ ಈವರೆಗೆ ಸರ್ಕಾರದ ಯಾವುದೇ ನಿರ್ಧಾರ ತಿಳಿಸಿಲ್ಲ. ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ಹೇಳಿದ್ದರೂ, ನಿರ್ಣಯವನ್ನು ನ್ಯಾಯಾಲಯದ ಮುಂದಿಟ್ಟಿಲ್ಲ.

ಅರ್ಜಿಗೆ ಆಕ್ಷೇಪಣೆಯನ್ನೂ ಸಲ್ಲಿಸಿಲ್ಲ. ಸಾಕಷ್ಟು ಬಾರಿ ಹೇಳಿದರೂ, ನ್ಯಾಯಾಲಯದ ನಿರ್ದೇಶನ ಪಾಲಿಸಿಲ್ಲ. ಹೀಗಾಗಿ, ವಿಳಂಬ ಮಾಡುತ್ತಿದ್ದೇಕೆ? ಎಂಬುದರ ಜೊತೆಗೆ ಪ್ರಕರಣದ ಕುರಿತು ಸರ್ಕಾರದ ನಿಲುವು ಏನೆಂಬುದನ್ನು ಒಂದು ವಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಮಾಣಪತ್ರದ ಮೂಲಕ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 8ಕ್ಕೆ ಮುಂದೂಡಿತು.

ಓದಿ: ಶಾಲಾ ಶುಲ್ಕ ವಿವಾದ : ಮಧ್ಯಂತರ ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.