ETV Bharat / state

ಪರಿಹಾರ ಪ್ಯಾಕೇಜ್‌ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಅತಿಥಿ ಉಪನ್ಯಾಸಕರಿಂದ ಆನ್​ಲೈನ್ ಪ್ರತಿಭಟನೆ

author img

By

Published : Jun 1, 2021, 7:21 AM IST

ಕೊರೊನಾ, ಲಾಕ್​ಡೌನ್​​ನಿಂದ ಸಂಕಷ್ಟಕ್ಕೊಳಗಾಗಿರುವ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಜೂನ್ 3 ರಂದು ರಾಜ್ಯವ್ಯಾಪಿ ಆನ್​​ಲೈನ್ ಪ್ರತಿಭಟನೆಯನ್ನು ನಡೆಸುತ್ತಿದ್ದೇವೆ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ಸಂಚಾಲಕ ಸಿದ್ಧಲಿಂಗ ಬಾಗೇವಾಡಿ‌ ತಿಳಿಸಿದ್ದಾರೆ.

siddalinga bagevadi
ಸಿದ್ಧಲಿಂಗ ಬಾಗೇವಾಡಿ‌

ಬೆಂಗಳೂರು: ಕೋವಿಡ್ 2ನೇ ಅಲೆ ಹಾಗೂ ಲಾಕ್​ಡೌನ್‌ನಿಂದಾಗಿ ಜನರು ಜೀವನ ನಿರ್ವಹಣೆಗೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಇತ್ತ ಶಾಲಾ-ಕಾಲೇಜು ಆರಂಭವಾಗದ ಕಾರಣಕ್ಕೆ ಶಿಕ್ಷಕರು, ಉಪನ್ಯಾಸಕರು ಇಕ್ಕಟ್ಟಿಗೆ ಸಿಲುಕುವಂತಾಗಿದೆ. ರಾಜ್ಯದ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ 14,447 ಅತಿಥಿ ಉಪನ್ಯಾಸಕರ ಜೀವನವೂ ಅತಂತ್ರವಾಗಿದ್ದು, ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ಸಂಚಾಲಕ ಸಿದ್ಧಲಿಂಗ ಬಾಗೇವಾಡಿ‌

ಒಂದೆಡೆ ಉನ್ನತ ಶಿಕ್ಷಣ ಇಲಾಖೆ ಆನ್​ಲೈನ್ ತರಗತಿಗಳಿಗೂ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಹೇಳಿದ್ದರೂ ಕೂಡ ಅದು ಕಾರ್ಯರೂಪಕ್ಕೆ ಬರುತ್ತಿಲ್ಲ. ಹಲವು ಬಾರಿ ಹೋರಾಟ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಕೊರೊನಾ ಅವಧಿಯ ಪರಿಹಾರ ಪ್ಯಾಕೇಜ್ ಘೋಷಿಸಿಲ್ಲ. ಕೊರೊನಾದಿಂದ ಮೃತಪಟ್ಟ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನಿಧಿ ಒದಗಿಸಿಲ್ಲ.

ಅತಿಥಿ ಉಪನ್ಯಾಸಕರಿಗೆ ಈವರೆಗೂ ಯಾವುದೇ ರೀತಿಯ ಸೇವಾ ಭದ್ರತೆ ಖಾತ್ರಿಪಡಿಸಿಲ್ಲ. ಇದು ಸರ್ಕಾರದ ಅತ್ಯಂತ ನಿರ್ಲಕ್ಷ್ಯ ಧೋರಣೆಯಾಗಿದೆ. ಇದರಿಂದಾಗಿ ಕುಟುಂಬಗಳು ಬೀದಿಗೆ ಬರುವಂತಾಗಿದೆ. ಹೀಗಾಗಿ, ಸರ್ಕಾರದ ಗಮನ ಸೆಳೆಯಲು ಜೂನ್ 3 ರಂದು ರಾಜ್ಯವ್ಯಾಪಿ ಆನ್​​ಲೈನ್ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ಸಂಚಾಲಕ ಸಿದ್ಧಲಿಂಗ ಬಾಗೇವಾಡಿ‌ ತಿಳಿಸಿದ್ದಾರೆ.

ಬೇಡಿಕೆಗಳೇನು?

1) ಕೊರೊನಾ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕು.

2) ಕೊರೊನಾದಿಂದ ಮೃತಪಟ್ಟ ಅತಿಥಿ ಉಪನ್ಯಾಸಕರಿಗೆ ಸೂಕ್ತ ಪರಿಹಾರ ಒದಗಿಸಬೇಕು.

3) ಈಗ ನಡೆಯುತ್ತಿರುವ ಆನ್​​ಲೈನ್​​ ತರಗತಿಗಳಿಗೆ ಈ ಹಿಂದೆ ನೇಮಿಸಿದ್ದ ಎಲ್ಲ ಉಪನ್ಯಾಸಕರನ್ನೂ ನಿಯೋಜಿಸಬೇಕು.

4) ಅತಿಥಿ ಉಪನ್ಯಾಸಕರ ಸೇವಾಭದ್ರತೆ ಖಾತ್ರಿಪಡಿಸಬೇಕು.

ಇದನ್ನೂ ಓದಿ: ಬಿಡಿಎ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಪಿಐಎಲ್ : ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.