ETV Bharat / state

ಗಮನಿಸಿ: ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಸ್ಥಗಿತ, ಸರ್ಕಾರಿ ವೈದ್ಯರ ರಜೆ ರದ್ದು - ಆಸ್ಪತ್ರೆಗಳಲ್ಲಿನ ಒಪಿಡಿ ಸೇವೆ ಸ್ಥಗಿತ

ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿರುವುದನ್ನು ಖಂಡಿಸಿ ವೈದ್ಯರು ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯದೆಲ್ಲೆಡೆ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸ್ಥಗಿತಗೊಳ್ಳಲಿದೆ.

ಸರ್ಕಾರಿ ವೈದ್ಯರ ರಜೆ ರದ್ದು
author img

By

Published : Nov 7, 2019, 8:51 PM IST

ಬೆಂಗಳೂರು: ವೈದ್ಯರ ಮುಷ್ಕರ ದಿನ ಕಳೆದಂತೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿನ ಒಪಿಡಿ ಸೇವೆ ಸ್ಥಗಿತಗೊಳ್ಳಲಿದೆ.

ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿರುವುದನ್ನು ಖಂಡಿಸಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಇದೀಗ ವೈದ್ಯರ ಮುಷ್ಕರ ಗಂಭೀರ ಸ್ವರೂಪ ತಾಳಿದ್ದು ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಯ ಹೊರ ರೋಗಿಗಳ ವಿಭಾಗದ ಸೇವೆ ಇರುವುದಿಲ್ಲ ಎಂದು ಭಾರತೀಯ ವೈದ್ಯ ಸಂಘ ಹೇಳಿದೆ.

ಬೆಳಗ್ಗೆ 6 ಗಂಟೆಯಿಂದ ನ.9ರ ಬೆಳಗ್ಗೆ 6 ಗಂಟೆವರೆಗೆ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಭಾರತೀಯ ವೈದ್ಯ ಸಂಘ ಕರೆ ನೀಡಿದೆ.

ಸರ್ಕಾರಿ ವೈದ್ಯರಿಗೆ ರಜೆ ಇಲ್ಲ:

ಮುಷ್ಕರ ಹಿನ್ನೆಲೆ‌ ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಸ್ಥಗಿತಗೊಳ್ಳುವ ಕಾರಣ ಸರ್ಕಾರಿ ಆಸ್ಪತ್ರೆಗಳ ವೈದ್ಯರುಗಳು‌ ಹಾಗು ಸಿಬ್ಬಂದಿಗೆ ರಜೆ ಮಂಜೂರು ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತಾಲಯ ಆದೇಶ ಹೊರಡಿಸಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವುದು ಕಡ್ಡಾಯವಾಗಿದೆ‌. ವೈದ್ಯಕೀಯ ಸೇವೆಗಳಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗದಂತೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

Intro:Body:KN_BNG_05_PVTHOSPITALS_NOOPD_SCRIPT_7201951

ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಸ್ಥಗಿತ; ಸರ್ಕಾರಿ ವೈದ್ಯರ ರಜೆ ರದ್ದು!

ಬೆಂಗಳೂರು: ವೈದ್ಯರ ಮುಷ್ಕರ ದಿನಗಳೆದಂತೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿನ ಒಪಿಡಿ ಸೇವೆ ಸ್ಥಗಿತಗೊಳ್ಳಲಿದೆ.

ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿರುವುದನ್ನು ಖಂಡಿಸಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಇದೀಗ ವೈದ್ಯರ ಮುಷ್ಕರ ಗಂಭೀರ ಸ್ವರೂಪ ಪಡೆದಿದ್ದು, ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಯ ಹೊರ ರೋಗಿ ವಿಭಾಗದ ಸೇವೆ ಸ್ಥಗಿತಗೊಳ್ಳಲಿದೆ. ಈ ನಿಟ್ಟಿನಲ್ಲಿ ಭಾರತೀಯ ವೈದ್ಯ ಸಂಘ ಕರೆ ನೀಡಿದೆ.

ಹೀಗಾಗಿ ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಇರುವುದಿಲ್ಲ. ನಾಳೆ ಬೆಳಗ್ಗೆ 6 ಗಂಟೆಯಿಂದ ನ.9ರ ಬೆಳಗ್ಗೆ 6 ಗಂಟೆವರೆಗೆ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಭಾರತೀಯ ವೈದ್ಯ ಸಂಘ ಕರೆ ನೀಡಿದೆ.

ಸರ್ಕಾರಿ ವೈದ್ಯರುಗಳಿಗೆ ರಜೆ ಇಲ್ಲ:

ಮುಷ್ಕರ ಹಿನ್ನೆಲೆ‌ ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಸ್ಥಗಿತಗೊಳ್ಳುವ ಕಾರಣ ನಾಳೆ‌ ಸರ್ಕಾರಿ ಆಸ್ಪತ್ರೆಗಳ ವೈದ್ಯರುಗಳು‌ ಹಾಗು ಸಿಬ್ಬಂದಿಗೆ ರಜೆ ಮಂಜೂರು ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತಾಲಯ ಆದೇಶ ಹೊರಡಿಸಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವುದು ಕಡ್ಡಾಯವಾಗಿದೆ‌. ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯಕೀಯ ಸೇವೆಗಳಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.