ಬೆಂಗಳೂರು: ಇಲ್ಲಿನ ಐಐಎಸ್ಸಿ (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್) ಫೆಬ್ರವರಿ 29ರಂದು ಮುಕ್ತ ದಿನದ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಪ್ರವೇಶ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದೆ.
ಬೆಳಿಗ್ಗೆ 9 ರಿಂದ ಸಂಜೆ 5.30ರವರೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ನೀಡಿದ್ದು, ವಿಜ್ಞಾನಕ್ಕೆ ಸಂಬಂಧಿಸಿದ ಪ್ರದರ್ಶನ, ಅನ್ವೇಷಣೆಗಳು ಹಾಗು ವಿಜ್ಞಾನ ವಿಷಯಾಧಾರಿತ ಉಪನ್ಯಾಸಗಳಿಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ.
ಮುಕ್ತ ದಿನದಂದು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರ ಜೊತೆ ಹಿರಿಯ ನಾಗರಿಕರಿಗೂ ಅವಕಾಶ ನೀಡಲಾಗಿದೆ.