ETV Bharat / state

ಮತ್ತೆ ಶುರುವಾದ ಪಾಲಿಕೆಯ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ - ETv Bharat Kannada news

ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತೆ ಶುರು ಮಾಡಿದೆ.

Rajkaluve encroachment clearance operation
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ
author img

By

Published : Dec 22, 2022, 7:57 PM IST

Updated : Dec 22, 2022, 8:26 PM IST

ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತೆ ಶುರುಮಾಡಿದೆ. ಇಂದು ಮುನ್ನೇನಕೊಳಲು, ಶಾಂತಿನಿಕೇತನ ಲೇಔಟ್ ಹಾಗೂ ಎಬಿಕೆ ಹಳ್ಳಿಯಲ್ಲಿ 6 ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಮುನ್ನೇನಕೊಳಲು ಹಾಗೂ ಶಾಂತಿನಿಕೇತನ ಲೇಔಟ್​ನಲ್ಲಿ 30X40 ಅಡಿ ಸ್ಥಳದಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 2 ಕಟ್ಟಡ(G + 1 ಕಟ್ಟಡಗಳು)ವನ್ನು ನೆಲಸಮಗೊಳಿಸಲಾಗಿದೆ. ಇದೇ ಸ್ಥಳದಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 2 ಶೆಡ್ ಗಳನ್ನು ಕೂಡಾ ತೆರವುಗೊಳಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ. ಮುಂದುವರಿದು ಅಮಾನಿ ಬೆಳ್ಳಂದೂರು ಖಾನೆ(ಎಬಿಕೆ) ಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆ ಮಾರ್ಗದಲ್ಲಿ ನಿರ್ಮಿಸಿದ್ದ 1 ಶೆಡ್ ಹಾಗೂ ಸುಮಾರು 60 ಮೀಟರ್ ಉದ್ದದ ಕಾಂಪೌಂಡ್ ಅನ್ನು ಬೀಳಿಸಲಾಗಿದೆ ಎಂದು ಹೇಳಿದ್ದಾರೆ.

ನೋಟಿಸ್ ಜಾರಿ ನಂತರ ಮತ್ತೆ ತೆರವು: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರರು ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ ನಂತರ ಬಾಕಿ ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ತಿಳಿಸಿದ್ದಾರೆ.

ಬಿಬಿಎಂಪಿ ಮಹದೇವಪುರ ವ್ಯಾಪ್ತಿಯಲ್ಲಿ 2015-16ರಿಂದ ಇದುವರೆಗೆ ಒಟ್ಟಾರೆ 1174 ರಾಜಕಾಲುವೆ ಒತ್ತುವರಿಗಳನ್ನು ಗುರುತಿಸಲಾಗಿದೆ. ಈ ಪೈಕಿ 1032 ಒತ್ತುವರಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದ್ದು, 142 ಒತ್ತುವರಿಗಳನ್ನು ತೆರವುಗೊಳಿಸಬೇಕಾಗಿದೆ. ಈ ಪೈಕಿ 11 ಪ್ರಕರಣಗಳು ನ್ಯಾಯಾಲಯಕ್ಕೆ ಸಂಬಂಧಿಸಿದ್ದಾಗಿವೆ. ಇನ್ನು 131 ಒತ್ತುವರಿಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸರ್ವೇ ಕಾರ್ಯವನ್ನು ನಡೆಸುತ್ತಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಪೆಟ್ರೋಲ್​ ಸುರಿದುಕೊಂಡು ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ದಂಪತಿ ವಿರುದ್ಧ ಎಫ್ಐಆರ್

Last Updated : Dec 22, 2022, 8:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.