ETV Bharat / state

ನಾರಾಯಣ ನೇತ್ರಾಲಯದ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾಕ್ಟರ್ ಭುಜಂಗ ಶೆಟ್ಟಿ ವಿಧಿವಶ - ಡಾಕ್ಟರ್ ಭುಜಂಗ ಶೆಟ್ಟಿ

ಖ್ಯಾತ ನೇತ್ರ ತಜ್ಞ ಡಾಕ್ಟರ್ ಭುಜಂಗ ಶೆಟ್ಟಿ ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Dr. Bhujanga Shetty
ಡಾಕ್ಟರ್ ಭುಜಂಗ ಶೆಟ್ಟಿ
author img

By

Published : May 20, 2023, 6:41 AM IST

Updated : May 20, 2023, 9:58 AM IST

ಬೆಂಗಳೂರು: ನಾರಾಯಣ ನೇತ್ರಾಯಲಯದ ಮುಖ್ಯಸ್ಥ ಖ್ಯಾತ ನೇತ್ರ ತಜ್ಞ ಡಾಕ್ಟರ್ ಭುಜಂಗ ಶೆಟ್ಟಿ (69) ಶುಕ್ರವಾರ ನಿಧನರಾದರು. ಎಂದಿನಂತೆ ರೋಗಿಗಳನ್ನು ನೋಡಿ ಶುಕ್ರವಾರ ಸಂಜೆ ಮನೆಗೆ ತೆರಳಿದ್ದ ಅವರಿಗೆ ತೀವ್ರ ಹೃದಯಾಘಾತ ಉಂಟಾಗಿದೆ. ತಕ್ಷಣ ಅವರನ್ನು ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.

1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದಿದ್ದ ಅವರು 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮೀಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದ ರೆಸಿಡೆನ್ಸಿ ಮಾಡಿದರು. 80 ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ಪ್ರಾರಂಭಿಸಿ ತದ ನಂತರ ಕರ್ನಾಟಕದ ಅತಿದೊಡ್ಡ ನಾರಾಯಣ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಸ್ಥಾಪಿಸಿದರು. ಅವರು ತಜ್ಞ ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿದ್ದರು.

  • ನಾರಾಯಣ ನೇತ್ರಾಲಯದ ಖ್ಯಾತ ನೇತ್ರತಜ್ಞರಾದ ಡಾ. ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಆಘಾತವುಂಟುಮಾಡಿದೆ.

    ಭುಜಂಗ ಶೆಟ್ಟಿಯವರು ಲಕ್ಷಾಂತರ ಜನರಿಗೆ ದೃಷ್ಟಿ ಸಾಮರ್ಥ್ಯ ನೀಡುವ ಮೂಲಕ ಅವರ ಕುಟುಂಬಗಳಿಗೆ ಬೆಳಕಾದವರು.

    ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/wWslWEy2Gd

    — Siddaramaiah (@siddaramaiah) May 19, 2023 " class="align-text-top noRightClick twitterSection" data=" ">

ಸಂತಾಪ ಸೂಚಿಸಿದ ನಿಯೋಜಿತ ಸಿಎಂ ಸಿದ್ದರಾಮಯ್ಯ: ನಾರಾಯಣ ನೇತ್ರಾಲಯದ ಖ್ಯಾತ ನೇತ್ರತಜ್ಞರಾದ ಡಾ. ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಆಘಾತವುಂಟುಮಾಡಿದೆ. ಭುಜಂಗ ಶೆಟ್ಟಿಯವರು ಲಕ್ಷಾಂತರ ಜನರಿಗೆ ದೃಷ್ಟಿ ಸಾಮರ್ಥ್ಯ ನೀಡುವ ಮೂಲಕ ಅವರ ಕುಟುಂಬಗಳಿಗೆ ಬೆಳಕಾದವರು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಟ್ವಿಟ್ಟರ್​ ಖಾತೆಯಲ್ಲಿ ಬರೆದು ಹಾಕಿಕೊಂಡಿದ್ದಾರೆ.

ಭುಜಂಗ ಶೆಟ್ಟಿ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ: ಖ್ಯಾತ ನೇತ್ರತಜ್ಞ ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರ. ರಾಜ್ಯ ಕಂಡ ಶ್ರೇಷ್ಠ ವೈದ್ಯರಲ್ಲಿ ಒಬ್ಬರು. ಜನರಲ್ಲಿ ಆರೋಗ್ಯ ಕುರಿತು ಜಾಗೃತಿ ಮೂಡಿಸುತ್ತ ಬಹಳ ದೂರದೃಷ್ಟಿ ಹೊಂದಿದ್ದ ವೈದ್ಯರಾಗಿದ್ದರು ಎಂದು ಡಿ ಕೆ ಶಿವಕುಮಾರ್​ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿ ಭುಜಂಗ ಶೆಟ್ಟಿ ಅವರು ಈ ಸಂಸ್ಥೆಯನ್ನು ಅತ್ಯುನ್ನತ ಮಟ್ಟಕ್ಕೆ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅತ್ಯಾಧುನಿಕ ತಂತ್ರಜ್ಞಾನ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸಿಕೊಂಡು ಬಂದಿದ್ದವರು. ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆಗೆ 2010 ರಲ್ಲಿ ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಇವರು ಭಾಜನರಾಗಿದ್ದಾರೆ. ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಆತ್ಮೀಯರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.

  • ಖ್ಯಾತ ನೇತ್ರತಜ್ಞ, ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ ಕೆ.ಭುಜಂಗಶೆಟ್ಟಿ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಸಾವಿರಾರು ಜನರಿಗೆ ದೃಷ್ಟಿ ನೀಡಿದ ನುರಿತ ವೈದ್ಯರೊಬ್ಬರನ್ನು ದೇಶ ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ದೇವರು ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ

    — B.S.Yediyurappa (@BSYBJP) May 20, 2023 " class="align-text-top noRightClick twitterSection" data=" ">

ಬಿಜೆಪಿ ನಾಯಕರಿಂದ ಸಂತಾಪ: ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ. ಖ್ಯಾತ ನೇತ್ರತಜ್ಞ, ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ ಕೆ.ಭುಜಂಗಶೆಟ್ಟಿ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಸಾವಿರಾರು ಜನರಿಗೆ ದೃಷ್ಟಿ ನೀಡಿದ ನುರಿತ ವೈದ್ಯರೊಬ್ಬರನ್ನು ದೇಶ ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ದೇವರು ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಇನ್ನು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದ ಅವರು ಜನಾನುರಾಗಿಯಾಗಿದ್ದರು. ಕಣ್ಣಿನ ಶಸ್ತ್ರಚಿಕಿತ್ಸೆ ಮೂಲಕ ಸಾವಿರಾರು ಅಂಧರ ಬಾಳಿಗೆ ಬೆಳಕಾಗಿದ್ದ ಭುಜಂಗ ಶೆಟ್ಟಿ ಅವರ ನಿಧನದಿಂದ ರಾಜ್ಯ ಒಬ್ಬ ಶ್ರೇಷ್ಠ ನೇತ್ರ ತಜ್ಞನನ್ನು ಕಳೆದುಕೊಂಡಂತಾಗಿದೆ. ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

  • ಖ್ಯಾತ ನೇತ್ರ ತಜ್ಞರಾದ ಡಾ. ಭುಜಂಗ ಶೆಟ್ಟಿ ಅವರು ಹೃದಯಾಘಾತದಿಂದ ನಿಧನರಾದ ವಿಷಯ ತಿಳಿದು ಅತ್ಯಂತ‌ ದುಃಖವಾಗಿದೆ‌.

    ಕಣ್ಣಿನ ಶಸ್ತ್ರಚಿಕಿತ್ಸೆ ಮೂಲಕ ಸಾವಿರಾರು ಅಂಧರ ಬಾಳಿಗೆ ಬೆಳಕಾಗಿದ್ದ ಭುಜಂಗ ಶೆಟ್ಟಿ ಅವರ ನಿಧನದಿಂದ ರಾಜ್ಯ ಒಬ್ಬ ನೇತ್ರ ತಜ್ಞನನ್ನು ಕಳೆದುಕೊಂಡಂತಾಗಿದೆ.
    ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಲಿ ಎಂದು… pic.twitter.com/od6cpnGoWD

    — Basavaraj S Bommai (@BSBommai) May 19, 2023 " class="align-text-top noRightClick twitterSection" data=" ">

ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ: ಖ್ಯಾತ ನೇತ್ರ ತಜ್ಞರಾದ ಡಾ. ಭುಜಂಗ ಶೆಟ್ಟಿ ಅವರು ಹೃದಯಾಘಾತದಿಂದ ನಿಧನರಾದ ವಿಷಯ ತಿಳಿದು ಅತ್ಯಂತ‌ ದುಃಖವಾಗಿದೆ‌. ಕಣ್ಣಿನ ಶಸ್ತ್ರಚಿಕಿತ್ಸೆ ಮೂಲಕ ಸಾವಿರಾರು ಅಂಧರ ಬಾಳಿಗೆ ಬೆಳಕಾಗಿದ್ದ ಭುಜಂಗ ಶೆಟ್ಟಿ ಅವರ ನಿಧನದಿಂದ ರಾಜ್ಯ ಒಬ್ಬ ನೇತ್ರ ತಜ್ಞನನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.‌ ಓಂ ಶಾಂತಿ ಎಂದು ಟ್ವೀಟ್​ ಮಾಡಿದ್ದಾರೆ.

  • ಖ್ಯಾತ ನೇತ್ರತಜ್ಞ, ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿದ್ದ ಡಾ.ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ನೇತ್ರದಾನದ ಬಗ್ಗೆ ಜನರಲ್ಲಿ ಅಪಾರ ಅರಿವು ಮೂಡಿಸಿದ್ದ ಅವರು, ಅನೇಕರ ಬಾಳಿಗೆ ಬೆಳಕಾಗಿದ್ದರು.
    ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ. pic.twitter.com/XrAYVaipqp

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 19, 2023 " class="align-text-top noRightClick twitterSection" data=" ">

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತ: ಟ್ವೀಟ್ ಮಾಡಿರುವ ಅವರು, ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ನೇತ್ರದಾನದ ಬಗ್ಗೆ ಜನರಲ್ಲಿ ಅಪಾರ ಅರಿವು ಮೂಡಿಸಿದ್ದ ಅವರು, ಅನೇಕರ ಬಾಳಿಗೆ ಬೆಳಕಾಗಿದ್ದರು ಎಂದಿದ್ದಾರೆ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಎರಡು ಪ್ರತ್ಯೇಕ ಅಪಘಾತ ಪ್ರಕರಣ, ಸ್ಥಳದಲ್ಲೇ ನಾಲ್ವರು ಸಾವು, ಹಲವರಿಗೆ ತೀವ್ರ ಗಾಯ

Last Updated : May 20, 2023, 9:58 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.