ETV Bharat / state

ಕಲಬುರಗಿ-ಧಾರವಾಡ ಹೈಕೋರ್ಟ್ ಪೀಠಗಳಲ್ಲಿ ನೇರ ಅರ್ಜಿ ಸಲ್ಲಿಕೆಗೆ ಅವಕಾಶ

ಲಾಕ್‌ಡೌನ್ ಘೋಷಣೆಯಾದ ಬಳಿಕ ವಕೀಲರು ಖುದ್ದು ಕೋರ್ಟ್‌ಗೆ ತೆರಳಿ ಅರ್ಜಿ ದಾಖಲಿಸುವ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ತುರ್ತು ಅರ್ಜಿಗಳನ್ನು ಇ-ಫೈಲಿಂಗ್ ಮೂಲಕ ದಾಖಲಿಸಲು ಅವಕಾಶ ನೀಡಲಾಗಿತ್ತು. ಕಲಬುರಗಿ ಹಾಗೂ ಧಾರವಾಡ ಹೈಕೋರ್ಟ್ ಪೀಠಗಳಲ್ಲಿ ಹೊಸ ಅರ್ಜಿಗಳನ್ನು ಕೋರ್ಟ್‌ಗೆ ಖುದ್ದು ತೆರಳಿ ಸಲ್ಲಿಸಲು ಅನುಮತಿಸಲಾಗಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : May 19, 2020, 10:44 PM IST

ಬೆಂಗಳೂರು: ಕಲಬುರಗಿ ಹಾಗೂ ಧಾರವಾಡ ಹೈಕೋರ್ಟ್ ಪೀಠಗಳಲ್ಲಿ ಹೊಸ ಅರ್ಜಿಗಳನ್ನು ಕೋರ್ಟ್‌ಗೆ ಖುದ್ದು ತೆರಳಿ ಸಲ್ಲಿಸಲು ಅನುಮತಿ ನೀಡಲಾಗಿದೆ.

ಧಾರವಾಡ ಹಾಗೂ ಕಲಬುರಗಿ ಹೈಕೋರ್ಟ್ ಪೀಠಗಳಲ್ಲಿ ಮೇ 20, 21 ಮತ್ತು 22ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಕೀಲರು, ಅವರ ಗುಮಾಸ್ತರು ಮತ್ತು ಪಾರ್ಟಿ ಇನ್ ಪರ್ಸನ್ಸ್ ಖುದ್ದು ಭೇಟಿ ನೀಡಿ, ಹೊಸ ಅರ್ಜಿಗಳು, ಕೇವಿಯಟ್ ಅರ್ಜಿ, ವಕಾಲತ್ತು ಹಾಗೂ ಮಧ್ಯಂತರ ಅರ್ಜಿಗಳನ್ನು ದಾಖಲಿಸಬಹುದಾಗಿದೆ.

ಅರ್ಜಿಗಳನ್ನು ದಾಖಲಿಸುವವರು ಮೊದಲಿಗೆ ಸಮಯ ನಿಗದಿಗೆ ಕೋರಿ‌ ಇ-ಮೇಲ್ ಕಳುಹಿಸಬೇಕು. ನಂತರ ಯಾವ ದಿನ, ಯಾವ ಸಮಯಕ್ಕೆ ಬಂದು ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಇ-ಮೇಲ್ ಮೂಲಕವೇ ತಿಳಿಸಲಾಗುತ್ತದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಹೊರಡಿಸಿರುವ ನೋಟಿಫಿಕೇಷನ್‌ನಲ್ಲಿ ತಿಳಿಸಲಾಗಿದೆ.

ಲಾಕ್‌ಡೌನ್ ಘೋಷಣೆಯಾದ ಬಳಿಕ ವಕೀಲರು ಖುದ್ದು ಕೋರ್ಟ್‌ಗೆ ತೆರಳಿ ಅರ್ಜಿ ದಾಖಲಿಸುವ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ತುರ್ತು ಅರ್ಜಿಗಳನ್ನು ಇ-ಫೈಲಿಂಗ್ ಮೂಲಕ ದಾಖಲಿಸಲು ಅವಕಾಶ ನೀಡಲಾಗಿತ್ತು. ಮೇ 13ರಿಂದ ಮೂರು ದಿನಗಳ ಕಾಲ ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠದಲ್ಲಿ ಇದೇ ರೀತಿ ನೇರವಾಗಿ ಅರ್ಜಿ ಸಲ್ಲಿಸಲು‌ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೂ ಈ ವ್ಯವಸ್ಥೆ ಒದಗಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.