ಬೆಂಗಳೂರು: ಕಾರ್ಮಿಕ ರಾಜ್ಯ ವಿಮಾ ನಿಗಮವು ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿತ್ತು. ಇದೀಗ ರಾಜ್ಯದಲ್ಲಿ ಹಿಂದಿ ಜೊತೆಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶವಾಗುವಂತೆ ನಿಗಮವು ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ.
ಕಳೆದ ಡಿಸೆಂಬರ್ 27 ರಂದು ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್ ಹಾಗೂ ಮಲ್ಟಿ ಟಾಸ್ಕ್ ಸಿಬ್ಬಂದಿ ಸೇರಿದಂತೆ ಒಟ್ಟು 3865 ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಪ್ರಕಟಿಸಿತ್ತು. ಹುದ್ದೆಗಳಿಗೆ ಮೊದಲು ಬಿಡುಗಡೆ ಮಾಡಲಾದ ಅಧಿಸೂಚನೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಅವಕಾಶ ಇತ್ತು. ಇದರಿಂದ ಕರ್ನಾಟಕದಾದ್ಯಂತ ಉದ್ಯೋಗಾಕಾಂಕ್ಷಿಗಳು, ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಈ ಕುರಿತು ಮಾಧ್ಯಮಗಳು ವರದಿ ಮಾಡಿ ಉದ್ಯೋಗಾಕಾಂಕ್ಷಿಗಳ ಪರ ಕನ್ನಡದಲ್ಲಿ ಪರೀಕ್ಷೆಗೆ ಮನವಿ ಮಾಡಿದ್ದವು. ರಾಜ್ಯದ ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು.
-
ಕಾರ್ಮಿಕರ ರಾಜ್ಯ ವಿಮಾ ನಿಗಮವು ಕಳೆದ ಡಿಸೆಂಬರ್ 27 ರಂದು ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್ ಹಾಗೂ ಮಲ್ಟಿ ಟಾಸ್ಕ್ ಸಿಬ್ಬಂದಿಗಳು ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಪ್ರಕಟಿಸಿತ್ತು. ಈ ಕೆಳಹಂತದ ಹುದ್ದೆಗಳಿಗೆ ಕರ್ನಾಟಕದಲ್ಲಿ ಹಿಂದಿ ಜತೆಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶವಾಗುವಂತೆ
— Pralhad Joshi (@JoshiPralhad) January 20, 2022 " class="align-text-top noRightClick twitterSection" data="
1/3 pic.twitter.com/2l17dHbp6X
">ಕಾರ್ಮಿಕರ ರಾಜ್ಯ ವಿಮಾ ನಿಗಮವು ಕಳೆದ ಡಿಸೆಂಬರ್ 27 ರಂದು ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್ ಹಾಗೂ ಮಲ್ಟಿ ಟಾಸ್ಕ್ ಸಿಬ್ಬಂದಿಗಳು ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಪ್ರಕಟಿಸಿತ್ತು. ಈ ಕೆಳಹಂತದ ಹುದ್ದೆಗಳಿಗೆ ಕರ್ನಾಟಕದಲ್ಲಿ ಹಿಂದಿ ಜತೆಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶವಾಗುವಂತೆ
— Pralhad Joshi (@JoshiPralhad) January 20, 2022
1/3 pic.twitter.com/2l17dHbp6Xಕಾರ್ಮಿಕರ ರಾಜ್ಯ ವಿಮಾ ನಿಗಮವು ಕಳೆದ ಡಿಸೆಂಬರ್ 27 ರಂದು ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್ ಹಾಗೂ ಮಲ್ಟಿ ಟಾಸ್ಕ್ ಸಿಬ್ಬಂದಿಗಳು ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಪ್ರಕಟಿಸಿತ್ತು. ಈ ಕೆಳಹಂತದ ಹುದ್ದೆಗಳಿಗೆ ಕರ್ನಾಟಕದಲ್ಲಿ ಹಿಂದಿ ಜತೆಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶವಾಗುವಂತೆ
— Pralhad Joshi (@JoshiPralhad) January 20, 2022
1/3 pic.twitter.com/2l17dHbp6X
ಇದಕ್ಕೆ ಸ್ಪಂದಿಸಿದ ಕೇಂದ್ರ, ಕನ್ನಡದಲ್ಲಿಯೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಕಾರ್ಮಿಕರ ರಾಜ್ಯ ವಿಮಾ ನಿಗಮವು ತಿದ್ದುಪಡಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾನು ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ರೊಂದಿಗೆ ಚರ್ಚಿಸಿದ್ದೆ. ನಿಗಮವು ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ. ಇದರಿಂದ ಎಂಟಿಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಯಲ್ಲಿ ಭಾಷಾ ಮಾಧ್ಯಮದಲ್ಲಿ ಬದಲಾವಣೆ ಮಾಡಿ ಇತರ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿಂದು 47,754 ಹೊಸ ಕೋವಿಡ್ ಕೇಸ್.. ದಿಢೀರ್ ಹೆಚ್ಚಾಯ್ತು ಮರಣ ಪ್ರಮಾಣ!
ಎಂಟಿಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಯಲ್ಲಿ ಭಾಷಾ ಮಾಧ್ಯಮದಲ್ಲಿ ಬದಲಾವಣೆ ಮಾಡಿ ಆಯಾ ವಲಯಗಳಲ್ಲಿ ಹಿಂದಿ ಜೊತೆಗೆ ಇತರ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ನೀಡಲಾಗಿದೆ ಎಂದು ತಿದ್ದುಪಡಿ ಅಧಿಸೂಚನೆಯಲ್ಲಿ ತಿಳಿಸಿದೆ. ಕರ್ನಾಟಕ ವಲಯದಲ್ಲಿ ಕನ್ನಡ, ಕೊಂಕಣಿ, ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಪರೀಕ್ಷೆ ಬರೆಯಬಹುದು.ಅದೇ ರೀತಿ ಆಯಾ ರಾಜ್ಯದವರು ಅವರವರ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಆದರೆ ಇಂಗ್ಲಿಷ್ ಭಾಷಾ ಗ್ರಹಿಕೆ (ಕಾಂಪ್ರೆಹೆನ್ಷನ್) ಪರೀಕ್ಷೆಯನ್ನು ಇಂಗ್ಲಿಷ್‌ನಲ್ಲಿಯೇ ಬರೆಯಬೇಕಿದೆ.
-
ನಾನು ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ @byadavbjp ಅವರೊಂದಿಗೆ ಚರ್ಚಿಸಿದ್ದೆ.
— Pralhad Joshi (@JoshiPralhad) January 20, 2022 " class="align-text-top noRightClick twitterSection" data="
ಈಗ ನಿಗಮವು ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ. ಇದರಿಂದ ಎಂಟಿಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಯಲ್ಲಿ ಭಾಷಾ ಮಾಧ್ಯಮದಲ್ಲಿ ಬದಲಾವಣೆ ಮಾಡಿ ಇತರ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ನೀಡಲಾಗಿದೆ.
2/3
">ನಾನು ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ @byadavbjp ಅವರೊಂದಿಗೆ ಚರ್ಚಿಸಿದ್ದೆ.
— Pralhad Joshi (@JoshiPralhad) January 20, 2022
ಈಗ ನಿಗಮವು ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ. ಇದರಿಂದ ಎಂಟಿಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಯಲ್ಲಿ ಭಾಷಾ ಮಾಧ್ಯಮದಲ್ಲಿ ಬದಲಾವಣೆ ಮಾಡಿ ಇತರ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ನೀಡಲಾಗಿದೆ.
2/3ನಾನು ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ @byadavbjp ಅವರೊಂದಿಗೆ ಚರ್ಚಿಸಿದ್ದೆ.
— Pralhad Joshi (@JoshiPralhad) January 20, 2022
ಈಗ ನಿಗಮವು ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ. ಇದರಿಂದ ಎಂಟಿಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಯಲ್ಲಿ ಭಾಷಾ ಮಾಧ್ಯಮದಲ್ಲಿ ಬದಲಾವಣೆ ಮಾಡಿ ಇತರ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ನೀಡಲಾಗಿದೆ.
2/3
ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಟ್ವೀಟ್ ಮಾಡಿದ್ದು, ಕಾರ್ಮಿಕರ ರಾಜ್ಯ ವಿಮಾ ನಿಗಮದ ಹುದ್ದೆಗಳಿಗೆ ಕರ್ನಾಟಕದಲ್ಲಿ ಹಿಂದಿ ಜೊತೆಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದಕ್ಕೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಶ್ರೀ ಭೂಪೇಂದರ್ ಯಾದವ್ ಅವರಿಗೆ ಧನ್ಯವಾದ ಹೇಳಿದ್ದಾರೆ.
-
ಈ ಸಂದರ್ಭದಲ್ಲಿ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವ ಶ್ರೀ ಭೂಪೇಂದರ್ ಯಾದವ್ ಅವರಿಗೆ ಧನ್ಯವಾದ ಹೇಳಬಯಸುತ್ತೇನೆ.@byadavbjp
— Pralhad Joshi (@JoshiPralhad) January 20, 2022 " class="align-text-top noRightClick twitterSection" data="
3/3
">ಈ ಸಂದರ್ಭದಲ್ಲಿ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವ ಶ್ರೀ ಭೂಪೇಂದರ್ ಯಾದವ್ ಅವರಿಗೆ ಧನ್ಯವಾದ ಹೇಳಬಯಸುತ್ತೇನೆ.@byadavbjp
— Pralhad Joshi (@JoshiPralhad) January 20, 2022
3/3ಈ ಸಂದರ್ಭದಲ್ಲಿ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವ ಶ್ರೀ ಭೂಪೇಂದರ್ ಯಾದವ್ ಅವರಿಗೆ ಧನ್ಯವಾದ ಹೇಳಬಯಸುತ್ತೇನೆ.@byadavbjp
— Pralhad Joshi (@JoshiPralhad) January 20, 2022
3/3
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ