ETV Bharat / state

ಎಸ್‌ಎಸ್‌ಎಲ್​ಸಿ- ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ 3 ಬಾರಿ ಪರೀಕ್ಷೆಗೆ ಅವಕಾಶ: ಸಚಿವ ಮಧು ಬಂಗಾರಪ್ಪ - Good news for SSLC and PUC Students

Good news for SSLC and PUC Students: ರಾಜ್ಯದಲ್ಲಿ ಹತ್ತನೇ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ ಶಿಕ್ಷಣ ಸಚಿವ ಮಧು ಬಂಗಾರಪ್ಪ.

Teacher's Day program at Banquet Hall
ಬ್ಯಾಂಕ್ವೆಟ್ ಹಾಲ್​ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ
author img

By ETV Bharat Karnataka Team

Published : Sep 5, 2023, 4:19 PM IST

Updated : Sep 6, 2023, 10:30 AM IST

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು 2023-24ನೇ ಶೈಕ್ಷಣಿಕ ಸಾಲಿನಿಂದ ತರಲು ತೀರ್ಮಾನಿಸಲಾಗಿದೆ. ಇನ್ನು ಮುಂದೆ ಎಸ್‌ಎಸ್‌ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹತ್ತನೇ ತರಗತಿಯಲ್ಲಿ ಮೂರು ಬಾರಿ ಪರೀಕ್ಷೆ ತೆಗೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಮಕ್ಕಳಿಗೆ ಒಂದು ವರ್ಷ ವ್ಯರ್ಥ ಆಗಬಾರದು ಎಂದು ವರ್ಷದಲ್ಲಿ ಮೂರು ಬಾರಿ ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Exam List
ಪರೀಕ್ಷಾ ಪಟ್ಟಿ

ಯಾವುದೋ ಒಂದು ಕಾರಣಕ್ಕೆ ವಿದ್ಯಾರ್ಥಿಗಳು ಫೇಲ್​ ಆದರೆ ಇಡೀ ವರ್ಷ ಅವರ ಜೀವನ ವ್ಯರ್ಥವಾಗಬಾರದು. ಪರೀಕ್ಷೆಗಳು ಮಕ್ಕಳನ್ನು ಫೈಲ್ ಮಾಡುವುದಕ್ಕಲ್ಲ, ಜೀವನದ ಬಗ್ಗೆ ಕಲಿಕೆಗಾಗಿ ಇರಬೇಕು ಎಂದು ಹೇಳಿದ ಅವರು, ಇದರಿಂದ ಅನುತೀರ್ಣಗೊಂಡ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆದು ಉತ್ತೀರ್ಣರಾಗಲು ಅವಕಾಶ ಸಿಗುತ್ತದೆ ಹಾಗೂ ಕಡಿಮೆ ಅಂಕ ಪಡೆದವರು ಓದಿ ಮತ್ತೆ ಹೆಚ್ಚು ಅಂಕ ಗಳಿಸಲು ಇದರಿಂದ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಹಾಲಿ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆ ನಡೆಸಲಾಗುತ್ತಿದೆ. ಈ ಪದ್ಧತಿಯ ಪರೀಕ್ಷೆಯು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ, ಅರ್ಥಪೂರ್ಣ ಕಲಿಕೆ, ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದೆ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಗಳಿಸಿದ ಅಂಕಗಳಿಂದ ತೃಪ್ತರಾಗದಿದ್ದರೆ, ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ತಿರಸ್ಕರಿಸಲು ಅವಕಾಶವಿದೆ.

ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ ಪೂರಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ವಿದ್ಯಾರ್ಥಿಯ ಅಂತಿಮ ಅಂಕಗಳೆಂದು ಪರಿಗಣಿಸಲಾಗುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿ ಸ್ನೇಹಿಯಾಗಿರುವುದಿಲ್ಲ. ಏಕೆಂದರೆ ಎರಡು ಪರೀಕ್ಷೆಗಳಲ್ಲಿ ತನ್ನ ಅತ್ಯುತ್ತಮ ಅಂಕವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗೆ ಯಾವುದೇ ಆಯ್ಕೆಯಿರುವುದಿಲ್ಲ. ನಾವು ಸುಧಾರಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡರೆ, 1, 2, ಮತ್ತು 3 ಪರೀಕ್ಷೆಗಳಲ್ಲಿ ಗಳಿಸಿದ ವಿಷಯವಾರು ಅಂಕವನ್ನು ಉಳಿಸಿಕೊಳ್ಳಲು ಅವಕಾಶವನ್ನು ಒದಗಿಸಿದಂತಾಗುತ್ತದೆ ಮತ್ತು ಮುಂದಿನ ವ್ಯಾಸಂಗಕ್ಕೆ ಅಥವಾ ಉದ್ಯೋಗಕ್ಕೆ ಆಯ್ಕೆ ಪುಕ್ರಿಯೆಗಳಲ್ಲಿ ಉತ್ತಮ ಅವಕಾಶಗಳನ್ನು ಒದಗಿಸಿದಂತಾಗುತ್ತದೆ ಎಂದು ವಿವರಿಸಿದರು.

ಶಾಲೆಗೆ ಹೋಗುವುದಕ್ಕೆ ಮಕ್ಕಳಿಗೆ ಶಕ್ತಿ ಬೇಕು. ಮುಂಚೆ ಮೊಟ್ಟೆ ವಾರಕ್ಕೆ ಒಂದು ಕೊಡುತ್ತಿದ್ದೆವು. ಈಗ ಒಂದನೇ ತರಗತಿಯಿಂದ 8 ನೇ ತರಗತಿಯವರೆಗೆ ಒಂದು ಮೊಟ್ಟೆ ಕೊಡಲಾಗುತ್ತಿತ್ತು. ಹತ್ತನೇ ತರಗತಿವರೆಗೆ ವಾರಕ್ಕೆ ಎರಡು ಮೊಟ್ಟೆಯನ್ನು ಕೊಡುವಂತ ನಿರ್ಧಾರವನ್ನು ಸಿಎಂ ಸಿದ್ಧರಾಮಯ್ಯ ಮಾಡಿದರು. 58 ಲಕ್ಷ ಮಕ್ಕಳಿಗೆ ಈಗ ರಾಜ್ಯ ಮಟ್ಟದಲ್ಲಿ ವಾರದಲ್ಲಿ ಎರಡು ದಿನ ಮೊಟ್ಟೆ ನೀಡಲಾಗುತ್ತಿದೆ ಎಂದು ಹೇಳಿದರು.

Teacher's Day program at Banquet Hall
ಬ್ಯಾಂಕ್ವೆಟ್ ಹಾಲ್​ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಶಿಕ್ಷಕರ ವರ್ಗಾವಣೆಯ ನಂತರ ಕೆಲವೆಡೆ ಶಿಕ್ಷಕರ ಕೊರತೆ ಉಂಟಾಯಿತು. ಮುಖ್ಯಮಂತ್ರಿಗಳು ಈ ವಿಚಾರ ಗಮನಿಸಿ, ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ನೀಡಿದರು. 43 ಸಾವಿರ ಮಂದಿ ಈಗ ಅತಿಥಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಿಗೆ 20, ಪ್ರೌಢ ಶಾಲಾ ಶಿಕ್ಷಕರಿಗೆ 20 ಪ್ರಶಸ್ತಿ, ವಿಶೇಷ ಶಿಕ್ಷಕರಿಗೆ ಇಬ್ಬರು ಸೇರಿದಂತೆ 31 ಉತ್ತಮ ಶಿಕ್ಷಕರಿಗೆ ರಾಜ್ಯ ಶಿಕ್ಷಕರ ಪ್ರಶಸ್ತಿ ನೀಡಲಾಗಿದೆ.

ಪೂರಕ ಪರೀಕ್ಷೆ ಹೆಸರಿನ ಬದಲಿಗೆ ವಾರ್ಷಿಕ ಪರೀಕ್ಷೆ: "ಪೂರಕಪರೀಕ್ಷೆ" ಎಂಬ ಹೆಸರಿನ ಬದಲಿಗೆ "ವಾರ್ಷಿಕ ಪರೀಕ್ಷೆ 1, 2, 3" ಎಂದು ಹೆಸರಿಸುವುದರೊಂದಿಗೆ ಮೂರು ಅವಕಾಶಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಯ ಒಟ್ಟಾರೆ ಕಾರ್ಯಕ್ಷಮತೆಯನ್ನು ಮತ್ತು ಸಕಾರಾತ್ಮಕ ಮನೋಭಾವವನ್ನು ಉತ್ತೇಜಿಸಿದಂತಾಗುತ್ತದೆ. ಈ ಕೆಳಕಂಡ ಅಂಶಗಳನ್ನು ಪರಿಗಣಿಸಿ ಮಂಡಳಿಯಿಂದ ಈ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುವುದು.

ಈ ಸುಧಾರಣಾ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾರ್ಗಸೂಚಿಯನ್ನು ಸುತ್ತೋಲೆಯ ಮೂಲಕ ಮಂಡಳಿಯಿಂದ ನೀಡಲಾಗುವುದು.

  • ಈ ಮೂರು ಪರೀಕ್ಷೆಗಳಲ್ಲಿ ವಿಷಯ ಮತ್ತು ಕಠಿಣತೆಯ ಮಟ್ಟದಲ್ಲಿ ಏಕರೂಪತೆ ಕಾಯ್ದುಕೊಳ್ಳಲಾಗುವುದು.
  • ಈ ಮೂರು ಪುಯತ್ನಗಳಲ್ಲಿ ಗಳಿಸಿದ ಅಂಕಗಳಲ್ಲಿ ವಿಷಯವಾರು ಅತ್ಯುತ್ತಮವಾದುದನ್ನು ಆಯ್ಕೆಮಾಡಿಕೊಳ್ಳಲು ಅವಕಾಶ ನೀಡಲಾಗುವುದು.
  • ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಡವಾಗಿ ದಾಖಲಾಗುವ ಪ್ರಥಮ ಪಿಯುಸಿ ಅಥವಾ ಪದವಿ ವಿದ್ಯಾರ್ಥಿಗಳಿಗೆ ಸೇತುಬಂಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

ಮಂಡಲಿಯ ಸಂಭವನೀಯ ವೇಳಾಪಟ್ಟಿಯನ್ನು ಈ ಕೆಳಗಿನಂತೆ ವಿನ್ಯಾಸಗೊಳಿಸಲಾಗಿದೆ:

12 ನೇ ತರಗತಿ ಪರೀಕ್ಷೆ 1: ಪರೀಕ್ಷಾ ಅವಧಿ - ಮಾರ್ಚ್ 1 ರಿಂದ ಮಾರ್ಚ್ 25, ಫಲಿತಾಂಶ ಪ್ರಕಟಣೆ - ಏಪ್ರಿಲ್ 22, ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಣೆ- ಮೇ 10.
12 ನೇ ತರಗತಿ ಪರೀಕ್ಷೆ 2: ಮೇ 15 ರಿಂದ ಜೂನ್ 5, ಫಲಿತಾಂಶ ಪ್ರಕಟಣೆ- ಜೂನ್ 21, ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಣೆ- ಜೂನ್ 29.
12 ನೇ ತರಗತಿ ಪರೀಕ್ಷೆ 3: ಜುಲೈ 12 ರಿಂದ ಜುಲೈ 30, ಫಲಿತಾಂಶ ಪ್ರಕಟಣೆ- ಆಗಸ್ಟ್ 16, ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಣೆ ದಿನಾಂಕ- ಆಗಸ್ಟ್ 25.
10 ನೇ ತರಗತಿ ಪರೀಕ್ಷೆ 1: ಪರೀಕ್ಷಾ ಅವಧಿ- ಮಾರ್ಚ್ 30 ರಿಂದ ಏಪ್ರಿಲ್ 15, ಫಲಿತಾಂಶ ಪ್ರಕಟಣೆ-ಮೇ 8, ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟಣೆ- ಮೇ 23.
10 ನೇ ತರಗತಿ ಪರೀಕ್ಷೆ 2: ಪರೀಕ್ಷಾ ಅವಧಿ- ಜೂನ್ 12 ರಿಂದ ಜೂನ್ 19, ಫಲಿತಾಂಶ ಪ್ರಕಟಣೆ- ಜೂನ್ 29, ಮರುಮೌಲ್ಯ ಮಾಪನದ ಫಲಿತಾಂಶ ಪ್ರಕಟಣೆ- ಜುಲೈ 10.
10 ನೇ ತರಗತಿ ಪರೀಕ್ಷೆ 3: ಪರೀಕ್ಷಾ ಅವಧಿ ಜುಲೈ 29 ರಿಂದ ಆಗಸ್ಟ್ 5, ಫಲಿತಾಂಶ ಪ್ರಕಟಣೆ - ಆಗಸ್ಟ್ 19, ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಣೆ- ಆಗಸ್ಟ್ 26.

ಇದನ್ನೂ ಓದಿ : Teachers day: ಶಿಕ್ಷಕರ ತವರೂರು ಇಂಚಲ, ಇಲ್ಲಿ ಇಂಚಿಂಚಿಗೂ ಸಿಗ್ತಾರೆ ಮೇಷ್ಟ್ರು.. ಸ್ವಾಮೀಜಿಯ ಶೈಕ್ಷಣಿಕ ಕ್ರಾಂತಿಗೆ ಉಘೇ ಉಘೇ..

Last Updated : Sep 6, 2023, 10:30 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.