ETV Bharat / state

ವಿದ್ಯುತ್ ಚಾಲಿತ ಬೈಕ್, ಟ್ಯಾಕ್ಸಿ ಯೋಜನೆ ರದ್ಧತಿಗೆ ನಮ್ಮ ಚಾಲಕರ ಟ್ರೇಡ್ ಯೂನಿಯನ್ ಆಗ್ರಹ - ಯೋಜನೆಗೆ ಮುಂದುವರೆದ ವಿರೋಧ

ಜುಲೈ 14ರಂದು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ವಿದ್ಯುತ್ ಚಾಲಿತ ಬೈಕ್ ಟ್ಯಾಕ್ಸಿ ಯೋಜನೆಗೆ ಚಾಲ್ತಿ ನೀಡಿದ್ದಾರೆ. ಈ ಯೋಜನೆ ಜಾರಿಗೆ ಬಂದರೆ ಆಟೋ, ಟ್ಯಾಕ್ಸಿ ಚಾಲಕರ ಜೀವನ ಅತಂತ್ರ ಸ್ಥಿತಿಗೆ ತಲುಪುತ್ತದೆ. ಕೆಲಸ, ಹಣವಿಲ್ಲದೆ ಚಾಲಕರು ಸಾಯುವ ಪರಿಸ್ಥಿತಿಗೆ ಬರುತ್ತಾರೆ. ಹಾಗಾಗಿ, ಈ ಯೋಜನೆ ಜಾರಿಯಾಗಬಾರದು..

Somashekhar Gowda
ಸೋಮಶೇಖರ್ ಗೌಡ
author img

By

Published : Jul 23, 2021, 10:10 PM IST

ಬೆಂಗಳೂರು : ವಿದ್ಯುತ್ ಚಾಲಿತ ಬೈಕ್ ಟ್ಯಾಕ್ಸಿ ಚಾಲನೆಗೆ ಸರ್ಕಾರ ಚಾಲ್ತಿ ನೀಡಿದೆ. ಈ ಯೋಜನೆ ಜಾರಿಗೆ ಬಂದಲ್ಲಿ ಆಟೋ, ಟ್ಯಾಕ್ಸಿ ಚಾಲಕರ ಜೀವನದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುತ್ತದೆ. ಸಂಪಾದನೆ ಇಲ್ಲದೆ ಸಾಯುವ ಪರಿಸ್ಥಿತಿ ಬರುತ್ತದೆ. ಹಾಗಾಗಿ, ಈ ಯೋಜನೆ ಜಾರಿಯಾಗಬಾರದು ಎಂದು ನಮ್ಮ ಚಾಲಕರ ಟ್ರೇಡ್ ಯೂನಿಯನ್ ಅಧ್ಯಕ್ಷ ಸೋಮಶೇಖರ್ ಗೌಡ ಮನವಿ ಮಾಡಿದ್ದಾರೆ.

ನಮ್ಮ ಚಾಲಕರ ಟ್ರೇಡ್ ಯೂನಿಯನ್ ಅಧ್ಯಕ್ಷ ಸೋಮಶೇಖರ್ ಗೌಡ ಮನವಿ

ಈ ಕುರಿತಂತೆ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಜುಲೈ 14ರಂದು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ವಿದ್ಯುತ್ ಚಾಲಿತ ಬೈಕ್ ಟ್ಯಾಕ್ಸಿ ಯೋಜನೆಗೆ ಚಾಲ್ತಿ ನೀಡಿದ್ದಾರೆ. ಈ ಯೋಜನೆ ಜಾರಿಗೆ ಬಂದರೆ ಆಟೋ, ಟ್ಯಾಕ್ಸಿ ಚಾಲಕರ ಜೀವನ ಅತಂತ್ರ ಸ್ಥಿತಿಗೆ ತಲುಪುತ್ತದೆ. ಕೆಲಸ, ಹಣವಿಲ್ಲದೆ ಚಾಲಕರು ಸಾಯುವ ಪರಿಸ್ಥಿತಿಗೆ ಬರುತ್ತಾರೆ. ಹಾಗಾಗಿ, ಈ ಯೋಜನೆ ಜಾರಿಯಾಗಬಾರದು ಎಂದು ಒತ್ತಾಯಿಸಿದರು.

ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯಪಾಲರು, ಮುಖ್ಯಮಂತ್ರಿ, ಸಾರಿಗೆ ಸಚಿವರು ಹಾಗೂ ಇಲಾಖೆ ಆಯುಕ್ತರಿಗೆ ಮನವಿ ಕೊಟ್ಟಿದ್ದೇವೆ. ಯಾವುದೇ ಕಾರಣಕ್ಕೂ ಈ ಯೋಜನೆಗೆ ಅವಕಾಶ ಕೊಡಬಾರದು. ಇದರಿಂದ ಲಕ್ಷಾಂತರ ಟ್ಯಾಕ್ಸಿ,ಆಟೋ ಚಾಲಕರ ಬದುಕಿಗೆ ಅನುಕೂಲಕರ ವ್ಯವಸ್ಥೆ ಮಾಡಿಕೊಡಬೇಕು. ತೆರಿಗೆ ಕಟ್ಟುವ ಖಾಸಗಿ ವಾಣಿಜ್ಯ ಚಾಲಕರ ಹೊಟ್ಟೆ ಮೇಲೆ ಹೊಡೆಯಬೇಡಿ ಎಂದು ವಿನಂತಿಸಿಕೊಂಡರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.