ETV Bharat / state

ತಾಯಿ, ಮಗು ಸಾವು ಪ್ರಕರಣ: ಸಚಿವ ಜಾರ್ಜ್ ರಾಜೀನಾಮೆಗೆ ಆರ್​ ಅಶೋಕ್ ಆಗ್ರಹ - ETV Bharat Kannada News

ವಿದ್ಯುತ್ ಅವಘಡದಲ್ಲಿ ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಕಾರಣ ಇಲಿ ವೈರ್​ಗಳನ್ನು ಕಚ್ಚಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಸಚಿವ ಕೆ ಜೆ ಜಾರ್ಜ್​ ಹೇಳಿರುವುದಕ್ಕೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.

ಪ್ರತಿಪಕ್ಷ ನಾಯಕ ಆರ್​. ಅಶೋಕ್
ಪ್ರತಿಪಕ್ಷ ನಾಯಕ ಆರ್​. ಅಶೋಕ್
author img

By ETV Bharat Karnataka Team

Published : Nov 22, 2023, 1:46 PM IST

ಬೆಂಗಳೂರು : ನಗರದಲ್ಲಿ ಇತ್ತೀಚೆಗೆ ವಿದ್ಯುತ್​ ಅವಘಡದಲ್ಲಿ ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ನೈತಿಕ ಹೊಣೆ ಹೊತ್ತು ಇಂಧನ ಸಚಿವ ಕೆ ಜೆ ಜಾರ್ಜ್​ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವೈರ್​ಗಳಿಗೆ ಇಲಿ ಕಚ್ಚಿ ಘಟನೆ ಸಂಭವಿಸಿದೆ ಎಂಬ ನೆಪ ಹೇಳಿಕೊಂಡು ತಿಪ್ಪೆ ಸಾರಿಸುವ ಮಟ್ಟಕ್ಕೆ ಸಚಿವರು ಇಳಿದಿರುವುದು ನೀಚತನದ ಪರಮಾವಧಿ. ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಕೊರತೆಯೇ ದುರಂತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೂ, ಹೊಣೆಗಾರಿಕೆಯಿಂದ ನುಣುಚಿಕೊಂಡು ಸಂವೇದನಾ ರಹಿತರಾಗಿ ಸಚಿವ ಜಾಜ್೯ ವರ್ತಿಸುತ್ತಿರುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದರು.

ತನಿಖೆಗೆ ನಾಲ್ಕು ಸಮಿತಿ ರಚಿಸಿರುವುದಾಗಿ ಜಾರ್ಜ್ ಅವರೇ ಹೇಳಿದ್ದಾರೆ. ತನಿಖೆ ಮುಗಿದು ವರದಿ ಕೈ ಸೇರುವ ಮೊದಲೇ ಇಲಿ ನೆಪ ಹೇಳುತ್ತಿರುವುದರ ಹಿಂದಿನ ಉದ್ದೇಶವಾದರೂ ಏನು? ತನಿಖೆಯ ಹಾದಿ ತಪ್ಪಿಸುವ ಯತ್ನ ನಡೆಸುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಹೀಗೆಯೇ ವರದಿ ನೀಡಲಿ ಎಂದು ಪರೋಕ್ಷವಾಗಿ ತನಿಖಾ ಸಮಿತಿಗಳ ಮೇಲೆ ಒತ್ತಡ ಹೇರಿದಂತೆ ಅಗುವುದಿಲ್ಲವೇ ಎಂದು ಪ್ರತಿಪಕ್ಷ ನಾಯಕ ಪ್ರಶ್ನಿಸಿದ್ದಾರೆ.

ಸಿಎಂ ಮಧ್ಯ ಪ್ರವೇಶಕ್ಕೆ ಆಗ್ರಹ : ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಅವರು ಮೌನ ವಹಿಸುವುದು ಸರಿಯಲ್ಲ. ತಕ್ಷಣವೇ ಮಧ್ಯ ಪ್ರವೇಶಿಸಿ ಸಚಿವ ಜಾಜ್೯ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬ್ರಾಂಡ್ ಬೆಂಗಳೂರು ಹಣೆಪಟ್ಟಿಗೆ ಕಪ್ಪು ಚುಕ್ಕೆಯಾಗಿರುವ ಈ ಪ್ರಕರಣದಲ್ಲಿ ತಾಯಿ ಮಗುವಿನ ಸಾವಿಗೆ ನ್ಯಾಯ ಸಿಗಬೇಕು. ನಿಷ್ಪಕ್ಷಪಾತ ತನಿಖೆ ನಡೆಯಬೇಕಿದ್ದರೆ ಸಚಿವ ಸ್ಥಾನದಲ್ಲಿ ಜಾರ್ಜ್​ ಅವರು ಮುಂದುವರಿಯಬಾರದು. ಬ್ರಾಂಡ್ ಬೆಂಗಳೂರು ಮಾಡ್ತೀವಿ, ಜಾಗತಿಕ ಮಟ್ಟದಲ್ಲಿ ನಗರದಲ್ಲಿ ಸೌಲಭ್ಯಗಳನ್ನು ಕೊಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಇದೇನಾ ನಿಮ್ಮ ಬ್ರಾಂಡ್ ಬೆಂಗಳೂರು? ಇದೇನಾ ನಿಮ್ಮ ಗ್ಲೋಬಲ್ ಡೆವಲಪ್ಮೆಂಟ್? ಎಂದು ಮಾಧ್ಯಮ ಹೇಳಿಕೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ನ್ಯಾಯ ಸಿಗುವ ತನಕ ಹೋರಾಟ : ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಸರ್ಕಾರದ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಹೋರಾಟ ನಡೆಸಲಾಗುವುದು. ಇಂಧನ ಸಚಿವರ ರಾಜೀನಾಮೆ ಪಡೆದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ತನಕ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಾಗುವುದು ಎಂದು ಅಶೋಕ್ ಎಚ್ಚರಿಕೆ ರವಾನಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು ವಿದ್ಯುತ್ ಅವಘಡಕ್ಕೆ ಇಲಿ ಕಾರಣ; ತನಿಖೆಗೆ 4 ಕಮಿಟಿ ರಚನೆ, ತಪ್ಪಿತಸ್ಥರಿಗೆ ಶಿಕ್ಷೆ: ಸಚಿವ ಜಾರ್ಜ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.