ETV Bharat / state

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ನೋಟಿಸ್​ ವಿಚಾರ: ಸದನದಲ್ಲಿ ಗದ್ದಲ - ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಚಾರ

ಮಂಗಳೂರು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ನೀಡಿರುವ ವಿಚಾರ ಪ್ರಸ್ತಾಪಿಸಿದ ಸಿದ್ದರಾಮಯ್ಯರಿಗೆ ಸಚಿವ ಮಾಧುಸ್ವಾಮಿ ನೋಟಿಸ್ ಕೊಡಬೇಕಾಗುತ್ತದೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Feb 19, 2020, 8:06 PM IST

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ವರ್ತನೆ ಸದನದ ನಿಂದನೆಯಾಗುತ್ತಿದೆ ಎಂದು ಆರೋಪಿಸಿ ನೋಟಿಸ್ ಕೊಡುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ವಿಧಾನಸಭೆಯಲ್ಲಿ ಇಂದು ಹೇಳಿದರು.

ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಚಾರವಾಗಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಚಾರದ ಕುರಿತ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ, ಮಂಗಳೂರು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ನೀಡಿರುವ ವಿಚಾರ ಪ್ರಸ್ತಾಪಿಸುತ್ತಿದ್ದರು. ಈ ವೇಳೆ ಮಾಧುಸ್ವಾಮಿ ನೋಟಿಸ್ ಕೊಡಬೇಕಾಗುತ್ತದೆ ಎಂದು ಆಕ್ರೋಶಿತರಾಗಿ ಹೇಳಿದರು. ಇನ್ನು ಕಾಂಗ್ರೆಸ್ ಸದಸ್ಯರು ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ಮಾತಿನ ಚಕಮಕಿ ನಡೆದು ಗೊಂದಲ ಉಂಟಾಯಿತು.

ವಿಧಾನಸಭೆ ಕಲಾಪ

ಸಭಾಧ್ಯಕ್ಷರ ಪೀಠದಲ್ಲಿದ್ದ ಉಪ ಸಭಾಧ್ಯಕ್ಷ ಕೃಷ್ಣರೆಡ್ಡಿ ಸದನದ ಕಲಾಪಗಳನ್ನು ಕೆಲಕಾಲ ಮುಂದೂಡಿದರು. ಚರ್ಚೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಸದನದಲ್ಲಿ ಆಡಳಿತ ಪಕ್ಷದ ಶಾಸಕರು ಪ್ರದರ್ಶಿಸಿದ ಛಾಯಾಚಿತ್ರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿತ್ತು ಎಂದರು. ಈ ಸಂದರ್ಭದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಮಾಧುಸ್ವಾಮಿ, ನೀವು ಏನು ಬೇಕಾದರೂ ಮಾತನಾಡಬಹುದೆ? ನಿಮ್ಮಷ್ಟು ದೊಡ್ಡವರಲ್ಲ, ಕ್ರಿಯಾಲೋಪದ ವಿಚಾರಕ್ಕೆ ಸಂಬಂಧಿಸಿದಂತೆ ಸಭಾಧ್ಯಕ್ಷರು ತೀರ್ಪು ನೀಡಿದ ನಂತರವೂ ಅದೇ ವಿಚಾರ ಪ್ರಸ್ತಾಪಿಸುತ್ತಿದ್ದೀರಿ. ಕಂಟೆಮ್ಟ್ ಆಫ್ ಹೌಸ್​​ ನೋಟಿಸ್​​ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಅವರಿಗೆ ಹೇಳಿದರು. ಸದನದಲ್ಲಿ ಗೊಂದಲದ ವಾತಾವರಣ ಮುಂದುವರಿದಿದ್ದರಿಂದ ಕೆಲಕಾಲ ಸದನವನ್ನು ಮುಂದೂಡಲಾಯಿತು.

ಛೀಮಾರಿ: ಮಂಗಳೂರು ಗಲಾಟೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ನೀಡುವಾಗ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂಬ ಹೇಳಿಕೆ ಕಾಂಗ್ರೆಸ್ ಸದಸ್ಯರಲ್ಲೇ ಒಡಕಿನ ಧ್ವನಿ ಸೃಷ್ಟಿಸಿತು. ಜಾಮೀನು ನೀಡುವಾಗ ಹೈಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಉಲ್ಲೇಖಿಸಿ ಮಾತನಾಡಿದ ದಿನೇಶ್​ ಗುಂಡೂರಾವ್, ನ್ಯಾಯಾಧೀಶರು ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ಪೊಲೀಸರು ತಪ್ಪು ಮಾಡಿದ್ದಾರೆ ಎಂಬ ಅಭಿಪ್ರಾಯವ್ಯಕ್ತಾಗಿದೆ. ಇದರ ಹೊಣೆ ಹೊತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ನ್ಯಾಯಾಲಯ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂಬ ಪದಪ್ರಯೋಗವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಆಕ್ಷೇಪಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.