ETV Bharat / state

ಕಾಂಗ್ರೆಸ್‌ ವಿಪಕ್ಷ ನಾಯಕನ ಆಯ್ಕೆ ಕಸರತ್ತು.. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್ ಇಷ್ಟೇ ಹೇಳಿದರು.. - ಮಾಜಿ ಸಂಸದ ಕೆ.ಎಚ್.ಮುನಿಯಪ್ಪ

ಮೂಲ ಕಾಂಗ್ರೆಸ್ಸಿಗರು, ವಲಸೆ ಕಾಂಗ್ರೆಸ್ ನಾಯಕರು ಎಂಬ ಭಿನ್ನಾಭಿಪ್ರಾಯ ಇಲ್ಲ. ಸಾಮೂಹಿಕ ನಾಯಕತ್ವಕ್ಕೆ ಪಕ್ಷ ಒತ್ತು ನೀಡಲಿದೆ ಎಂದು ಕಾಂಗ್ರೆಸ್ ನಾಯಕರು ಸಭೆ ಮುಗಿದ ಬಳಿಕ ತಿಳಿಸಿದ್ದಾರೆ.

ವಿಪಕ್ಷ ನಾಯಕ ಆಯ್ಕೆ ಕಸರತ್ತು
author img

By

Published : Oct 6, 2019, 4:33 PM IST

ಬೆಂಗಳೂರು: ಪ್ರತಿಪಕ್ಷ ನಾಯಕನ ಆಯ್ಕೆ ಸಂಬಂಧ ನಾವು ನಮ್ಮ‌ ಅಭಿಪ್ರಾಯವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂಧನ್ ಮಿಸ್ತ್ರಿ ಮುಂದೆ ಹೇಳಿದ್ದೇವೆ ಎಂದು ಮಾಜಿ ಸಂಸದ ಕೆ ಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್‌ ವಿಪಕ್ಷ ನಾಯಕ ಆಯ್ಕೆ ಕಸರತ್ತು..

ತಮ್ಮ ಅಭಿಪ್ರಾಯ ನೀಡಿದ ಬಳಿಕ ಮಾತನಾಡಿದ ಅವರು, ವಿಪಕ್ಷ ನಾಯಕನ ಸ್ಥಾನದ ಬಗ್ಗೆ ಮಧುಸೂಧನ್ ಮಿಸ್ತ್ರಿ ಅವರು ನಮ್ಮ ಅಭಿಪ್ರಾಯ ಕೇಳಿದ್ದಾರೆ. ನಮ್ಮ ಅಭಿಪ್ರಾಯವನ್ನು ಹೇಳಿದ್ದೇವೆ. ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕೆಲವು ಹೆಸರನ್ನು ನಾವು ಸೂಚಿಸಿದ್ದೇವೆ. ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮೂಲ,ವಲಸಿಗ ಕಾಂಗ್ರೆಸ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೊಸದಾಗಿ ಬಂದ ಸಿದ್ದರಾಮಯ್ಯನವರನ್ನೇ ಒಪ್ಪಿಕೊಂಡು ಸಿಎಂ ಮಾಡಿದ್ದೇವೆ‌. ಇನ್ನೇನು ಹೇಳುವುದು ಎಂದು ತಿಳಿಸಿದರು.

ಸಾಮೂಹಿಕ ನಾಯಕತ್ವಕ್ಕೆ ಒತ್ತು:

ಮೂಲ ಕಾಂಗ್ರೆಸ್ಸಿಗರು, ವಲಸೆ ಕಾಂಗ್ರೆಸ್ ನಾಯಕರು ಎಂಬ ಭಿನ್ನಾಭಿಪ್ರಾಯ ಇಲ್ಲ. ಸಾಮೂಹಿಕ ನಾಯಕತ್ವಕ್ಕೆ ಪಕ್ಷ ಒತ್ತು ನೀಡಲಿದೆ ಎಂದು ಹೆಚ್ ಕೆ ಪಾಟೀಲ್ ತಿಳಿಸಿದರು. ತಮ್ಮ‌ ಅಭಿಪ್ರಾಯ‌ ನೀಡಿದ ಬಳಿಕ ಮಾತನಾಡಿದ ಅವರು, ವಿಧಾನ ಮಂಡಲ ಉಭಯ ಸದನಗಳ ವಿಪಕ್ಷ ನಾಯಕ, ವಿಪ್, ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಸೇರಿ 7ಸ್ಥಾನಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಯಾರಿಗೆ ಅವಕಾಶ ನೀಡಬಹುದು ಎಂದು ಹಿರಿಯ ನಾಯಕರ ಅಭಿಪ್ರಾಯ ಪಡೆದಿದ್ದಾರೆ. ಒನ್ ಟು ಒನ್ ಅಭಿಪ್ರಾಯ ಪಡೆದಿದ್ದಾರೆ ಎಂದು ವಿವರಿಸಿದರು.

ರಾಜ್ಯದ ರಾಜಕೀಯ ವಿದ್ಯಮಾನಗಳ ಅರಿವು ಮಧುಸೂಧನ್ ಮಿಸ್ತ್ರಿ ಅವರಿಗಿದೆ. ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅಂತಿಮವಾಗಿ ವರದಿಯನ್ನು ಸೋನಿಯಾ ಗಾಂಧಿ ಅವರಿಗೆ ನೀಡುತ್ತಾರೆ. ಅವರು ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಮಾಡಿಲ್ಲ‌ ಎಂದು ಸ್ಪಷ್ಟಪಡಿಸಿದರು.

Intro:Body:KN_BNG_06_KHMUNIYAPPA_HKPATIL_SCRIPT_7201951

ವಿಪಕ್ಷ ನಾಯಕ ಆಯ್ಕೆ ಕಸರತ್ತು: ಮೂಲ ಕಾಂಗ್ರೆಸಿಗ ಕೆ.ಎಚ್.ಮುನಿಯಪ್ಪ, ಎಚ್.ಕೆ.ಪಾಟೀಲ್ ಹೇಳಿದ್ದೇನು?

ಬೆಂಗಳೂರು: ಪ್ರತಿಪಕ್ಷ ನಾಯಕ ಆಯ್ಕೆ ಸಂಬಂಧ ನಾವು ನಮ್ಮ‌ ಅಭಿಪ್ರಾಯವನ್ನು ಮಧುಸೂಧನ್ ಮಿಸ್ತ್ರಿ ಮುಂದೆ ಹೇಳಿದ್ದೇವೆ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ತಮ್ಮ ಅಭಿಪ್ರಾಯ ನೀಡಿದ ಬಳಿಕ ಮಾತನಾಡಿದ ಅವರು, ವಿಪಕ್ಷ ನಾಯಕನ ಸ್ಥಾನದ ಬಗ್ಗೆ ಮಧುಸೂಧನ್ ಮಿಸ್ತ್ರಿ ಅವರು ನಮ್ಮ ಅಭಿಪ್ರಾಯ ಕೇಳಿದ್ದಾರೆ. ನಮ್ಮ ಅಭಿಪ್ರಾಯ ವನ್ನು ಹೇಳಿದ್ದೇವೆ. ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕೆಲವು ಹೆಸರನ್ನು ನಾವು ಸೂಚಿಸಿದ್ದೇವೆ .ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮೂಲ , ವಲಸಿಗ ಕಾಂಗ್ರೆಸ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೊಸದಾಗಿ ಬಂದ ಸಿದ್ದರಾಮಯ್ಯನವರನ್ನೆ ಒಪ್ಪಿಕೊಂಡು ಸಿಎಂ ಮಾಡಿದ್ದೇವೆ‌. ಇನ್ನೇನು ಹೇಳುವುದು ಎಂದು ತಿಳಿಸಿದರು.

ಸಾಮೂಹಿಕ ನಾಯಕತ್ವಕ್ಕೆ ಒತ್ತು:

ಮೂಲ ಕಾಂಗ್ರೆಸ್ಸಿಗರು, ವಲಸೆ ಕಾಂಗ್ರೆಸ್ ನಾಯಕರು ಎಂಬ ಭಿನ್ನಾಭಿಪ್ರಾಯ ಇಲ್ಲ. ಸಾಮೂಹಿಕ ನಾಯಕತ್ವಕ್ಕೆ ಪಕ್ಷ ಒತ್ತು ನೀಡಲಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ತಮ್ಮ‌ ಅಭಿಪ್ರಾಯ‌ ನೀಡಿದ ಬಳಿಕ ಮಾತನಾಡಿದ ಅವರು, ವಿಧಾನ ಮಂಡಲ ಉಭಯ ಸದನಗಳ ವಿಪಕ್ಷ ನಾಯಕ, ವಿಪ್, ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಸೇರಿದಂತೆ 7 ಸ್ಥಾನಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಯಾರಿಗೆ ಅವಕಾಶ ನೀಡಬಹುದು ಎಂದು ಹಿರಿಯ ನಾಯಕರ ಅಭಿಪ್ರಾಯ ಪಡೆದಿದ್ದಾರೆ. ಒನ್ ಟು ಒನ್ ಅಭಿಪ್ರಾಯ ಪಡೆದಿದ್ದಾರೆ ಎಂದು ವಿವರಿಸಿದರು.

ರಾಜ್ಯದ ವಿದ್ಯಾಮಾನದ ಅರಿವು ಮಧುಸೂಧನ್ ಅವರಿಗಿದೆ. ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅಂತಿಮವಾಗಿ ವರದಿಯನ್ನು ಸೋನಿಯಾ ಗಾಂಧಿ ಅವರಿಗೆ ನೀಡುತ್ತಾರೆ. ಅವರು ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಮಾಡಿಲ್ಲ‌ ಎಂದು ಸ್ಪಷ್ಟಪಡಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.