ETV Bharat / state

ಮಾಜಿ ಸಿಎಂಗೆ ಜ್ವರ: ಆಸ್ಪತ್ರೆಗೆ ದಾಖಲಾದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ - Opposition leader Siddaramaiah

ಮೂತ್ರ ಸಂಬಂಧಿತ ಸಮಸ್ಯೆಯಿಂದ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಬೆಂಗಳೂರಿನ ಹಳೆ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Opposition leader Siddaramaiah
ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಸ್ಪತ್ರೆಗೆ ದಾಖಲು
author img

By

Published : Aug 4, 2020, 7:45 AM IST

ಬೆಂಗಳೂರು: ಮೂತ್ರದ ಉರಿಯೂತದ ಹಿನ್ನೆಲೆ ಉಂಟಾದ ಜ್ವರದ ಕಾರಣ ಚಿಕಿತ್ಸೆಗಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆ ರಾತ್ರಿ ಬೆಂಗಳೂರಿನ ಹಳೆ ಏರ್ಪೋರ್ಟ್ ರಸ್ತೆಯಲ್ಲಿ ಇರುವ ಮಣಿಪಾಲ್ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ಮೂತ್ರ ಸಂಬಂಧಿಸಿದ ಸಮಸ್ಯೆಯಿಂದ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಜ್ವರದಿಂದ ಬಳಲುತ್ತಿದ್ದಾರೆ. ನಿನ್ನೆ ರಾತ್ರಿ 11:30 ರ ವೇಳೆಗೆ ತಮ್ಮ ಪತಿಯ ಜೊತೆ ಆಸ್ಪತ್ರೆಗೆ ಆಗಮಿಸಿದ ಅವರು ತಪಾಸಣೆಗೆ ಒಳಪಟ್ಟು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಪತ್ನಿ ತಮ್ಮ ನಿವಾಸಕ್ಕೆ ವಾಪಸ್ ತೆರಳಿದ್ದು, ಪುತ್ರ ಡಾ ಯತೀಂದ್ರ ಸದ್ಯ ಆಸ್ಪತ್ರೆಯಲ್ಲಿದ್ದು, ಸಿದ್ದರಾಮಯ್ಯ ಅವರ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ.

ಕೋವಿಡ್ 19 ಪಾಸಿಟಿವ್ ಹಿನ್ನೆಲೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಮಾಜಿ ಸಿಎಂ ಆಗಿರುವ ಸಿದ್ದರಾಮಯ್ಯ ಕೂಡ ಇದೆ ಆಸ್ಪತ್ರೆಗೆ ದಾಖಲಾಗಿದ್ದು, ಬೇರೆ ಬೇರೆ ಸಮಸ್ಯೆಗೆ ಹಾಲಿ ಹಾಗೂ ಮಾಜಿ ಸಿಎಂಗಳು ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿದ್ದರಾಮಯ್ಯ ಇನ್ನೂ ಒಂದೆರಡು ದಿನಗಳ ಕಾಲ ಮಣಿಪಾಲ ಆಸ್ಪತ್ರೆಯಲ್ಲಿ ಇರಲಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ಅವರ ಆರೋಗ್ಯದ ಸ್ಥಿತಿ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.