ಬೆಂಗಳೂರು: ಭದ್ರಾವತಿ ಶಾಸಕ ಸಂಗಮೇಶ್ ಬೆಂಬಲಕ್ಕೆ ನಿಲ್ಲುವ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ: ರಮೇಶ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆದಿದೆ: ರೇಣುಕಾಚಾರ್ಯ
ವಿಧಾನಸಭೆಯ ಮೊಗಸಾಲೆಯಲ್ಲಿರುವ ಸಿದ್ದರಾಮಯ್ಯನವರ ಕಚೇರಿಯಲ್ಲಿ ಹಿರಿಯ ಶಾಸಕರಾದ ರಮೇಶ್ ಕುಮಾರ್, ರಾಮಲಿಂಗಾ ರೆಡ್ಡಿ, ಕೆ.ಜೆ ಜಾರ್ಜ್, ಭೈರತಿ ಸುರೇಶ್ ಸೇರಿದಂತೆ ಕಾಂಗ್ರೆಸ್ ಶಾಸಕರ ಜೊತೆ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದರು.
ಸಂಗಮೇಶ್ ಅವರನ್ನು ಕಚೇರಿಗೆ ಕರೆಸಿಕೊಂಡಿರುವ ಸಿದ್ದರಾಮಯ್ಯ, ಶಾಸಕರಿಂದಲೂ ಮಾಹಿತಿ ಪಡೆದುಕೊಂಡರು. ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರನ್ನು ಕಚೇರಿಗೆ ಕರೆಸಿಕೊಂಡು ಚರ್ಚೆ ನಡೆಸಿದರು. ಇದೇ ವೇಳೆ ಕಾರ್ಯದರ್ಶಿ ವಿಶಾಲಾಕ್ಷಿ ಅವರ ಮೂಲಕ ಸ್ಪೀಕರ್, ಶಾಸಕರ ಅಮಾನತು ಆದೇಶದ ಪ್ರತಿ ಕಳುಹಿಸಿದರು.
ಇದಕ್ಕೂ ಮುನ್ನ ಶಾಸಕ ಸಂಗಮೇಶ್ ಅಮಾನತು ಆರ್ಡರ್ ಪತ್ರ ಬಂದಿಲ್ಲ. ನೀವು ಯಾಕೆ ಒಳಗೆ ಬಿಡಲ್ಲ ಎಂದು ಮಾರ್ಷಲ್‌ಗಳನ್ನು ಸಿದ್ದರಾಮಯ್ಯ ಪ್ರಶ್ನಿಸಿದರು.