ETV Bharat / state

ರಾಜ್ಯ ಸರ್ಕಾರ ಕೂಡ ರೈತವಿರೋಧಿ ಕಾಯ್ದೆಗಳನ್ನು ತಕ್ಷಣ ವಾಪಸ್ ಪಡೆಯಬೇಕು : ಸಿದ್ದರಾಮಯ್ಯ ಆಗ್ರಹ - ಸಿದ್ದರಾಮಯ್ಯ

ಎಪಿಎಂಸಿಗಳ ನಿಯಂತ್ರಣವಿಲ್ಲದೆ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪೆನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆಯ ದುರುದ್ದೇಶವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ..

ಸಿದ್ದರಾಮಯ್ಯ ಆಗ್ರಹ
ಸಿದ್ದರಾಮಯ್ಯ ಆಗ್ರಹ
author img

By

Published : Nov 20, 2021, 10:36 PM IST

ಬೆಂಗಳೂರು : ಕರಾಳ ಕೃಷಿ ಕಾಯ್ದೆಗಳನ್ನು ನರೇಂದ್ರ ಮೋದಿ ಸರ್ಕಾರ ವಾಪಸ್ ಪಡೆದಂತೆ ರಾಜ್ಯ ಬಿಜೆಪಿ ಸರ್ಕಾರ ಕೂಡ ರೈತ ವಿರೋಧಿಯಾಗಿರುವ ಎಪಿಎಂಸಿ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ ಮತ್ತು ಭೂ ಸುಧಾರಣಾ (ತಿದ್ದುಪಡಿ) ಕಾಯ್ದೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕರಾಳ ಕೃಷಿ ಕಾಯ್ದೆಗಳನ್ನು ರೈತರ ಮೇಲೆ ಹೇರಿದ ನರೇಂದ್ರ ಮೋದಿ ಸರ್ಕಾರದ ಅಪರಾಧದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಸಮಾನ ಪಾಲಿದೆ. ನರೇಂದ್ರ ಮೋದಿ ಅವರು ಕೊಂದ ಪಾಪವನ್ನು ತಿಂದು ಪರಿಹರಿಸಿಕೊಂಡರು, ಈಗ ರಾಜ್ಯ ಬಿಜೆಪಿ ಸರ್ಕಾರದ ಸರದಿ.

ಎಪಿಎಂಸಿಗಳ ನಿಯಂತ್ರಣವಿಲ್ಲದೆ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆಯ ದುರುದ್ದೇಶವಾಗಿದೆ ಎಂದಿದ್ದಾರೆ.

ಎಪಿಎಂಸಿಯ ಹೊಸ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಕ್ಕೆ ಎಂಪಿಎಂಸಿಯಿಂದ ಹೊರಗಿರುವ ವರ್ತಕರ ಮೇಲೆ ಯಾವ ನಿಯಂತ್ರಣವೂ ಇರುವುದಿಲ್ಲ. ಅವರ ವ್ಯವಹಾರದ ಮೇಲೆ ನಿಗಾ ಇಡುವಂತಿಲ್ಲ. ಶುಲ್ಕ, ಸೆಸ್, ಲೆವಿ ಸಂಗ್ರಹಿಸುವಂತಿಲ್ಲ. ಇದು ಸರ್ಕಾರದ ಸಂಪೂರ್ಣ ಶರಣಾಗತಿ.

ಪ್ರಸ್ತುತ ಶೇ.6 ರೈತರು ಎಪಿಎಂಸಿಗಳಲ್ಲಿ ಬೆಳೆ ಮಾರಾಟ ಮಾಡುತ್ತಿದ್ದಾರೆ. ಶೇ.94ರಷ್ಟು ರೈತರಿಗೆ ಮಾರುಕಟ್ಟೆ ಸೌಲಭ್ಯಗಳಿಲ್ಲ. ರೈತರಿಗೆ ನೆರವಾಗುವ ಉದ್ದೇಶ ಸರ್ಕಾರಕ್ಕಿದ್ದರೆ ಮಾರುಕಟ್ಟೆಗಳಿಲ್ಲದ ಕಡೆಗಳಲ್ಲಿ ಎಪಿಎಂಸಿಯಿಂದ ಪರವಾನಿಗೆ ಪಡೆದು ಮಾರುಕಟ್ಟೆಗಳನ್ನು ಸ್ಥಾಪಿಸಲು ಸರ್ಕಾರ ಉತ್ತೇಜನ ನೀಡಬಹುದಾಗಿದೆ. ರೈತರ ಭೂಮಿಗಿದ್ದ ರಕ್ಷಣೆಯನ್ನು ಕಿತ್ತು ಹಾಕಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಭೂಗಳ್ಳರಿಗೆ ನೆರವಾಗುವ ದುರುದ್ದೇಶದ್ದಾಗಿದೆ.

ನಮ್ಮ ವಿರೋಧವನ್ನು ಧಿಕ್ಕರಿಸಿ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲು ಹೊರಟಿದೆ. ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಕೂಡ ತನ್ನ ತಪ್ಪನ್ನು ತಿದ್ದಿಕೊಳ್ಳಬೇಕು. ಕೃಷಿ ಭೂಮಿ ಖರೀದಿಗೆ ಇದ್ದ ರೂ. 25 ಲಕ್ಷ ಆದಾಯದ ಮಿತಿಯನ್ನು ರದ್ದುಗೊಳಿಸಿ, ಕೃಷಿಕರಲ್ಲದವರು ಕೂಡ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಲು, ಭೂ ಸುಧಾರಣಾ ಕಾಯ್ದೆ 1961ರ ಸೆಕ್ಷನ್ 80 ಮತ್ತು 79 ಎಬಿಸಿಗಳನ್ನು ರದ್ದು ಮಾಡಿರುವ ಬಿಜೆಪಿ ಸರ್ಕಾರ, ರೈತರನ್ನು ಬೀದಿ ಪಾಲು ಮಾಡಲು ಹೊರಟಿದೆ ಎಂದಿದ್ದಾರೆ.

ಭೂ ಸುಧಾರಣಾ ಕಾಯ್ದೆ 1961ರ ಸೆಕ್ಷನ್ A,B,C ಯಡಿಯಲ್ಲಿ ಸುಮಾರು 1.7 ಲಕ್ಷ ಎಕರೆ ಜಮೀನಿಗೆ ಸಂಬಂಧಿಸಿದ 13,814 ಪ್ರಕರಣಗಳು ದಾಖಲಾಗಿತ್ತು. ಭೂ ಸುಧಾರಣೆ ತಿದ್ದುಪಡಿ ಮಸೂದೆಯಿಂದ ಈ ಪ್ರಕರಣಗಳು ರದ್ದಾಗಿ ಸರ್ಕಾರದ ಖಜಾನೆಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಲಿದೆ. ಸದನದ ಒಳಗೆ ಮತ್ತು ಹೊರಗೆ ಈ ಎರಡು ಕರಾಳ ಕಾಯ್ದೆಗಳನ್ನು ರಾಜ್ಯ ಕಾಂಗ್ರೆಸ್ ಪಕ್ಷ ವಿರೋಧಿಸಿದೆ. ಇಂತಹ ಕಾಯ್ದೆಗಳನ್ನು ರೂಪಿಸುವ ಹಂತದಲ್ಲಿ ರೈತ ನಾಯಕರು ಮತ್ತು ವಿರೋಧ ಪಕ್ಷಗಳ ಜೊತೆ ಚರ್ಚೆ ನಡೆಸುವುದು ಪ್ರಜಾಪ್ರಭುತ್ವದ ನಡವಳಿಕೆ.

ಬಿಜೆಪಿ ಸರ್ಕಾರ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದೆ. ಎಪಿಎಂಸಿ(ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ ಮತ್ತು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ವಾಪಸು ಪಡೆಯಲು ರಾಜ್ಯ ಕಾಂಗ್ರೆಸ್ ಪಕ್ಷ ಹೋರಾಟ ನಡೆಸುವುದರ ಜೊತೆಗೆ ರಾಜ್ಯದ ರೈತ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಹೋರಾಟಕ್ಕೂ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.