ETV Bharat / state

ಅರಣ್ಯವಿದೆ ಎಂಬ ಪರಿಜ್ಞಾನವೂ ಇಲ್ಲದೆ ಗಣಿಗಾರಿಕೆ ನಡೆಸುವುದೆಷ್ಟು ಸರಿ?: ಸಿದ್ದರಾಮಯ್ಯ - ಹುಣಸೋಡು ಗ್ರಾಮದ ಬಳಿ ಸಂಗ್ರಹಿಸಿದ್ದ ಜೆಲೆಟಿನ್ ಕಡ್ಡಿ ಮತ್ತು ಡೈನಮೈಟ್‍

ಭದ್ರಾ ಅಣೆಕಟ್ಟಿನಿಂದ ಕೇವಲ 20 ಕಿಲೋಮೀಟರ್ ಅಂತರದಲ್ಲಿ ಈ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ಶಬ್ದ ಮತ್ತು ತೀವ್ರತೆ 100 ಕಿಲೋಮೀಟರ್‌ವರೆಗೂ ಹಬ್ಬಿತ್ತು ಎಂದು ಜನ ಹೇಳುತ್ತಿದ್ದಾರೆ. ಇಡೀ ದಕ್ಷಿಣ ಭಾರತಕ್ಕೆ ಜೀವನಾಡಿ ಆಗಿರುವ ಪಶ್ಚಿಮ ಘಟ್ಟಗಳ ಸೂಕ್ಷ್ಮ ವಲಯದ ತಪ್ಪಲಿನಲ್ಲಿ ಮೂರು ದೊಡ್ಡ ದೊಡ್ಡ ಅಣೆಕಟ್ಟುಗಳಿವೆ.

opposition-leader-siddaramaiah talk
ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ
author img

By

Published : Jan 22, 2021, 7:17 PM IST

ಬೆಂಗಳೂರು: ಗುರುವಾರ ರಾತ್ರಿ ಶಿವಮೊಗ್ಗದ ಕಣ್ಣಳತೆ ದೂರದಲ್ಲಿರುವ ಹುಣಸೋಡು ಗ್ರಾಮದ ಬಳಿ ಸಂಗ್ರಹಿಸಿದ್ದ ಜೆಲೆಟಿನ್ ಕಡ್ಡಿ ಮತ್ತು ಡೈನಮೈಟ್‍ಗಳು ಸ್ಫೋಟಗೊಂಡ ವಿಚಾರ ಆಘಾತಕಾರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಿಲೆಟಿನ್ ಸ್ಫೋ​​ಟ ಸ್ಥಳಕ್ಕೆ ಸಚಿವ ನಿರಾಣಿ ಭೇಟಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ಮುಖ್ಯಮಂತ್ರಿ ಮತ್ತು ಮತ್ತೊಬ್ಬರು ಪ್ರಭಾವಿ ಸಚಿವರಿರುವ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಇದು ಅಚಾನಕ್ಕಾಗಿ ನಡೆದ ಘಟನೆ ಅಲ್ಲ. ಈ ಹಿಂದೆ ಅಲ್ಲಿನ ಅನೇಕ ಪ್ರಜ್ಞಾವಂತ ನಾಗರೀಕರು, ಗ್ರಾಮಸ್ಥರು ಅಕ್ರಮ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ಪ್ರತಿಭಟನೆಗೆ ಮಣಿದು ಅಧಿಕಾರಿಗಳು ಅಕ್ರಮ ನಡೆಸುತ್ತಿರುವವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ‘ನಿಮ್ಮ ಮತ್ತು ನಿಮ್ಮ ಊರಿನ ಒಳ್ಳೆಯದಕ್ಕೆ ಕಣ್ಣು ಮುಚ್ಚಿಕೊಂಡಿರಿ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪನವರು ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ತಾಕೀತು ಮಾಡಿರುವುದಾಗಿ ಪತ್ರಿಕೆಗಳಲ್ಲಿ ವರದಿ ಆಗಿದೆ. ಕೇವಲ ಕ್ರಷರ್ ನಡೆಸಲು ಅನುಮತಿ ಪಡೆದು 300 ಅಡಿ ಆಳದವರೆಗೂ ಕಾನೂನು ಬಾಹಿರವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಈಗ ಬಹಿರಂಗವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಭದ್ರಾ ಅಣೆಕಟ್ಟಿನಿಂದ ಕೇವಲ 20 ಕಿಲೋಮೀಟರ್ ಅಂತರದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ಶಬ್ದ ಮತ್ತು ತೀವ್ರತೆ 100 ಕಿಲೋಮೀಟರ್ ರವರೆಗೂ ಇತ್ತು ಎಂದು ಜನ ಹೇಳುತ್ತಿದ್ದಾರೆ. ಇಡೀ ದಕ್ಷಿಣ ಭಾರತಕ್ಕೆ ಜೀವನಾಡಿ ಆಗಿರುವ ಪಶ್ಚಿಮ ಘಟ್ಟಗಳ ಸೂಕ್ಷ್ಮ ವಲಯದ ತಪ್ಪಲಿನಲ್ಲಿ ಮೂರು ದೊಡ್ಡ ದೊಡ್ಡ ಅಣೆಕಟ್ಟುಗಳಿವೆ. ಈ ಅಣೆಕಟ್ಟುಗಳಿಗೆ ಸ್ವಲ್ಪ ಹೆಚ್ಚು ಕಡಿಮೆ ಆದರೂ ಕರ್ನಾಟಕ, ಆಂಧ್ರ, ತೆಲಂಗಾಣ ಸೇರಿದಂತೆ ಇಡೀ ದಕ್ಷಿಣ ಭಾರತವೇ ಭೀಕರ ದುರಂತಕ್ಕೆ ಸಾಕ್ಷಿ ಆಗುತ್ತದೆ. ಈ ಕುರಿತು ಸಾಮಾನ್ಯ ಜ್ಞಾನವೂ ಇಲ್ಲದೆ ಗಣಿಗಾರಿಕೆ ನಡೆಸುತ್ತಿರುವುದು ಅಕ್ಷಮ್ಯವಾದ ಸಂಗತಿಯಾಗಿದೆ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಹಾ ಸ್ಫೋಟ... ಜವರಾಯನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಮಲೆನಾಡು!

ಇದೇ ಜಿಲ್ಲೆಯ ಬಿಜೆಪಿ ಮುಖಂಡರಾದ ಹಾಗೂ ಮಾಜಿ ಸಂಸದರೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ಅವರು, ‘ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ನಿಜ. ಇಲ್ಲಿ ನೂರಾರು ಅಕ್ರಮ ಕ್ರಷರ್​​ಗಳಿವೆ. ಮರಳು ಮತ್ತು ಗಣಿ ಮಾಫಿಯಾ ಕೆಲಸ ಮಾಡುತ್ತಿದೆ. ಮರಳು ಮಾಫಿಯಾ ಮೇಲೆ ದಾಳಿ ನಡೆಸುತ್ತಿದ್ದ ತಹಶೀಲ್ದಾರ್ ಅವರನ್ನು ಶಿವಮೊಗ್ಗದಿಂದ ವರ್ಗಾವಣೆ ಮಾಡಲಾಯಿತು’ ಎಂದು ಆರೋಪ ಮಾಡಿದ್ದಾರೆ. ಈ ಆರೋಪವು ಸರ್ಕಾರದ ಭ್ರಷ್ಟ ಮತ್ತು ದುಷ್ಟ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಸರ್ಕಾರ ನಡೆಸುವ ಯಾವುದೇ ರೀತಿಯ ತನಿಖೆಗಳಿಂದ ಸತ್ಯ ಹೊರಗೆ ಬರಲಾರದು. ಏಕೆಂದರೆ ಸರ್ಕಾರ ನಡೆಸುವವರೇ ಈ ಮಾಫಿಯಾದಲ್ಲಿ ಭಾಗಿ ಆಗಿದ್ದಾರೆ ಎಂಬ ಅರ್ಥದಲ್ಲಿ ಆಯನೂರು ಮಂಜುನಾಥ್ ಅವರು ಮಾತನಾಡಿದ್ದಾರೆ. ಸಮರ್ಪಕ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಾದರೆ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಬೇಕೆಂದು ಒತ್ತಾಯಿಸುತ್ತೇನೆ.

ಸರ್ಕಾರದ ಬೇಜವಾಬ್ದಾರಿತನದಿಂದ ಮಡಿದಿರುವ ಎಲ್ಲಾ ಕಾರ್ಮಿಕರ ಕುಟುಂಬಗಳಿಗೆ ನ್ಯಾಯಯುತವಾದ ಪರಿಹಾರವನ್ನು ನೀಡಬೇಕು. ಸ್ಥಳೀಯ ಕಾರ್ಮಿಕರಿದ್ದರೆ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗಗಳನ್ನು ನೀಡಬೇಕು. ಸ್ಫೋಟದಿಂದಾಗಿ ಹಾನಿಯಾಗಿರುವ ಮನೆಗಳನ್ನು ಸರ್ಕಾರವೇ ಕಟ್ಟಿಸಿಕೊಡಬೇಕು. ಇದೆಲ್ಲದಕ್ಕಿಂತ ಮುಖ್ಯವಾಗಿ ಅಕ್ರಮವಾಗಿ ನಡೆಯುತ್ತಿರುವ ಎಲ್ಲಾ ಗಣಿಗಾರಿಕೆಗಳನ್ನೂ ಈ ಕೂಡಲೇ ಸ್ಥಗಿತಗೊಳಿಸಲು ಆದೇಶಿಸಬೇಕೆಂದು ಹಾಗೂ ಘಟನೆಗೆ ಮತ್ತು ಅಕ್ರಮ ಗಣಿಗಾರಿಕೆಗೆ ಕಾರಣಕರ್ತರಾದ ಸರ್ಕಾರಿ ಅಧಿಕಾರಿಗಳಿಗೆ ಕಠಿಣ ರೀತಿಯ ಶಿಕ್ಷೆ ವಿಧಿಸಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.