ETV Bharat / state

ಸಂಪುಟದಿಂದ ಈಶ್ವರಪ್ಪ ಕೈ ಬಿಡುವಂತೆ ಆಗ್ರಹಿಸಿ ನಿಲುವಳಿ ಸೂಚನೆ: ಸಿದ್ದರಾಮಯ್ಯ - KS Eshwarappa controversial statement of national flag

ಕೆ.ಎಸ್​.ಈಶ್ವರಪ್ಪ ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಏರಿಸುತ್ತೇವೆ ಎಂದು ಹೇಳಿರುವುದು ದೇಶದ್ರೋಹದ ಕೆಲಸ. ಹಾಗಾಗಿ, ಅವರು ಸರ್ಕಾರದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಈ ಬಗ್ಗೆ ನಿಲುವಳಿ ಸೂಚನೆ ನೀಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ

author img

By

Published : Feb 16, 2022, 10:44 AM IST

ಬೆಂಗಳೂರು: ಕೆಂಪುಕೋಟೆ ಮೇಲಿರುವ ರಾಷ್ಟ್ರಧ್ವಜ ಇಳಿಸಿ ಕೇಸರಿ‌ ಧ್ವಜ ಹಾರಿಸುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇದು ರಾಷ್ಟ್ರಧ್ವಜಕ್ಕೆ ಅಗೌರವ ಸೂಚಿಸಿದಂತೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಿನ್ನೆ ರಾತ್ರಿ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್​ ನಾಯಕರ ಸಭೆಯಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ. ಸಂವಿಧಾನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಏರಿಸುತ್ತೇವೆ ಎಂದು ಹೇಳಿರುವುದು ದೇಶದ್ರೋಹದ ಕೆಲಸ. ಹಾಗಾಗಿ, ಅವರು ಸರ್ಕಾರದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಈ ಬಗ್ಗೆ ನಿಲುವಳಿ ಸೂಚನೆ ನೀಡುತ್ತೇವೆ ಎಂದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ

ಹಿಜಾಬ್ ಮತ್ತು ಕೇಸರಿ ಶಾಲು ವಿಚಾರ ಮಾತನಾಡಿ, ಅಲ್ಪಸಂಖ್ಯಾತರ ಪರ ಮೊದಲಿಂದಲೂ ಪಕ್ಷ ಇದೆ. ಅಲ್ಪಸಂಖ್ಯಾತರಿಗೆ, ಸಂವಿಧಾನಕ್ಕೆ ಗೌರವ ನೀಡುತ್ತಾ ಬಂದಿದ್ದೇವೆ. ಜಾತ್ಯಾತೀತದ ಬಗ್ಗೆ ಸಂವಿಧಾನದ ಆಶಯಗಳನ್ನು ಪಾಲಿಸುವುದು ಪಕ್ಷದ ಕರ್ತವ್ಯ. ಪಕ್ಷದ ಸ್ಟ್ಯಾಂಡ್ ಕ್ಲಿಯರ್ ಇರಲಿಲ್ಲ, ಪಕ್ಷದ ಹಿರಿಯರ ಜೊತೆ ಚರ್ಚೆ ಮಾಡಿ ಒಂದು ನಿಲುವು ತೆಗೆದುಕೊಂಡಿದ್ದೇವೆ.

ಮೊದಲಿಂದಲೂ ಎಲ್ಲಾ ಧರ್ಮಗಳಲ್ಲಿ ಅವರದ್ದೇ ಆದ ಪಾಲನೆ ಇದೆ. ಯಾವ ರೀತಿ ವಸ್ತ್ರ ಧರಿಸಬೇಕು, ಏನು ಮಾಡಬೇಕು ಎಂದು ಸಂವಿಧಾನದಲ್ಲಿದೆ. ಸಂವಿಧಾನ ನಮಗೆ ಹಕ್ಕು ಕೊಟ್ಟಿದೆ. ಫೆಬ್ರವರಿ 5ರ ಮೊದಲು ಎಲ್ಲ ಸರಿಯಿತ್ತು. ರಾಜ್ಯದಲ್ಲಿ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನೊಂದ ಸಮಾಜಕ್ಕೆ ಧ್ವನಿಯಾಗುವ ಜವಾಬ್ದಾರಿ ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳುತ್ತದೆ. ಇದು ಕಾಂಗ್ರೆಸ್ ಪಕ್ಷದ ಸ್ಪಷ್ಟ ನಿಲುವು ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.