ETV Bharat / state

ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಇರಲೇಬೇಕು: ಸಿದ್ದರಾಮಯ್ಯ - Debate on the Constitution in the Assembly

ಈ ನೆಲದಲ್ಲಿ ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಇರಲೇಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ವಿಧಾನಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಸಂವಿಧಾನ ರಚನೆಯಾದ ಹತ್ತು ವರ್ಷಗಳಲ್ಲಿ ತಳ ಸಮುದಾಯಗಳಿಗೆ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದೊರೆಯುತ್ತದೆ ಎಂದು ಡಾ. ಬಿ.ಆರ್.ಅಂಬೇಡ್ಕರ್ ಭಾವಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

Opposition leader Siddaramaiah
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Mar 6, 2020, 4:16 PM IST

ಬೆಂಗಳೂರು: ಈ ನೆಲದಲ್ಲಿ ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಇರಲೇಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ವಿಧಾನಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಸಂವಿಧಾನ ರಚನೆಯಾದ ಹತ್ತು ವರ್ಷಗಳಲ್ಲಿ ತಳ ಸಮುದಾಯಗಳಿಗೆ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದೊರೆಯುತ್ತದೆ ಎಂದು ಡಾ. ಬಿ.ಆರ್.ಅಂಬೇಡ್ಕರ್ ಭಾವಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಹತ್ತು ವರ್ಷಗಳಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದಲಿತ ಸಮುದಾಯಕ್ಕೆ ದೊರೆಯಲಿಲ್ಲ. ಹೀಗಾಗಿ ಅಂಬೇಡ್ಕರ್ ಅವರ ನಿರೀಕ್ಷೆ ಈಡೇರಲಿಲ್ಲ. ಆದರೆ ಅಂಬೇಡ್ಕರ್ ಅವರೇ ಒಂದು ಕಡೆ, ಎಲ್ಲಿಯವರೆಗೆ ಈ ದೇಶದಲ್ಲಿ ಜಾತಿಯ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೆ ಮೀಸಲಾತಿಯ ಅಗತ್ಯವೂ ಇದೆ ಎಂದು ಹೇಳಿದ್ದಾರೆ ಎಂದು ಹೇಳಿದರು. ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದೊರೆಯುತ್ತದೆ ಎಂದು ಅಂಬೇಡ್ಕರ್ ಭಾವಿಸಿದ್ದೇನೋ ಸರಿ. ಆದರೆ ಅದು ಈಡೇರಲಿಲ್ಲ. ಜಾತಿ ವ್ಯವಸ್ಥೆ ಮಾತ್ರ ಉಳಿಯಿತು. ಹೀಗಾಗಿ ಮೀಸಲಾತಿ ಸೌಲಭ್ಯವನ್ನು ಒದಗಿಸಲೇಬೇಕಾದ ಸ್ಥಿತಿ ಇದೆ ಎಂದರು.

ವಿಧಾನಸಭೆಯಲ್ಲಿ ಸಂವಿಧಾನದ ಕುರಿತು ಚರ್ಚೆ

ಸಂವಿಧಾನದ ಆಶಯದಂತೆ ಈ ದೇಶದಲ್ಲಿ ರಾಜಕೀಯ ನ್ಯಾಯ ಒಂದು ಮಟ್ಟದಲ್ಲಾದರೂ ಸಿಕ್ಕಿದೆ. ಇದರ ಫಲವಾಗಿ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳಲ್ಲಿ ಪರಿಶಿಷ್ಟರು ಆಯ್ಕೆಯಾಗಿ ಬರುತ್ತಿದ್ದಾರೆ. ಹೀಗೆ ಶೋಷಿತರಿಗೆ ರಾಜಕೀಯ ನ್ಯಾಯ ಸಿಕ್ಕಿದರೂ ಸಾಮಾಜಿಕ, ಆರ್ಥಿಕ ನ್ಯಾಯ ಸಿಕ್ಕಿಲ್ಲ. ಎಲ್ಲಿಯವರೆಗೆ ಇದು ಸಿಗುವುದಿಲ್ಲವೋ ಅಲ್ಲಿಯವರೆಗೆ ಸಂವಿಧಾನದ ಆಶಯಗಳು ಪೂರ್ಣವಾಗಿ ಈಡೇರಿದಂತಲ್ಲ ಎಂದು ಹೇಳಿದರು. ಇವತ್ತಿಗೂ ಈ ದೇಶದ ಶೇ. 70ರಷ್ಟು ಹಳ್ಳಿಗಳಲ್ಲಿ ಜಾತಿ ವ್ಯವಸ್ಥೆ ಉಳಿದಿದೆ. ಇದು ನಿವಾರಣೆಯಾಗಬೇಕು. ಹಾಗೆಯೇ ಮೀಸಲಾತಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದ್ದು, ಇದು ಬೇಕಿಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.