ETV Bharat / state

ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಸರ್ಕಾರ ತನಿಖೆ ನಡೆಸಿ ಜನರಿಗೆ ತಿಳಿಸಲಿ: ಸಿದ್ದರಾಮಯ್ಯ

ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ. ವಿವಾದದ ಮುಂದೆ ಯಾರಿದ್ದಾರೆ ಎನ್ನುವುದನ್ನು ರಾಜ್ಯ, ದೇಶ, ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಯಾವಾಗ? ಮುಖ್ಯಮಂತ್ರಿಗಳೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ..

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Feb 9, 2022, 6:48 PM IST

ಬೆಂಗಳೂರು : ಹಿಜಾಬ್- ಕೇಸರಿ ಶಾಲು ವಿವಾದದ ಕುರಿತಂತೆ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಶಿಕ್ಷಣ ಹಕ್ಕು ಎಂಬ ಟ್ಯಾಗ್‌ಲೈನ್‌ನಡಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್-ಕೇಸರಿ ಶಾಲು ವಿವಾದ ಹೊತ್ತಿ ಉರಿಯ ತೊಡಗಿದ ನಂತರ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರಿಗೆ ಇದರ ಹಿಂದೆ ಎಸ್ ಡಿಪಿಐ-ಸಿಎಫ್‌ಐ ಇರಬಹುದೆಂಬ ಶಂಕೆ ಮೂಡಿದೆಯಂತೆ. ಈವರೆಗೆ ಇವರ ಗೃಹ ಸಚಿವರು, ಪೊಲೀಸರು, ಇಂಟಲಿಜೆನ್ಸ್ ಏನು ಮಾಡ್ತಿದ್ದರು? ಎಂದು ಪ್ರಶ್ನಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಕೆ ಎಸ್ ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಕಾಂಗ್ರೆಸ್ ಇದೆ ಎನ್ನುತ್ತಿದ್ದಾರೆ. ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರಿಗೆ ಸಿಎಫ್​​ಐ ಮೇಲೆ ಶಂಕೆಯಂತೆ. ಮೊದಲು ಎಲ್ಲರೂ ಕೂಡಿ ಒಂದು ತೀರ್ಮಾನಕ್ಕೆ ಬರುವುದು ಒಳ್ಳೆಯದು ಎಂದಿದ್ದಾರೆ.

ಎಸ್​​ಡಿಪಿಐಯೋ, ಸಿಎಫ್ಐಯೋ ವಿದ್ಯಾರ್ಥಿಗಳ ನಡುವೆ ಕೋಮು ಸಂಘರ್ಷ ಹುಟ್ಟು ಹಾಕುತ್ತಿರುವವರು ಯಾರೇ ಇರಲಿ, ಅಂತಹವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ. ಇನ್ನೂ ಶಂಕೆ-ಅನುಮಾನ ಎಂದು ಕಾಲಹರಣ ಯಾಕೆ ಮಾಡುತ್ತೀರಿ? ಆರೋಪಿಗಳ ಜೊತೆ ಏನಾದರೂ ಒಳಒಪ್ಪಂದ ನಡೆದಿದೆಯೇ? ಮುಖ್ಯಮಂತ್ರಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.

ಹಿಜಾಬ್ ಧಾರಣೆ ಸರಿ-ತಪ್ಪು ಬಗ್ಗೆ ನ್ಯಾಯಾಲಯ ನಿರ್ಧರಿಸಲಿ, ಅಲ್ಲಿಯವರೆಗೆ ಕಾಯೋಣ. ಆದರೆ, ವಿದ್ಯಾರ್ಥಿನಿಗಳ ಮೇಲೆ ಹಲ್ಲೆಗೆ ಪ್ರಯತ್ನ, ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಅಪರಾಧ ಹೌದಾದರೆ ಮೊದಲು ಈ ಪುಂಡು ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಿ ಮುಖ್ಯಮಂತ್ರಿ ಗಳೆ.

ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಸರ್ಕಾರ ತನಿಖೆ ನಡೆಸಿ ಪತ್ತೆ ಹಚ್ಚಿ ಜನರಿಗೆ ತಿಳಿಸಲಿ. ವಿವಾದದ ಮುಂದೆ ಯಾರಿದ್ದಾರೆ ಎನ್ನುವುದನ್ನು ರಾಜ್ಯ, ದೇಶ, ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಯಾವಾಗ? ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ : ಸಿಜೆ ಅಂಗಳಕ್ಕೆ ಹಿಜಾಬ್​​ ಕೇಸ್.. ಇಂದಿನ ವಾದ- ಪ್ರತಿವಾದ ಹೀಗಿತ್ತು!​​​​​​​​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.