ETV Bharat / state

ಶಿವಮೊಗ್ಗ ಸ್ಫೋಟದ ತನಿಖೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ, ಕಾಂಗ್ರೆಸ್​ ನಾಯಕರ ಸಂತಾಪ - ಶಿವಮೊಗ್ಗ ಸ್ಫೋಟದ ತನಿಖೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಮುಂತಾದ ಕಾಂಗ್ರೆಸ್​ ನಾಯಕರು ಸಂತಾಪ ಸೂಚಿಸಿದ್ದಾರೆ.

Opposition leader Siddaramaiah urges probe into Shimoga blast
ಶಿವಮೊಗ್ಗ ಸ್ಫೋಟದ ತನಿಖೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ
author img

By

Published : Jan 22, 2021, 10:16 AM IST

ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿ ಸ್ಫೋಟಗೊಂಡು 8 ಜನ ಕಾರ್ಮಿಕರು ಸಾವನ್ನಪ್ಪಿರುವ ಘಟನೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.

  • Very pained to know about the death of labourers in Shivamogga, due to explosion of truck carrying gelatin.

    I urge @CMofKarnataka to initiate an impartial & strict enquiry about the incident, & punish the guilty.

    My deepest condolences to the family members of the victims.

    — Siddaramaiah (@siddaramaiah) January 22, 2021 " class="align-text-top noRightClick twitterSection" data=" ">

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜಿಲೆಟಿನ್ ಸಾಗಿಸುತ್ತಿದ್ದ ಲಾರಿ ಸ್ಫೋಟದಿಂದಾಗಿ ಶಿವಮೊಗ್ಗದಲ್ಲಿ ಕಾರ್ಮಿಕರ ಸಾವನ್ನಪ್ಪಿರುವ ಬಗ್ಗೆ ತಿಳಿದು ತುಂಬಾ ನೋವಾಗಿದೆ. ಈ ಘಟನೆಯ ಬಗ್ಗೆ ರಾಜ್ಯ ಸರ್ಕಾರ ನಿಷ್ಪಕ್ಷಪಾತ ಮತ್ತು ಕಠಿಣ ವಿಚಾರಣೆಯನ್ನು ಪ್ರಾರಂಭಿಸಲು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಸಂತ್ರಸ್ತರ ಕುಟುಂಬ ಸದಸ್ಯರಿಗೆ ನನ್ನ ಸಾಂತ್ವನ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಕಾರ್ಮಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು ಆಘಾತ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದು, ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಲಾರಿಯಲ್ಲಿದ್ದ ಜಿಲೆಟಿನ್ ಸ್ಫೋಟಗೊಂಡು ಅನೇಕ ಕಾರ್ಮಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು ಆಘಾತವಾಯಿತು. ಮೃತರ ಆತ್ಮಕೆ ಶಾಂತಿ ಕೋರುತ್ತಾ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲೆಂದು ಹಾರೈಸುತ್ತೇನೆ. ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

  • ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ ಸುದ್ದಿ ತಿಳಿದು ಬೇಸರವಾಯಿತು. ಭಗವಂತನು ಅವರ ಕುಟುಂಬದವರಿಗೆ ಈ ದುರಂತದಿಂದಾಗಿರುವ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

    ಓಂ ಶಾಂತಿ

    — K S Eshwarappa (@ikseshwarappa) January 22, 2021 " class="align-text-top noRightClick twitterSection" data=" ">

ಇದು ತೀವ್ರ ದುಃಖಕರ ಸಂಗತಿ: ಕರ್ನಾಟಕ ಕಾಂಗ್ರೆಸ್ ಪಕ್ಷ ಟ್ವೀಟ್​ ಮಾಡಿದ್ದು, ಶಿವಮೊಗ್ಗದ ಹುಣಸೋಡು ಸಮೀಪ ನಡೆದ ಕಲ್ಲು ಗಣಿಗಾರಿಕೆಯ ಸ್ಫೋಟದ ದುರಂತದಲ್ಲಿ ಸುಮಾರು 15 ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಾಗಿ ತಿಳಿದುಬಂದಿದ್ದು, ಈ ಸುದ್ದಿ ತೀವ್ರ ದುಃಖಕರ ಹಾಗೂ ಆಘಾತಕಾರಿ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪ್ರಾರ್ಥಿಸಿದ್ದಾರೆ.

  • ಶಿವಮೊಗ್ಗದ ಹುಣಸೋಡು ಸಮೀಪ ನಡೆದ ಕಲ್ಲು ಗಣಿಗಾರಿಕೆಯ ಡೈನಾಮೈಟ್ ಸ್ಫೋಟದ ದುರಂತದಲ್ಲಿ ಸುಮಾರು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಾಗಿ ತಿಳಿದುಬಂದಿದ್ದು, ಈ ಸುದ್ದಿ ತೀವ್ರ ದುಃಖಕರ ಹಾಗೂ ಆಘಾತಕಾರಿ ಸಂಗತಿ.

    ಮೃತರ ಆತ್ಮಕ್ಕೆ ಶಾಂತಿ ಸಿಗಲಿ,ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ.

    — Karnataka Congress (@INCKarnataka) January 22, 2021 " class="align-text-top noRightClick twitterSection" data=" ">

ಕಾಂಗ್ರೆಸ್​ ನಾಯಕರ ಸಂತಾಪ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಮುಂತಾದ ನಾಯಕರು ಸಹ ಘಟನೆಯನ್ನು ತನಿಖೆ ನಡೆಸುವಂತೆ ಒತ್ತಾಯಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ: ಈಟಿವಿ ಭಾರತ ಗ್ರೌಂಡ್​ ರಿಪೋರ್ಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.