ETV Bharat / state

ವಿಧಾನಸಭೆಯನ್ನು ವಿಸರ್ಜಿಸಿ, ಚುನಾವಣೆ ಎದುರಿಸಿ: ಸಿಎಂಗೆ ಸಿದ್ದರಾಮಯ್ಯ ಸವಾಲು - Bengaluru latest news

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ನೈತಿಕತೆ ಇಲ್ಲ. ಈ ಎಲ್ಲಾ ತಿದ್ದುಪಡಿಗಳಿಂದ ರೈತರ ಕಲ್ಯಾಣವಾಗುವುದಿಲ್ಲ. ಸಿಎಂ ಯಡಿಯೂರಪ್ಪ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ ಇದೇ ವಿಷಯವನ್ನು ರಾಜ್ಯದ ಜನತೆಯ ಮುಂದಿಟ್ಟು ಚುನಾವಣೆಯನ್ನು ಎದುರಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ
ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Sep 28, 2020, 2:04 PM IST

ಬೆಂಗಳೂರು: ವಿಧಾನಸಭೆಯನ್ನು ವಿಸರ್ಜಿಸಿ, ಚುನಾವಣೆ ಎದುರಿಸಿ ಎಂದು ಸಿಎಂ ಯಡಿಯೂರಪ್ಪಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೇ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ನೈತಿಕತೆ ಇಲ್ಲ. ಈ ತಿದ್ದುಪಡಿಗಳಿಂದ ರೈತರ ಕಲ್ಯಾಣವಾಗುತ್ತದೆ ಎಂಬ ಭರವಸೆ ಇದ್ದರೆ ಬಿ.ಎಸ್.ಯಡಿಯೂರಪ್ಪನವರು ಮೊದಲು ವಿಧಾನಸಭೆಯನ್ನು ವಿಸರ್ಜಿಸಿ ಇದೇ ವಿಷಯವನ್ನು ರಾಜ್ಯದ ಜನತೆಯ ಮುಂದಿಟ್ಟು ಚುನಾವಣೆಯನ್ನು ಎದುರಿಸಬೇಕು. ಕೊರೊನಾ ಸಂಕಟದಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ರೈತರು ಪ್ರತಿಭಟನೆ ನಡೆಸಲಾರರು ಎಂಬ ದುಷ್ಟ ಆಲೋಚನೆಯಿಂದಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಮೀಲಾಗಿ ಈ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರಲು ತರಾತುರಿಯಲ್ಲಿ ಹೊರಟಿದೆ. ಆದರೆ ಇಡೀ ದೇಶದ ರೈತರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಬೀದಿಗಿಳಿದು ಭಾರತೀಯ ಜನತಾ ಪಕ್ಷದ ಹುನ್ನಾರವನ್ನು ವಿಫಲಗೊಳಿಸಿದ್ದಾರೆ ಎಂದಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪನವರು ಮಾತು ಮಾತಿಗೆ ತಾನು ರೈತ ನಾಯಕನೆಂದು ಕರೆದುಕೊಳ್ಳುತ್ತಾರೆ. ಸಂಘ ಪರಿವಾರದ ಕೇಸರಿಶಾಲು ಕಿತ್ತುಹಾಕಿ ಹಸಿರು ಶಾಲು ಹೊದ್ದುಕೊಂಡು ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಹಸಿರು ಶಾಲಿನ ಒಳಗಿದ್ದ ರೈತ ವಿರೋಧಿ ಕೇಸರಿ ಶಾಲು ಹೊರಗೆ ಬಂದಿದೆ. ಯಡಿಯೂರಪ್ಪನವರು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದರು. ಈ ಬಾರಿ ಮುಖ್ಯಮಂತ್ರಿಯಾದಾಗ ಇಡೀ ರೈತ ಸಮುದಾಯವನ್ನೇ ಸಾಯಿಸಲು ಹೊರಟಿದ್ದಾರೆ. ರೈತರ ಕಣ್ಣೀರ ಶಾಪ ಈ ಪಕ್ಷ ಮತ್ತು ಸರ್ಕಾರಕ್ಕೆ ತಟ್ಟದೇ ಇರದು ಎಂದಿದ್ದಾರೆ.

ಭಾರತೀಯ ಜನತಾ ಪಕ್ಷ ಹುಟ್ಟಿನಿಂದಲೇ ರೈತ ವಿರೋಧಿ. ಅದು ಬಂಡವಾಳಿಗರು, ಉದ್ಯಮಿಗಳು ಮತ್ತು ವರ್ತಕರ ಪಕ್ಷ. ಈ ಪಕ್ಷದ ಡಿಎನ್ಎನಲ್ಲಿ ರೈತ ವಿರೋಧಿ ವಿಷ ಇದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾವೇರಿ-ಕೃಷ್ಣ ನದಿ ನೀರು ಹಂಚಿಕೆಯಲ್ಲಿ ದ್ರೋಹ ಎಸಗಿತು. ಮಹದಾಯಿ-ಮೇಕೆದಾಟು ಯೋಜನೆಗಳಲ್ಲಿ ಮೋಸ ಮಾಡಿದೆ. ಬಿಜೆಪಿಗೆ ಯಾಕೆ ರೈತರ ಮೇಲೆ ಇಷ್ಟೊಂದು ದ್ವೇಷ? ಕರ್ನಾಟಕದ ಬಗ್ಗೆ ಯಾಕೆ ಸೇಡಿನ ಭಾವನೆ? ಎನ್ನುವ ಪ್ರಶ್ನೆಗೆ ರಾಜ್ಯದ ಜನತೆಗೆ ಈಗ ಉತ್ತರ ಸಿಕ್ಕಿದೆ. ಯಡಿಯೂರಪ್ಪನವರು ನಿಜವಾಗಿಯೂ ರೈತರ ಪರವಾಗಿದ್ದರೆ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರ ಜೊತೆ ನಿಂತುಕೊಳ್ಳಬೇಕು ಎಂದಿದ್ದಾರೆ.

ದೇಶವನ್ನು ಕಾರ್ಪೋರೇಟ್ ಕುಳಗಳಿಗೆ ಮತ್ತು ರಿಯಲ್ ಎಸ್ಟೇಟ್ ಧಣಿಗಳಿಗೆ ಮಾರಾಟ ಮಾಡಲು ಹೊರಟಿರುವ ಮೋದಿಯವರ ತಾಳಕ್ಕೆ ನೀವು ಕುಣಿಯತೊಡಗಿದರೆ ವರ್ತಮಾನ ಮಾತ್ರವಲ್ಲ ಇತಿಹಾಸ ಕೂಡ ಬಿ.ಎಸ್. ಯಡಿಯೂರಪ್ಪ ಅವರನ್ನು ಕ್ಷಮಿಸಲಾರದು. ಈಗಲೂ ಕಾಲ ಮಿಂಚಿಲ್ಲ, ಯಡಿಯೂರಪ್ಪನವರು ಆತ್ಮಸಾಕ್ಷಿಗೆ ಕರೆಗೊಟ್ಟು ರೈತರ ಬೇಡಿಕೆ ಒಪ್ಪಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.