ETV Bharat / state

'ಸಚಿವ ಶಿವಾನಂದ ಪಾಟೀಲರಿಗೆ ರೈತರನ್ನು ನಿಂದಿಸಿ ಅವಹೇಳನ ಮಾಡುವ ಉಸ್ತುವಾರಿ ವಹಿಸಿಕೊಟ್ಟಂತಿದೆ': ಬಿವೈ ವಿಜಯೇಂದ್ರ - ವಿವಿಧೋದ್ದೇಶ ಸಹಕಾರಿ ಸಂಘದ 75ನೇ ವಾರ್ಷಿಕೋತ್ಸವ

ಬೆಳಗಾವಿ ಜಿಲ್ಲೆಯಲ್ಲಿ ವಿವಿಧೋದ್ದೇಶ ಸಹಕಾರಿ ಸಂಘದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ ಪಾಟೀಲ್​ ತಮ್ಮ ಭಾಷಣದಲ್ಲಿ ರೈತರ ಕುರಿತಾಗಿ ನೀಡಿದ ಹೇಳಿಕೆಗೆ ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

by vijayendra, minister sivananda patil
ಬಿವೈ ವಿಜಯೇಂದ್ರ, ಶಿವಾನಂದ ಪಾಟೀಲ್​
author img

By ETV Bharat Karnataka Team

Published : Dec 25, 2023, 1:07 PM IST

Updated : Dec 25, 2023, 5:37 PM IST

ಬೆಂಗಳೂರು: ಈ ಹಿಂದೆ ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎನ್ನುವ ಹೇಳಿಕೆ ನೀಡಿದ್ದ ಸಚಿವ ಶಿವಾನಂದ ಪಾಟೀಲ್​ ಇದೀಗ ಸಾಲ ಮನ್ನಾ ಆಸೆಗಾಗಿ ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂದು ಮತ್ತೊಮ್ಮೆ ರೈತರಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಪದೇ ಪದೆ ಅನ್ನದಾತರನ್ನು ಅವಮಾನಿಸುವುದು, ರೈತರ ಜೀವನ ಹಂಗಿಸುವುದು, ರೈತರ ಮೇಲೆ ದೌರ್ಜನ್ಯ ನಡೆಸುವುದು, ಕಾಂಗ್ರೆಸ್​ ತನ್ನ ಸಂಸ್ಕೃತಿಯನ್ನಾಗಿ ಅಳವಡಿಸಿಕೊಂಡಂತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​​ ಸರ್ಕಾರದ ಸಚಿವ ಶಿವಾನಂದ ಪಾಟೀಲ್​ರಿಗೆ ರೈತರನ್ನು ನಿಂದಿಸಿ ಅವಹೇಳನ ಮಾಡುವ ಉಸ್ತುವಾರಿ ವಹಿಸಿಕೊಟ್ಟಂತಿದೆ. ಈ ಹಿಂದೆಯೂ ಶಿವಾನಂದ ಪಾಟೀಲರು 'ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ' ಎಂದು ಅಮೂಲ್ಯ ರೈತ ಜೀವಗಳನ್ನು ಹಗುರವಾಗಿ ಪರಿಗಣಿಸಿ ಅಮಾನವೀಯ ಹೇಳಿಕೆ ನೀಡಿದ್ದ ನೆನಪು ಇನ್ನೂ ಹಸಿರಾಗಿರುವಾಗಲೇ, ಮತ್ತೆ ಅದೇ ದಾಟಿಯ ಅವರ ರೈತ ದ್ವೇಷಿ ಮಾತುಗಳು ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಸ್ಪಷ್ಟವಾಗಿ ಪ್ರತಿನಿಧಿಸುತ್ತದೆ. 'ಬರಗಾಲ ಬರಲೆಂದೇ ಅಪೇಕ್ಷಿಸುತ್ತಾರೆ' ಎಂಬ ವಂಗ್ಯದ ಮಾತುಗಳು ರೈತರ ಮೇಲಿನ ಕ್ರೌರ್ಯದ ಮನಸ್ಥಿತಿ ಪ್ರತಿಬಿಂಬಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ಮೂಲಕ ಟೀಕಿಸಿದ್ದಾರೆ.

  • ಪದೇ ಪದೇ ಅನ್ನದಾತರನ್ನು ಅವಮಾನಿಸುವುದು, ರೈತರ ಜೀವನವನ್ನು ಹಂಗಿಸುವುದು, ರೈತರ ಮೇಲೆ ದೌರ್ಜನ್ಯ ನಡೆಸುವುದು, ಕಾಂಗ್ರೆಸ್ ತನ್ನ ಸಂಸ್ಕೃತಿಯನ್ನಾಗಿ ಅಳವಡಿಸಿಕೊಂಡಂತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಶಿವಾನಂದ ಪಾಟೀಲರಿಗೆ ರೈತರನ್ನು ನಿಂದಿಸಿ ಅವಹೇಳನ ಮಾಡುವ ಉಸ್ತುವಾರಿ ವಹಿಸಿಕೊಟ್ಟಂತಿದೆ.

    ಈ ಹಿಂದೆಯೂ ಶಿವಾನಂದ ಪಾಟೀಲರು… pic.twitter.com/8TP8XatNqe

    — Vijayendra Yediyurappa (@BYVijayendra) December 25, 2023 " class="align-text-top noRightClick twitterSection" data=" ">

'ಪುಕ್ಸಟ್ಟೆ ಆಶ್ವಾಸನೆ' ನೀಡಿ ಅಧಿಕಾರಕ್ಕೆ ಬಂದವರು ನೀವು, ರೈತರಿಗೆ ಸರ್ಕಾರ ಏನೇ ನೀಡಿದರೂ ಅದು ಈ ರಾಜ್ಯದ ಅಭಿವೃದ್ಧಿಯ ಕಾಳಜಿಯೇ ಹೊರತೂ ಭಿಕ್ಷೆಯಲ್ಲ. ನಮ್ಮ ರೈತರು ಸ್ವಾಭಿಮಾನಿಗಳು, ಅವರು ಪರಿಹಾರಕ್ಕಾಗಿ ಕಾಯುವುದಿಲ್ಲ. ಬದಲಿಗೆ ರೈತರ ಕಷ್ಟಗಳಿಗೆ ಸ್ಪಂದಿಸುವ ಸರ್ಕಾರಗಳನ್ನು ಬಯಸುತ್ತಾರೆ. ಆದರೆ ಆಮಿಷಗಳನ್ನೊಡ್ಡಿ, ಅಧಿಕಾರಕ್ಕೆ ಬಂದು ನಿತ್ಯವೂ ಬೆಲೆ ಏರಿಕೆಯ ಬರೆ ಎಳೆಯುವ ನಿಮ್ಮನ್ನು ಶಾಶ್ವತವಾಗಿ ತಿರಸ್ಕರಿಸುವ ಕಾಲ ಹತ್ತಿರದಲ್ಲಿದೆ. ಈ ಕಾಂಗ್ರೆಸ್ ಸರ್ಕಾರ ‘ನಿರ್ದಯ ಸರ್ಕಾರ, ದಪ್ಪ ಚರ್ಮದ ಮಂತ್ರಿಗಳನ್ನು ಪೋಷಿಸುತ್ತಿರುವ ಸರ್ಕಾರವಾಗಿದೆ ತಮ್ಮ ಹೇಳಿಕೆಗೆ ಸಚಿವ ಶಿವಾನಂದ ಪಾಟೀಲರು ಈ ಕೂಡಲೇ ಕ್ಷಮೆ ಕೋರಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಮತ್ತೊಮ್ಮೆ ರೈತರಿಗೆ ಅಪಮಾನ: ರೈತರ ಆತ್ಮಹತ್ಯೆ ಹೆಚ್ಚಾಗುತ್ತಿರುವ ಬಗ್ಗೆ ಕೇಳಿದರೆ "ಎಲ್ಲಿದೆ ಹೇಳಿ ಆತ್ಮಹತ್ಯೆ? ಸ್ವಂತಕ್ಕೆ ಯಾರಾದರೂ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ" ಎಂದು ಉಪಮುಖ್ಯಮಂತ್ರಿಗಳು ಉಡಾಫೆ ಮಾತಾಡುತ್ತಾರೆ. ಈಗ ಸಚಿವರು ಪರಿಹಾರದ ಹಣಕ್ಕಾಗಿ ಬರ ಬರಲಿ ಎಂದು ರೈತರು ಆಸೆ ಪಡುತ್ತಾರೆ ಎಂದು ಹಗುರವಾಗಿ ಮಾತನಾಡುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

  • ಸಾಲ ಮನ್ನಾ ಆಸೆಗಾಗಿ ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂದು ಸಚಿವ ಶಿವಾನಂದ ಪಾಟೀಲರು ಮತ್ತೊಮ್ಮೆ ರೈತರಿಗೆ ಅಪಮಾನ ಮಾಡಿದ್ದಾರೆ.

    ರೈತರ ಆತ್ಮಹತ್ಯೆ ಹೆಚ್ಚಾಗುತ್ತಿರುವ ಬಗ್ಗೆ ಕೇಳಿದರೆ "ಎಲ್ಲಿದೆ ಹೇಳಿ ಆತ್ಮಹತ್ಯೆ? ಸ್ವಂತಕ್ಕೆ ಯಾರಾದರೂ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ" ಎಂದು ಉಪಮುಖ್ಯಮಂತ್ರಿಗಳು ಉಡಾಫೆ… pic.twitter.com/rsTg1W9pCW

    — R. Ashoka (ಆರ್. ಅಶೋಕ) (@RAshokaBJP) December 25, 2023 " class="align-text-top noRightClick twitterSection" data=" ">

ಭೂತಾಯಿಯನ್ನೇ ನಂಬಿ ಬದುಕುವ ರೈತ, ಮಳೆ ಇಲ್ಲದೇ ತನ್ನ ಭೂಮಿ ಬಂಜರಾಗಲಿ ಎಂದು ಎಂದಿಗೂ ಕೋರುವುದಿಲ್ಲ. ಮಣ್ಣನ್ನೇ ನೆಚ್ಚಿಕೊಂಡು ಬಾಳ್ವೆ ನಡೆಸುವ ರೈತ ಆ ಮಣ್ಣುದಾಹದಿಂದ ಸೊರಗಲಿ ಎಂದು ಎಂದಿಗೂ ಆಸೆ ಪಡುವುದಿಲ್ಲ. ಇಡೀ ಮನುಕುಲಕ್ಕೆ ಅನ್ನ ನೀಡುವ ರೈತ ತನ್ನ ಭೂಮಿ ಹಚ್ಚ - ಹಸಿರಾಗಿರಲಿ, ತಾನು ಬೆವರು ಸುರಿಸಿ ಬೆಳೆಸಿದ ಪೈರು ತನ್ನ ಎದೆ ಎತ್ತರಕ್ಕೆ ಬೆಳೆಯಲಿ, ಅದನ್ನು ನಾಲ್ಕು ಜನ ಉಣ್ಣಲಿ ಎಂದು ಆಶಿಸುತ್ತಾನೆಯೇ ಹೊರತು ಬರಗಾಲ ಬರಲಿ ಎಂದು ಕನಸು ಮನಸಿನಲ್ಲೂ ಯೋಚಿಸುವುದಿಲ್ಲ ಎಂದು ಅಶೋಕ್ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮ ಸರ್ಕಾರಕ್ಕೆ ಬರ ಪರಿಹಾರ ಕೊಡಲು ಯೋಗ್ಯತೆ ಇಲ್ಲದಿದ್ದರೆ, ರೈತರ ಕಣ್ಣೀರು ಒರೆಸುವ ಮನಸ್ಸಿಲ್ಲದಿದ್ದರೆ ಸುಮ್ಮನಿದ್ದು ಬಿಡಿ. ಆದರೆ, ಅನ್ನದಾತ ರೈತರನ್ನು ಈ ರೀತಿ ಪದೇ ಪದೆ ಅವಮಾನಿಸಬೇಡಿ. ಈಗಾಗಲೇ ಸಂಕಷ್ಟದಲ್ಲಿರುವ ರೈತ ಬಾಂಧವರನ್ನು ಇನ್ನಷ್ಟು ನೋಯಿಸಬೇಡಿ ಎಂದು ತಮ್ಮ ಮಂತ್ರಿಗಳಿಗೆ ಬುದ್ಧಿ ಮಾತು ಹೇಳಿ ಎಂದು ಸಲಹೆ ನೀಡಿದ್ದಾರೆ.

ಬೇಷರತ್ ಕ್ಷಮೆಗೆ ಹೆಚ್​ಡಿಕೆ ಒತ್ತಾಯ: ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ರೈತ ವಿರೋಧಿ ಹೇಳಿಕೆ ನೀಡಿದ ಸಚಿವ ಶಿವಾನಂದ ಪಾಟೀಲ್ ಬೇಷರತ್ ಕ್ಷಮೆ ಕೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೂಡ ಆಗ್ರಹಿಸಿದ್ದಾರೆ. ಸಚಿವರ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು ಎಂದು ಟ್ವೀಟ್ ಮೂಲಕ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.

  • ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು.

    ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು…

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 25, 2023 " class="align-text-top noRightClick twitterSection" data=" ">

ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್​​ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿಲ್ಲ: ಶಿವಾನಂದ ಪಾಟೀಲ್

Last Updated : Dec 25, 2023, 5:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.