ETV Bharat / state

ಕಿಲ್ಲರ್​ ಕೊರೊನಾ : ಸರ್ವ ಪಕ್ಷ ಸಭೆಯಲ್ಲಿ ಸಿದ್ದು,ಹೆಚ್​ಡಿಕೆ ಹಾಗೂ ಡಿಕೆಶಿ ಹೇಳಿದ್ದಿಷ್ಟು.. - ರಾಜ್ಯ ಸರ್ಕಾರಕ್ಕೆ ಪ್ರತಿಪಕ್ಷ ನಾಯಕರು ಸಲಹೆ

ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಮೂರನೇ ಹಂತ ತಲುಪುವ ಮುನ್ನವೇ ರಾಜ್ಯ ಸರ್ಕಾರ‌‌ ಎಚ್ಚೆತ್ತುಕೊಳ್ಳಬೇಕು. ಲಾಕ್‌ಡೌನ್ ಸರಿಯಾಗಿ ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಪ್ರತಿಪಕ್ಷ ನಾಯಕರು ಸಲಹೆ ನೀಡಿದ್ದಾರೆ.

Opposition leaders suggestion to corona,ರಾಜ್ಯ ಸರ್ಕಾರಕ್ಕೆ ಪ್ರತಿಪಕ್ಷ ನಾಯಕರು ಸಲಹೆ
ಕಿಲ್ಲರ್​ ಕೊರೊನಾ: ಸರ್ವ ಪಕ್ಷ ಸಭೆಯಲ್ಲಿ ಸಿದ್ದು,ಹೆಚ್​ಡಿಕೆ ಹಾಗೂ ಡಿಕೆಶಿ ಹೇಳಿದ್ದೇನು?
author img

By

Published : Mar 29, 2020, 4:53 PM IST

ಬೆಂಗಳೂರು : ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಮೂರನೇ ಹಂತ ತಲುಪುವ ಮುನ್ನವೇ ರಾಜ್ಯ ಸರ್ಕಾರ‌‌ ಎಚ್ಚೆತ್ತುಕೊಳ್ಳಬೇಕು. ಲಾಕ್‌ಡೌನ್ ಸರಿಯಾಗಿ ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಪ್ರತಿಪಕ್ಷ ನಾಯಕರು ಸಲಹೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಮ್ಮ ತಪ್ಪಿನಿಂದ ಯಾವ ನ್ಯೂನತೆ ಆಗದಂತೆ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4,500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆಗಳಿವು:
ಮೂರನೇ ಹಂತಕ್ಕೆ ನಾವು ಇನ್ನೂ ಹೋಗಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ,ಆತನಿಗೆ ವಿದೇಶದಿಂದ ಬಂದವರ ಸಂಪರ್ಕ ಇರಲಿಲ್ಲ. ಆದರೂ ಕೊರೊನಾ ಹೇಗೆ ಬಂತು ಎಂಬುದನ್ನು ಪತ್ತೆ ಮಾಡಬೇಕು. ಶಿರಾದಲ್ಲಿಯೂ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಈ ಇಬ್ಬರಿಗೂ ಸೋಂಕು ಯಾವ ಹಂತದಲ್ಲಿತ್ತು ಎಂಬುನ್ನು ಹೇಳಬೇಕು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹಳ್ಳಿಗಳಿಗೆ ಸೋಂಕು ಹರಡದಂತೆ ನೋಡಿಕೊಳ್ಳಬೇಕು. ಮಾಸ್ಕ್, ಸ್ಯಾನಿಟೈಸರ್, ಪಿಪಿಇ, ಟೆಸ್ಟಿಂಗ್ ಕಿಟ್‌ಗಳು ಸಾಕಷ್ಟು ಪ್ರಮಾಣದಲ್ಲಿಲ್ಲ. ಬಂದಿರುವುದೂ ಗುಣಮಟ್ಟದ್ದಲ್ಲ. ಈಗ ದಾಸ್ತಾನಾಗಿರುವುದು ಯಾವುದಕ್ಕೂ ಸಾಲದು. ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ತಯಾರಿಕೆ ಕೆಲಸ ಭರದಿಂದ ಸಾಗಬೇಕಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ಆ ಕೆಲಸ ವಹಿಸಿ. ಮೂರನೇ ಹಂತಕ್ಕೆ ಹೋಗುವುದನ್ನು ತಡೆಯುವ, ಅದನ್ನು ನಿಭಾಯಿಸುವ ಕೆಲಸ ಸಮರೋಪಾದಿಯಲ್ಲಿ ಆಗಬೇಕಿದೆ ಎಂದರು.

ಗ್ರಾಪಂಗೆ ಒಬ್ಬರಂತೆ ವೈದ್ಯಾಧಿಕಾರಿ ನೇಮಿಸಬೇಕು: ಅಗತ್ಯ ಪ್ರಮಾಣದ ಮಾಸ್ಕ್, ಸ್ಯಾನಿಟೈಸರ್ ಈಗಾಗಲೇ ಇರಬೇಕಿತ್ತು. ವೈದ್ಯರು ಮತ್ತು ಸಿಬ್ಬಂದಿಯ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ. ಕರ್ನಾಟಕದಲ್ಲಿ 6020 ಪಂಚಾಯತ್‌ಗಳಿವೆ. ಒಂದೊಂದು ಪಂಚಾಯತ್‌ಗೆ ಒಬ್ಬ ಮೆಡಿಕಲ್ ಅಧಿಕಾರಿ ನೇಮಕ ಮಾಡಬೇಕು. ಆಹಾರ, ಕೃಷಿ ಮಾರುಕಟ್ಟೆ ಹಾಗೂ ಕೃಷಿ ಅಧಿಕಾರಿಯನ್ನೂ ಪಂಚಾಯತ್‌ಗೆ ಒಬ್ಬರಂತೆ ನೇಮಕ ಮಾಡಬೇಕು. ಸಾಮಾಜಿಕ ಅಂತರ ಕಾಪಾಡುವುದೂ ಮುಖ್ಯ. ಅದೇ ರೀತಿ ರೈತರ ಹಿತ ಕಾಯಬೇಕು. ಏಪ್ರಿಲ್, ಮೇ ತಿಂಗಳಲ್ಲಿ ಮುಂಗಾರು ಪೂರ್ವ ಬಿತ್ತನೆ ಆರಂಭವಾಗುತ್ತೆ. ಕೆಲವು ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆ ನಿಲ್ಲದಂತೆ ನೋಡಿಕೊಳ್ಳಿ. ಬಿತ್ತನೆಗೆ ಮುಂದಾಗುವವರಿಗೆ ಬೀಜ, ಗೊಬ್ಬರ ಸಿಗುವಂತಾಗಬೇಕು ಎಂದರು.

ಬೆಂಗಳೂರು ನಗರದಲ್ಲಿ ವಲಸಿಗರು ಹೆಚ್ವಿನ ಸಂಖ್ಯೆಯಲ್ಲಿದ್ದಾರೆ. ಹೊರ ರಾಜ್ಯಗಳಲ್ಲಿ ಇದ್ದ ನಮ್ಮವರು ಇಲ್ಲಿಗೆ, ನಮ್ಮಲ್ಲಿರುವ ಹೊರ ರಾಜ್ಯಗಳವರು ಸ್ವಂತ ಊರುಗಳಿಗೆ ಹೋಗಲು ಪರದಾಡುತ್ತಿದ್ದಾರೆ. ಕನ್ನಡಿಗರನ್ನು ಹೊರ ರಾಜ್ಯಗಳಿಂದ ಕರೆ ತರಬೇಕು. ಈಗಾಗಲೇ ಸಾಕಷ್ಟು ಮಂದಿ ಗಡಿ ತಲುಪಿದ್ದಾರೆ. ಅವರಿಗೆ ರಕ್ಷಣೆ ನೀಡುವುದು ಅವಶ್ಯ. ಅವರ ಆರೋಗ್ಯ ತಪಾಸಣೆ ಮಾಡಿ ಊರುಗಳಿಗೆ ಕಳುಹಿಸುವುದು ಸೂಕ್ತ. ಮುಂದಿನ ಎರಡು ವಾರ ಪರಿಸ್ಥಿತಿ ಕಠಿಣ. ಹೀಗಾಗಿ ಸೋಂಕು ಹರಡದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಈಗಾಗಲೇ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಅದನ್ನು‌ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಏಪ್ರಿಲ್ ಒಂದರಿಂದ ಆಹಾರ ಧಾನ್ಯ ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಸಮರ್ಪಕವಾಗಿ ವಿತರಣೆಯಾಗುವಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮನೆ ಮನೆಗೆ ಅಗತ್ಯ ವಸ್ತು ತಲುಪಿಸುವ ವ್ಯವಸ್ಥೆ ಮಾಡಿದರೆ ಒಳ್ಳೆಯದು. ಪೊಲೀಸರಿಗೆ ಈಗ ಪ್ರಾಣ ಸಂಕಟ. ಲಾಠಿ ಪ್ರಹಾರ ಮಾಡಬಾರದು ಎಂದು ನಾವೂ ಹೇಳಿದ್ದೇವೆ. ಅಮಾಯಕರ ಮೇಲೆ ಬಲ ಪ್ರಯೋಗ ಬೇಡ. ಪೊಲೀಸರಿಗೂ ವಿಮೆ ಮಾಡಿಸುವುದು ಸೂಕ್ತ. ಈ ಕುರಿತು ಸಿಎಂ ಪ್ರಧಾನಿಗಳ ಜೊತೆ ಮಾತನಾಡಲಿ. ಪೊಲೀಸರ ಜೀವಕ್ಕೂ ಭದ್ರತೆ ಬೇಕು. ಪೌರ ಕಾರ್ಮಿಕರಿಗೂ ವಿಮೆ ಸೌಲಭ್ಯ ಸಿಗಬೇಕು ಎಂದರು.

ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು..:
ನಂತರ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್‌ ಡಿ ಕುಮಾರಸ್ವಾಮಿ, ಕೇವಲ ರಾಜಕೀಯ ಟೀಕೆಗೋಸ್ಕರ ಇಲ್ಲಿ ಕೆಲವು ವಿಚಾರ ಪ್ರಸ್ತಾಪ ಮಾಡ್ತಿರೋದಲ್ಲ, ಕೊರೊನಾ ನಿಯಂತ್ರಣ ವಿರುದ್ಧ ಹೋರಾಟ ನಮ್ಮೆಲ್ಲರ ಜವಾಬ್ದಾರಿ. ಪ್ರಧಾನಮಂತ್ರಿಗಳು 21 ದಿನ ಲಾಕ್‌ಡೌನ್ ಘೋಷಿಸಿರೋದು ಒಂದು ರೆಮಿಡಿಯಷ್ಟೇ, ಖಾಸಗಿ ಕಟ್ಟಡಗಳಲ್ಲಿ, ಸರ್ಕಾರಿ ಕಟ್ಟಡಗಳಲ್ಲಿ ಕ್ವಾರಟೈನ್​ ಇಡಿ ಎಂದು ಸಲಹೆ ಕೊಟ್ಟಿದ್ದೆ. ಆದರೆ, ಆರಂಭದಲ್ಲಿ ಉಡಾಫೆ ಮಾಡಿದಿರಿ ಎಂದು ಅಸಮಾಧಾನ ಹೊರಹಾಕಿದರು.

ಅಗತ್ಯ ಕಿಟ್‌ಗಳಿಲ್ಲದೇ ಪರೀಕ್ಷೆ ಮಾಡೋದು ಹೇಗೆ?
ಚೈನಾದಿಂದ ಒಂದು ಲಕ್ಷ ಕಿಟ್ ತರಿಸ್ತೇವೆ ಎಂದು ಹೇಳಿದ್ರಿ. ಆದರೆ, ಎಲ್ಲಾ ಏರ್‌ಪೋರ್ಟ್​ಗಳು ಬಂದ್ ಆಗಿವೆ. ಎಷ್ಟು ದಿನದಲ್ಲಿ ಬರುತ್ತೆ ಅನ್ನೋದು ಗೊತ್ತಿಲ್ಲ. 1 ಸಾವಿರ ವೆಂಟಿಲೇಟರ್ ಅಳವಡಿಸಲಾಗುತ್ತದೆ ಎಂದು ಹೇಳಿ 15 ದಿನ ಆಯ್ತು, ವೆಂಟಿಲೇಟರ್​​ಗಳನ್ನು ತರಿಸಿಲ್ಲ, ಯಾಕ್ ಇಷ್ಟು ತಡ ಮಾಡ್ತಿದ್ದೀರಾ‌ ಎಂದು ಪ್ರಶ್ನಿಸಿದರು.
ಗ್ರಾಮಗಳ ಮಟ್ಟದಲ್ಲಿ ಸಂಘಟನೆಗಳ ಸಹಾಯ ಪಡೆದು ಪಿಡಿಒಗಳ ಮೂಲಕ ಜನರ ಆರೋಗ್ಯದ ಪರಿಸ್ಥಿತಿಯ ವರದಿ ತರಿಸಿಕೊಳ್ಳಬೇಕು. ರಸ್ತೆ ಕೆಲಸ, ಬ್ರಿಡ್ಜ್, ಕಟ್ಟಡಗಳ ಕೆಲಸ ಆರು ತಿಂಗಳು ಮುಂದಕ್ಕೆ ಹಾಕಿ, ಅರ್ಜೆಂಟ್ ಇಲ್ಲ. ಕೊರೊನಾ ನಿಯಂತ್ರಣಕ್ಕೆ ಹೆಚ್ಚಿನ ಹಣ ಬಳಸಿಕೊಳ್ಳಿ. ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ವ್ಯವಸ್ಥೆ ಮಾಡಿ. ಓಲಾ, ಊಬರ್ ಡ್ರೈವರ್‌ಗಳು, ಗಾರ್ಮೆಂಟ್ಸ್ ಮಹಿಳೆಯರ ಪರಿಸ್ಥಿತಿ ಹೇಗೆ?.70 ರಿಂದ 80 ಸಾವಿರ ಜನರಿಗೆ ಸರ್ಕಾರದಿಂದ ಊಟ ಕೊಡಲಾಗ್ತಿದೆ ಅನ್ನೋ ಮಾಹಿತಿ ಇದೆ. ಆದರೆ, ಬೆಂಗಳೂರಿನಲ್ಲಿ ಸಾಕಷ್ಟು ಜನರಿಗೆ ಊಟದ ಅವಶ್ಯಕತೆ ಇದೆ. ಅಗತ್ಯ ಇರೋ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳದೇ ಕೆ ಆರ್ ಮಾರ್ಕೆಟ್ ಶಿಫ್ಟ್ ಮಾಡಿದಿರಿ, ಸಾಕಷ್ಟು ಗೊಂದಲ ಆಯ್ತು ಎಂದು ಲೋಪಗಳನ್ನು ಬಿಡಿಸಿಟ್ಟರು.
ಬೆಂಗಳೂರಿನಲ್ಲಿ 8 ವಲಯ ಇದೆ. ಹೊರವಲಯದಲ್ಲೇ ತರಕಾರಿ ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು. ಹಾಪ್‌ಕಾಮ್ಸ್‌ನಿಂದ ಬೇರೆ ಇಲಾಖೆಯಿಂದಲೇ ತಾತ್ಕಾಲಿಕ ವ್ಯವಸ್ಥೆ ಮಾಡಿ,ವಾರ್ಡ್‌ಗಳ ಮಟ್ಟದಲ್ಲಿ ಕೆಎಂಎಫ್ ಡೈರಿಗಳಿವೆ. ಅವುಗಳ ಮೂಲಕ ಅಗತ್ಯ ವಸ್ತುಗಳ ಪೂರೈಕೆ ಮಾಡಿ, ಇದರಿಂದ ಜನರು ಮಾರ್ಕೆಟ್‌ಗೆ ಬರಲ್ಲ, ಜನಸಂದಣಿ ತಡೆಯೋಕೆ ಸಾಧ್ಯವಾಗುತ್ತದೆ. ರಾಮನಗರ ಜಿಲ್ಲೆಗೆ 10 ಸಾವಿರ ಮಾಸ್ಕ್‌ಗಳನ್ನ ಕಳಿಸಿಕೊಡುತ್ತಿದ್ದೇನೆ. ನಾವು ರಾಜಕೀಯ ಟೀಕೆ ಮಾಡಲ್ಲ, ಸರ್ಕಾರಕ್ಕೆ ಎಲ್ಲಾ ರೀತಿಯ ಬೆಂಬಲ ನೀಡುತ್ತೇವೆ. ವೈದ್ಯರ ಪರಿಸ್ಥಿತಿಯನ್ನು ನಾವೂ ಗಮನದಲ್ಲಿಟ್ಟುಕೊಳ್ಳಬೇಕು. ಸರ್ಕಾರದಿಂದ ಅವರಿಗೆ ನೀಡಬೇಕಾದ ಎಲ್ಲಾ ಸವಲತ್ತುಗಳನ್ನು ನೀಡಿ, ಆರಂಭದಲ್ಲಿ ಆಸಕ್ತಿವಹಿಸಿ ವಿದೇಶದಿಂದ ಹಲವರನ್ನು ಕರೆತಂದ್ರಿ. ಆದರೆ, ಅಗತ್ಯ ಕ್ರಮ ತೆಗೆದುಕೊಳ್ಳುವಲ್ಲಿ ಎಡವಿದಿರಿ‌ ಎಂದು ಸರ್ವಪಕ್ಷ ಸಭೆಯಲ್ಲಿ ಹಲವು ಸಲಹೆಗಳನ್ನ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೀಗಂದರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಸಾಮಾನ್ಯ ಜನ ಕೊರೋನಾ ಸೋಂಕು ನಿವಾರಣೆಗೆ ಹೋರಾಡುತ್ತಿರುವ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಯಾರಿಗೂ ಮಾಸ್ಕ್ ಸಿಗುತ್ತಿಲ್ಲ. ಇದನ್ನು ಉಚಿತವಾಗಿ ಒದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ರಕ್ಷಕರಿಗೇ ಸುರಕ್ಷೆ ಇಲ್ಲದಿದ್ದರೆ ಹೇಗೆ?‌ ದಿನನಿತ್ಯದ ವಸ್ತುಗಳು, ಆಹಾರ ಸಿಗದೆ ಜನ ಕಂಗಾಲಾಗಿದ್ದಾರೆ. ಇಲ್ಲಿ ಇರಲೂ ಆಗದೆ, ತಮ್ಮೂರಿಗೆ ಹೋಗಲು ಆಗದೆ ಪರಿತಪಿಸುತ್ತಿದ್ದಾರೆ. ಇದಕ್ಕೊಂದು ಸ್ಪಷ್ಟ ಪರಿಹಾರ ಕಲ್ಪಿಸಬೇಕು ಎಂದರು.
ಕೊರೊನಾ ವಿಚಾರದಲ್ಲಿ ನಾವು ರಾಜಕೀಯ ಮಾಡಲು ಹೋಗುವುದಿಲ್ಲ. ಸರ್ಕಾರದ ಎಲ್ಲ ಸಕಾರಾತ್ಮಕ ಕ್ರಮಗಳಿಗೆ ನಮ್ಮ ಪಕ್ಷದ, ವೈಯಕ್ತಿಕವಾಗಿ ನನ್ನ ಬೆಂಬಲವಿದೆ. ಆದರೆ, ಈ ಪಿಡುಗು ನಿವಾರಣೆ ವಿಚಾರದಲ್ಲಿ ಡಿಸಿಎಂಗಳು, ಸಚಿವರ ನಡುವೆ ಸಮನ್ವಯ ಇಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆ ಕೊಟ್ಟು ಜನರಲ್ಲಿ ಗೊಂದಲ, ಭಯ ಮೂಡಿಸುತ್ತಿದ್ದಾರೆ.

ನಾನು ಅವರ ಹೆಸರು ಹೇಳಲು ಹೋಗುವುದಿಲ್ವ. ಆದರೆ, ಅವರಲ್ಲಿ ಸಮನ್ವಯ ತರುವ ಜವಾಬ್ದಾರಿ ಸಿಎಂ ಆಗಿ ನಿಮ್ಮದು. ಇಲ್ಲದಿದ್ದರೆ ಜನ ಮತ್ತಷ್ಟು ಹೆದರಿ ಹೋಗುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊರೊನಾ ನಿಯಂತ್ರಣ, ಪರಿಸ್ಥಿತಿ ನಿರ್ವಹಣೆಗೆ ಸರ್ಕಾರದ ಕ್ರಮಗಳು ವಿಶ್ವ ಆರೋಗ್ಯ ಸಂಸ್ಥೆಯ (WHO) ನಿಯಮಗಳಿಗೆ, ಮಾರ್ಗಸೂಚಿಗಳಿಗೆ ಅನುಗುಣವಾಗಿ ಇರಬೇಕೇ ಹೊರತು ಸರ್ಕಾರದ ಪ್ರತಿನಿಧಿಗಳ, ಯಾವುದೋ ರಾಜಕೀಯ ಪಕ್ಷದ ತತ್ವ, ಸಿದ್ಧಾಂತ, ರಾಜಕೀಯ ಲಾಭಕ್ಕೆ ಬಳಕೆ ಆಗಬಾರದು. ಕೊರೊನಾ ಇಡೀ ರಾಜ್ಯದ, ದೇಶದ, ವಿಶ್ವದ ಸಮಸ್ಯೆ. ಬರೀ ಆಡಳಿತಾರೂಢ ಸರ್ಕಾರದ ಪಕ್ಷದ ಸಮಸ್ಯೆ ಅಲ್ಲ. ಇದು ಎಲ್ಲರ ಸಮಸ್ಯೆ. ಎಲ್ಲರೂ ಒಗ್ಗೂಡಿ ಹೋರಾಡಬೇಕು. ಈ ವಿಚಾರದಲ್ಲಿ ಒಬ್ಬರು ಹೆಚ್ಚು, ಒಬ್ಬರು ಕಡಿಮೆ ಎಂಬುದಿಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.