ETV Bharat / state

ಸೋಮವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಸಂಜೆ 6.30ಕ್ಕೆ ನಗರದ ಖಾಸಗಿ ಹೋಟೆಲ್​ನಲ್ಲಿ ಶಾಸಕಾಂಗ ಸಭೆ ಕರೆದಿದ್ದಾರೆ.

Siddaramaiah
ಸಿದ್ದರಾಮಯ್ಯ
author img

By

Published : Mar 5, 2021, 7:10 PM IST

ಬೆಂಗಳೂರು: ಹಲವು ಮಹತ್ವದ ವಿಚಾರಗಳ ಚರ್ಚೆಗೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಸಂಜೆ 6.30ಕ್ಕೆ ನಗರದ ಖಾಸಗಿ ಹೋಟೆಲ್​ನಲ್ಲಿ ಈ ಸಭೆ ಕರೆದಿದ್ದಾರೆ.

ಸಭೆಗೆ ಶಾಸಕರು ತಪ್ಪದೆ ಹಾಜರಾಗಬೇಕೆಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ.ತುಕಾರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಜೆಟ್ ಮಂಡನೆ ಮೇಲೆ ಕಾಂಗ್ರೆಸ್ ಪಕ್ಷದ ನಿಲುವು, ಅಭಿಪ್ರಾಯ ವ್ಯಕ್ತಪಡಿಸುವ ಸಂಬಂಧ ಚರ್ಚೆ ನಡೆಯಲಿದೆ.

letter
ಪ್ರಕಟಣೆ

ರಾಜ್ಯ ಸರ್ಕಾರದ ಪ್ರಸಕ್ತ ಬಜೆಟ್​ನಲ್ಲಿ ಇಲಾಖೆವಾರು ನೀಡಿಕೆಯಾಗಿರುವ ಅನುದಾನ ಹಾಗೂ ಒಟ್ಟಾರೆ ಬಜೆಟ್ ಅನುದಾನದ ಕುರಿತು ಮುಂಬರುವ ದಿನಗಳಲ್ಲಿ ವಿಧಾನಸಭೆಯಲ್ಲಿ ಕೈಗೊಳ್ಳಬಹುದಾದ ಚರ್ಚೆಯ ಕುರಿತು ಈ ಸಂದರ್ಭ ಮಾತುಕತೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ.

ಒನ್ ನೇಷನ್ ಒನ್ ಎಲೆಕ್ಷನ್ ಚರ್ಚೆ ಕೈಗೆತ್ತಿಕೊಂಡಿದ್ದಕ್ಕೆ ನಡೆಸಬಹುದಾದ ಹೋರಾಟ, ಭದ್ರಾವತಿ ಶಾಸಕ ಸಂಗಮೇಶ್ ಪರವಾಗಿ ವಿಧಾನಸಭೆಯಲ್ಲಿ ಕೈಗೊಳ್ಳಬಹುದಾದ ಹೋರಾಟ, ಇತ್ಯಾದಿ ಮಹತ್ವದ ವಿಚಾರಗಳ ಬಗ್ಗೆ ಈ ಸಂದರ್ಭ ಚರ್ಚೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಐವರು ಕಾರ್ಯಾಧ್ಯಕ್ಷರು ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.