ಬೆಂಗಳೂರು: ಇಂದು ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮ ನೂರು ಸಂಚಿಕೆಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಇನ್ನಾದರೂ ಜನಸಾಮಾನ್ಯರ ಮನದ ಮಾತುಗಳಿಗೆ ಉತ್ತರಿಸುತ್ತೀರಾ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
-
ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದ ವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ?
— Siddaramaiah (@siddaramaiah) April 30, 2023 " class="align-text-top noRightClick twitterSection" data="
ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ @BJP4India ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ…
">ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದ ವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ?
— Siddaramaiah (@siddaramaiah) April 30, 2023
ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ @BJP4India ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ…ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದ ವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ?
— Siddaramaiah (@siddaramaiah) April 30, 2023
ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ @BJP4India ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ…
ಈ ಸಂಬಂಧ ಟ್ವಿಟ್ ಮತ್ತು ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು. ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ಗೆ 54.77 ಡಾಲರ್ ಇರುವಾಗ ಪೆಟ್ರೋಲ್ ಬೆಲೆ ರೂ. 102 ರೂಪಾಯಿ ಆಗಿರುವುದು ಯಾಕೆ? 'ನಾ ಖಾವುಂಗಾ, ನಾ ಖಾನೆದೂಂಗಾ' ಎಂದು ನೀವು ಹೇಳಿದರೂ, ನಿಮ್ಮ ಪಕ್ಷದ ನಾಯಕರೇ ಕಮಿಷನ್ ಹಣ ತಿಂದು ಜೈಲಿಗೆ ಹೋಗುತ್ತಿರುವುದೇಕೆ? ಎಂದು ಪ್ರಶ್ನಿಸಿದ್ದಾರೆ.
-
People and journalists waiting for @narendramodi's response to 'ಜನ್ ಕೀ ಬಾತ್' (Jan ki baath) pic.twitter.com/DsvnWTYj62
— Siddaramaiah (@siddaramaiah) April 30, 2023 " class="align-text-top noRightClick twitterSection" data="
">People and journalists waiting for @narendramodi's response to 'ಜನ್ ಕೀ ಬಾತ್' (Jan ki baath) pic.twitter.com/DsvnWTYj62
— Siddaramaiah (@siddaramaiah) April 30, 2023People and journalists waiting for @narendramodi's response to 'ಜನ್ ಕೀ ಬಾತ್' (Jan ki baath) pic.twitter.com/DsvnWTYj62
— Siddaramaiah (@siddaramaiah) April 30, 2023
ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ?-ಸಿದ್ದರಾಮಯ್ಯ: ರಾಜ್ಯದ ಸಚಿವರು ಸರ್ಕಾರಿ ಗುತ್ತಿಗೆಗಳಲ್ಲಿ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನಿಮಗೆ ಪತ್ರ ಬರೆದಿದ್ದರೂ ಅದಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ? ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ? ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.
ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಮತ್ತು ಸುಂಕಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂಪಾಯಿ ನೀಡಿದರೂ, ಕೇಂದ್ರ ಸರ್ಕಾರವು ತೆರಿಗೆ ಹಂಚಿಕೆ ರೂಪದಲ್ಲಿ ರೂ. 50,257 ಕೋಟಿ ಮಾತ್ರ ಕರ್ನಾಟಕ ರಾಜ್ಯಕ್ಕೆ ನೀಡುತ್ತಿರುವುದು ಯಾಕೆ?. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯ ಪಾಲು ಶೇಕಡಾ 4.72ರಿಂದ ಶೇಕಡಾ 3.64ಕ್ಕೆ ಇಳಿದದ್ದು ಯಾಕೆ?. ಕೇಂದ್ರ ಹಣಕಾಸು ಆಯೋಗ ಕರ್ನಾಟಕಕ್ಕೆ ಪರಿಹಾರ ರೂಪದಲ್ಲಿ ರೂ. 5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿದ್ದರೂ ಕೇಂದ್ರ ಹಣಕಾಸು ಸಚಿವರು ನಿರಾಕರಿಸಿದ್ದು ಯಾಕೆ?. 2013ರಲ್ಲಿ ಕೇಂದ್ರ ಅನುದಾನಿತ ಯೋಜನೆಗಳಲ್ಲಿ ಶೇಕಡಾ 25ರಷ್ಟು ಮಾತ್ರ ಇದ್ದ ರಾಜ್ಯದ ಪಾಲು 2021-22ರಲ್ಲಿ ಶೇಕಡಾ 55ಕ್ಕೆ ಹೆಚ್ಚಿದ್ದು ಯಾಕೆ? ಎಂಬ ಪ್ರಶ್ನೆ ಮುಂದಿಟ್ಟಿದ್ದಾರೆ.
-
ಮಾನ್ಯ @narendramodi ಅವರೇ, ನೀವು ನೂರು ‘‘ಮನ್ ಕಿ ಬಾತ್” ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ?
— Siddaramaiah (@siddaramaiah) April 30, 2023 " class="align-text-top noRightClick twitterSection" data="
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್…
">ಮಾನ್ಯ @narendramodi ಅವರೇ, ನೀವು ನೂರು ‘‘ಮನ್ ಕಿ ಬಾತ್” ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ?
— Siddaramaiah (@siddaramaiah) April 30, 2023
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್…ಮಾನ್ಯ @narendramodi ಅವರೇ, ನೀವು ನೂರು ‘‘ಮನ್ ಕಿ ಬಾತ್” ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ?
— Siddaramaiah (@siddaramaiah) April 30, 2023
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್…
ಮಳೆ ಹಾನಿಗಾಗಿ ರಾಜ್ಯ ಸರ್ಕಾರ ರೂ. 35,000 ಕೋಟಿ ಪರಿಹಾರ ಕೇಳಿದ್ದರೂ ಡಬಲ್ ಎಂಜಿನ್ ಸರ್ಕಾರ ಕೇವಲ ರೂ.1,895 ಕೋಟಿ ನೀಡಿದ್ದು ಯಾಕೆ?. ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆಯ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ನೀಡಲಾಗುತ್ತಿದ್ದ ಅನುದಾನವನ್ನು ರೂ.1,500 ಕೋಟಿಗಳಿಂದ ಒಂದು ಲಕ್ಷ ಕೋಟಿ ರೂಪಾಯಿಗಳಿಗೆ ಇಳಿಸಿದ್ದು ಯಾಕೆ?. ಪಿಎಸ್ಐ ನೇಮಕದಲ್ಲಿ ಅಂದಾಜು ರೂ. 300 ಕೋಟಿಗೂ ಮೀರಿ ಲಂಚದ ಅವ್ಯವಹಾರ ನಡೆದು ಉದ್ಯೋಗದ ಅವಕಾಶ ಕಳೆದುಕೊಂಡಿರುವ ಸುಮಾರು 54 ಸಾವಿರ ಯುವಜನರ ಮನದ ಮಾತಿಗೆ ನೀವು ಪ್ರತಿಕ್ರಿಯಿಸದೆ ಮೌನವಾಗಿರುವುದು ಯಾಕೆ?. ಪ್ರಧಾನಿ ಅವರೇ ನೀವು ರೋಡ್ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು ರೂ.7,200 ಕೋಟಿ, ಅಂದರೆ ಒಂದು ಗುಂಡಿಗೆ ತಲಾ ರೂ. 9.20 ಲಕ್ಷ ಖರ್ಚು ಮಾಡಿದರೂ ಗುಂಡಿಗಳು ಹಾಗೆಯೇ ಉಳಿದುಕೊಂಡಿರುವುದು ಯಾಕೆ? ಎಂದು ಸರಣಿ ಪ್ರಶ್ನೆಗಳನ್ನು ಸಿದ್ದರಾಮಯ್ಯ ಅವರು ಕೇಳಿದ್ದಾರೆ.
-
People and journalists waiting for @narendramodi's response to 'ಜನ್ ಕೀ ಬಾತ್' (Jan ki baath) pic.twitter.com/DsvnWTYj62
— Siddaramaiah (@siddaramaiah) April 30, 2023 " class="align-text-top noRightClick twitterSection" data="
">People and journalists waiting for @narendramodi's response to 'ಜನ್ ಕೀ ಬಾತ್' (Jan ki baath) pic.twitter.com/DsvnWTYj62
— Siddaramaiah (@siddaramaiah) April 30, 2023People and journalists waiting for @narendramodi's response to 'ಜನ್ ಕೀ ಬಾತ್' (Jan ki baath) pic.twitter.com/DsvnWTYj62
— Siddaramaiah (@siddaramaiah) April 30, 2023
ಕರ್ನಾಟಕವನ್ನು ಸಾಲಗಾರ ರಾಜ್ಯವನ್ನಾಗಿ ಮಾಡಿದ್ದು ಏಕೆ?: ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸಂಜೀವಿನಿಯಾಗಿರುವ ಯುಪಿಎ ಸರ್ಕಾರದ ಹೆಮ್ಮೆಯ ಕಾರ್ಯಕ್ರಮವಾಗಿರುವ ನರೇಗಾ ಯೋಜನೆಗೆ ಈ ಸಾಲಿನ ಬಜೆಟ್ನಲ್ಲಿ ಶೇಕಡಾ 21.66ರಷ್ಟು ಅಂದರೆ ರೂ. 60,000 ಕೋಟಿಯಷ್ಟು ಅನುದಾನವನ್ನು ಡಬಲ್ ಎಂಜಿನ್ ಸರ್ಕಾರ ಕಡಿತಗೊಳಿಸಿದ್ದು ಯಾಕೆ? ನಮ್ಮ ಸರ್ಕಾರದ ಐದು ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ ರೂ.1,16,512 ಕೋಟಿ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಒಟ್ಟು ಸಾಲ ರೂ.3,22,000 ಕೋಟಿ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಸಾಲಗಾರ ರಾಜ್ಯ ಮಾಡಿದ್ದು ಯಾಕೆ?. ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್, ಜೆಡಿಎಸ್ನಿಂದ ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ: ಪ್ರಧಾನಿ ಮೋದಿ