ETV Bharat / state

ಹಿಂದೂ-ಮುಸ್ಲಿಂ ಧರ್ಮಗಳ ಹಿರಿಯರು ಶಾಂತಿ ಸ್ಥಾಪನೆಗೆ ಪ್ರಯತ್ನಿಸಬೇಕು: ಸಿದ್ದರಾಮಯ್ಯ - ಕೆ.ಜೆ ಹಳ್ಳಿ ಗಲಭೆ ಪ್ರಕರಣ

ಗಲಭೆ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಳೆದ ರಾತ್ರಿ ಕಾವಲ ಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂಮುಸ್ಲಿಂ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

Siddaramaiah
Siddaramaiah
author img

By

Published : Aug 12, 2020, 1:16 PM IST

ಬೆಂಗಳೂರು: ನಗರದ ಕಾವಲ್ ಭೈರಸಂದ್ರದಲ್ಲಿ ಕಳೆದ ರಾತ್ರಿ ನಡೆದ ಘಟನೆಯನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ರಾತ್ರಿ ಕಾವಲ ಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂಮುಸ್ಲಿಂ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ. ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ ಎಂದು ತಿಳಿಸಿದ್ದಾರೆ.

ಇಂತಹ ಕೋಮು ಗಲಭೆಗಳಲ್ಲಿ‌ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ. ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ‌ ಕಳೆದುಕೊಳ್ಳಬಾರದು. ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿ ಮಾಡಿಕೊಡುತ್ತದೆ ಎಂದಿದ್ದಾರೆ.

ಕಾವಲ ಭೈರಸಂದ್ರದಲ್ಲಿ ಗಲಭೆ ವರದಿ ಮಾಡಲು ಹೋಗಿರುವ ಮಾಧ್ಯಮ ಮಿತ್ರರ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ. ಪೊಲೀಸರು ತಕ್ಷಣ ಆರೋಪಿಗಳನ್ನು ಬಂಧಿಸಿ, ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.