ETV Bharat / state

ಯುಜಿಸಿ ಕಚೇರಿ ಸ್ಥಳಾಂತರ ಮಾಡಿ‌ ಕನ್ನಡಿಗರ ಮತ್ತೊಂದು ಹಕ್ಕಿಗೆ ಕನ್ನ: ವಿಪಕ್ಷ ನಾಯಕ ಸಿದ್ದರಾಮಯ್ಯ - ಭೂ ಸುಧಾರಣಾ ಕಾಯ್ದೆಯ 38ಎ

ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗದ ಕಚೇರಿಯನ್ನು ಸ್ಥಳಾಂತರ ಮಾಡುತ್ತಿರುವ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Jan 19, 2023, 6:31 PM IST

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಅಮಿತ್‌ ಶಾ ಅವರು ಕರ್ನಾಟಕಕ್ಕೆ ಪ್ರತಿ ಸಾರಿ ಬಂದಾಗಲೂ ಕನ್ನಡಿಗರಿಗೆ ಆಘಾತ ಮಾಡಿಯೆ ಬರುತ್ತಿದ್ದಾರೆ. ಈ ಬಾರಿ ಬೆಂಗಳೂರಿನಲ್ಲಿದ್ದ ಯುಜಿಸಿ ಕಚೇರಿಯನ್ನು ಸ್ಥಳಾಂತರ ಮಾಡಿ ಕನ್ನಡಿಗರ ಮತ್ತೊಂದು ಹಕ್ಕು ಕಸಿದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಕಲಿಯುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳ ಮಕ್ಕಳಿಗೆ ಹಾಗೂ ಅಧ್ಯಾಪಕರುಗಳು, ಕಾಲೇಜು, ವಿವಿಗಳ ಆಡಳಿತ ಮಂಡಳಿಯವರು ಇನ್ನು ಮುಂದೆ ಸಣ್ಣ ಸಣ್ಣ ಸಮಸ್ಯೆಗಳಾದರೂ ದೆಹಲಿಗೆ ಹೋಗಬೇಕಾದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗದ ಕಚೇರಿ ಬೆಂಗಳೂರು ಬಿಟ್ಟು ದೆಹಲಿಗೆ ಹೋಗುತ್ತಿದ್ದರೂ ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಲಿ, ಮುಖ್ಯಮಂತ್ರಿಗಳಾಗಲಿ ಸಣ್ಣ ಪ್ರತಿಭಟನೆಯನ್ನೂ ದಾಖಲಿಸಿಲ್ಲ. ಗುಜರಾತ್ ಮೂಲದ ಈ ಜೋಡಿ ರಾಜ್ಯದ ಪ್ರತಿಯೊಂದನ್ನೂ ಕಿತ್ತುಕೊಳ್ಳುತ್ತಿದ್ದಾರೆ. ಧಮ್ಮು, ತಾಕತ್ತಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಬಿಜೆಪಿ ಸರ್ಕಾರವು ರಾಜ್ಯದ ಸ್ವಾಭಿಮಾನವನ್ನೇ ದರೋಡೆ ಮಾಡುತ್ತಿದ್ದರೂ ಉಸಿರೆ ಎತ್ತದೇ ರಾಜ್ಯದ 7 ಕೋಟಿ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ ಎಂದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕ ಎಂಬುದೊಂದು ರಾಜ್ಯವಿದೆ ಎಂದು ನೆನಪಾಗುವುದು ಚುನಾವಣೆಗಳು ಬಂದಾಗ ಅಥವಾ ಕರ್ನಾಟಕದಲ್ಲಿ ಸಂಪತ್ತಿದೆ ಅದನ್ನು ಲೂಟಿ ಮಾಡುವುದು ಹೇಗೆ? ಎಂಬ ಯೋಚನೆ ಬಂದಾಗ ಮಾತ್ರ. ರಾಜ್ಯದಲ್ಲಿ ರೈತರು ಬೆಳೆದ ಅಡಕೆ, ತೆಂಗು, ಕಬ್ಬು, ಮೆಣಸು, ಕಾಫಿ, ಭತ್ತ ಮುಂತಾದ ಬೆಳೆಗಳಿಗೆ ಬೆಲೆಗಳಿಲ್ಲ. ತೊಗರಿಗೆ ನೆಟೆ ರೋಗ ಬಂದಿದೆ. ಜಾನುವಾರುಗಳಿಗೆ ಚರ್ಮಗಂಟು ಕಾಯಿಲೆ ಬಂದು 30000ಕ್ಕೂ ಹೆಚ್ಚು ಜಾನುವಾರುಗಳು ಮರಣ ಹೊಂದಿವೆ. ಸುಮಾರು 18 ಲಕ್ಷ ಲೀಟರ್ ಹಾಲು ಉತ್ಪಾದನೆ ಕಡಿಮೆಯಾಗಿದೆ. ಪ್ರತಿ ದಿನ ರೈತರಿಗೆ 6. 66 ಕೋಟಿಗಳಷ್ಟು ಆದಾಯ ನಷ್ಟವಾಗುತ್ತಿದೆ. ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅತಿವೃಷ್ಟಿ, ಪ್ರವಾಹವು ರಾಜ್ಯದ ರೈತರನ್ನು ಕಾಡುತ್ತಿದೆ. ಇದರಿಂದ 1 ಲಕ್ಷ ಹೆಕ್ಟೇರ್‌ಗಳಿಗೂ ಹೆಚ್ಚಿನ ಪ್ರದೇಶದಲ್ಲಿ ಬೆಳೆದ ಬೆಳೆ ಸಂಪೂರ್ಣ ಹಾಳಾಗಿದೆ. ಅಂದರೆ 3 ವರ್ಷಗಳಲ್ಲಿ 2.5 ಲಕ್ಷ ಎಕರೆಗಳಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. 2.5 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹಾನಿಯಾದ ಬೆಳೆಗೆ ಮತ್ತು ಮನೆಗಳಿಗೆ ರಾಜ್ಯ ಸರ್ಕಾರ ಸಮರ್ಪಕವಾಗಿ ಪರಿಹಾರ ಕೊಟ್ಟಿಲ್ಲ. ಅಷ್ಟು ಭೀಕರ ಮಳೆ ಹಾನಿಯಾದಾಗಲೂ ಪ್ರಧಾನಮಂತ್ರಿ ಮೋದಿಗಾಗಲಿ, ಅಮಿತ್ ಶಾ ಅವರಿಗಾಗಲಿ ಹೋಗಲಿ ಉಳಿದ ಯಾವುದೇ ಸಚಿವರಿಗಾಗಲಿ ಕರ್ನಾಟಕ ರಾಜ್ಯ ಎಂಬುದೊಂದಿದೆ ಎಂಬ ನೆನಪು ಬಂದಿತ್ತೆ? ಎಂದು ಪ್ರಶ್ನಿಸಿದ್ದಾರೆ.

ಅಸಂಖ್ಯಾತ ಜನ ಮರಣ ಹೊಂದಿದರು: 2020 ಮತ್ತು 2021 ರಲ್ಲಿ ರಾಜ್ಯವನ್ನು ಕಾಡಿದ ಭೀಕರ ಕೊರೊನಾಕ್ಕೆ ರಾಜ್ಯದಲ್ಲಿ 4.5 ರಿಂದ 5 ಲಕ್ಷ ಜನರು ದುರಂತದ ಸಾವಿಗೀಡಾದರು. ಇವರುಗಳಿಗೆ ಪರಿಹಾರವನ್ನೇ ಕೊಟ್ಟಿಲ್ಲ. ಮೋದಿ ಸರ್ಕಾರ ಕರ್ನಾಟಕದ ಜನರಿಗೆ ಸಿಗಬೇಕಾದ ಆಕ್ಸಿಜನ್​ ಅನ್ನು ಕಿತ್ತುಕೊಂಡರು. ಆಕ್ಸಿಜನ್ ಸಿಗದೆ, ವೆಂಟಿಲೇಟರ್ ಸಿಗದೆ ಅಸಂಖ್ಯಾತ ಜನ ಮರಣ ಹೊಂದಿದರು. ಇದರ ಹೊಣೆಯನ್ನು ಯಾರು ಹೊರಬೇಕು?. ಕರ್ನಾಟಕದ ಪ್ರಬಲವಾದ 5 ಬ್ಯಾಂಕುಗಳನ್ನು ಮೋದಿ ಸರ್ಕಾರ ಕಿತ್ತುಕೊಂಡಿತು. ಇದರಿಂದ ಲಕ್ಷಾಂತರ ಕೋಟಿಗಳಷ್ಟು ನಮ್ಮ ಜನರ ಸಂಪತ್ತನ್ನು ಕೊಳ್ಳೆ ಹೊಡೆಯಲಾಯಿತು.

ಮೈಸೂರು ಬ್ಯಾಂಕು, ಕೆನರಾಬ್ಯಾಂಕು, ಕಾರ್ಪೊರೇಷನ್‌ಬ್ಯಾಂಕು, ವಿಜಯಾಬ್ಯಾಂಕು ಹೀಗೆ ಎಲ್ಲ ಬ್ಯಾಂಕುಗಳೂ ಹೋದವು. ಈ ಬ್ಯಾಂಕುಗಳಲ್ಲಿ ಸುಮಾರು 1 ಲಕ್ಷ ಕರ್ನಾಟಕದ ಯುವಕರಿಗೆ ಉದ್ಯೋಗ ಸಿಗುತ್ತಿತ್ತು. ಈಗ ಉತ್ತರ ಭಾರತದವರೇ ತುಂಬಿ ಹೋಗಿದ್ದಾರೆ. ಈ ಅನ್ಯಾಯಕ್ಕೆ ಮೋದಿಯವರೆ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪಾಲಿಗೆ ಬಂದಿದ್ದ ಸಿಆರ್‌ಪಿಎಫ್ ಬೆಟಾಲಿಯನ್ನನ್ನು ಉತ್ತರ ಪ್ರದೇಶಕ್ಕೆ ವರ್ಗಾಯಿಸಿದರು. ತಮಿಳಿನಂತೆ ಕನ್ನಡ ಭಾಷೆಯೂ ಶಾಸ್ತ್ರೀಯ ಭಾಷೆಯೆ. ಆದರೆ ತಮಿಳುನಾಡಿಗೆ ಕೊಡುವ ಅನುದಾನಗಳಲ್ಲಿ ಕಾಲುಭಾಗವನ್ನೂ ಕರ್ನಾಟಕಕ್ಕೆ ಕೊಡುತ್ತಿಲ್ಲವೆಂದು ಈ ಬಾರಿಯ ಸಾಹಿತ್ಯ ಸಮ್ಮೇಳನಾಧ್ಯಕ್ಷರು ಹೇಳಿದ್ದಾರೆ.

ಕರ್ನಾಟಕದಿಂದ ಮೋದಿ ಸರ್ಕಾರವು 3.5 ಲಕ್ಷ ಕೋಟಿ ರೂಪಾಯಿಗಳನ್ನು ದೋಚಿಕೊಂಡು ಹೋಗುತ್ತಿದೆ. ಆದರೆ, ರಾಜ್ಯಕ್ಕೆ ತೆರಿಗೆ ಹಂಚಿಕೆ ಮಾಡುತ್ತಿರುವುದು ಕೇವಲ 29 ಸಾವಿರ ಕೋಟಿ ಮಾತ್ರ. ತೆರಿಗೆ ಹಂಚಿಕೆ ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳು ಎರಡೂ ಸೇರಿದರೂ ಸಹ 50 ಸಾವಿರ ಕೋಟಿಗಳಿಗೆ ತಲುಪುತ್ತಿಲ್ಲ ಎಂದು ವಿವರಿಸಿದ್ದಾರೆ.

ಕಂದಾಯ ಗ್ರಾಮ ಯೋಜನೆಯಲ್ಲಿ ಹಕ್ಕುಪತ್ರಗಳ ವಿತರಣೆ: ಈ ಬಿಜೆಪಿಯವರು ಅದೆಷ್ಟು ಲಜ್ಜೆಗೆಟ್ಟಿದ್ದಾರೆಂದರೆ ನಮ್ಮ ಸರ್ಕಾರದ ಅವಧಿಯ ಕಾರ್ಯಕ್ರಮಗಳನ್ನು ತಮ್ಮ ಕಾರ್ಯಕ್ರಮಗಳೆಂದು ಹೇಳಿಕೊಂಡು ಬೀಗುತ್ತಿದ್ದಾರೆ. ಮೋದಿಯವರನ್ನು ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಕರೆಸಿ ಎರಡು ಮುಖ್ಯ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಒಂದು, ನಾರಾಯಣಪುರ ಎಡದಂಡೆ ಕಾಲುವೆ ಉದ್ಘಾಟನೆ ಮತ್ತೊಂದು ಕಂದಾಯ ಗ್ರಾಮ ಯೋಜನೆಯಲ್ಲಿ ಹಕ್ಕುಪತ್ರಗಳ ವಿತರಣೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾರಾಯಣಪುರ ಎಡದಂಡೆ ಕಾಲುವೆ ವಿಜಯಪುರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಸುಮಾರು 4.50 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸುತ್ತದೆ. ಈ ಕಾಲುವೆ ನಾರಾಯಣಪುರ ಅಣೆಕಟ್ಟಿನ ಅತೀ ದೊಡ್ಡ ಕಾಲುವೆಯಾಗಿದೆ. ಸ್ಕಾಡಾ ಗೇಟ್‌ಗಳು ವೈರ್‌ಲೆಸ್ ಆಧಾರಿತ ರಿಮೋಟ್ ಗೇಟ್ ನಿರ್ವಹಣೆ ತಂತ್ರಜ್ಞಾನವನ್ನು ಒಳಗೊಂಡಿವೆ. ಈ ಯೋಜನೆಯ ಎರಡೂ ಹಂತಗಳಲ್ಲಿ ಒಟ್ಟಾರೆಯಾಗಿ ಸ್ಕಾಡಾ ಕಂಟ್ರೋಲ್ ಸೆಂಟರ್‌ನಿಂದ ಸುಮಾರು ರೂ. 1,500 ಕೋಟಿ ವೆಚ್ಚದಲ್ಲಿ 4,250 ಗೇಟುಗಳನ್ನು ಅಳವಡಿಸಲಾಗಿದೆ.

ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಯ ವಿಸ್ತರಣೆ: ಎಂ.ಬಿ. ಪಾಟೀಲರು ಜಲಸಂಪನ್ಮೂಲ ಸಚಿವರಾಗಿದ್ದ ಅವಧಿಯಲ್ಲಿ ನಾರಾಯಣ ಎಡದಂಡೆ ಕಾಲುವೆ ವಿಸ್ತರಣೆ, ನವೀಕರಣ ಹಾಗೂ ಆಧುನೀಕರಣ ಯೋಜನೆಯಡಿ ಸುಮಾರು ರೂ. 3,500 ಕೋಟಿ ಮೊತ್ತದಲ್ಲಿ ಮುಖ್ಯ ಹಾಗೂ ಶಾಖಾ ಕಾಲುವೆಗಳು, ವಿತರಣಾ ಕಾಲುವೆ, ಲ್ಯಾಟರಲ್ ಹಾಗೂ ಸಬ್-ಲ್ಯಾಟರಲ್‌ಗಳ ಕಾಮಗಾರಿಗಳನ್ನು ಆರಂಭಿಸಿ ಪೂರ್ಣಗೊಳಿಸಲಾಯಿತು.

ಇದರಿಂದ 2014-15 ಹಾಗೂ 2016-17ರ ನಡುವಿನ ಅವಧಿಯಲ್ಲಿ ಮರುಸ್ಥಾಪಿಸಲಾದ ನೀರಾವರಿ ಸಾಮರ್ಥ್ಯ ಒಟ್ಟು 98,381 ಹೆಕ್ಟೇರ್‌ಗಳಾಗಿತ್ತು. ಜಲಸಂಪನ್ಮೂಲ ಸಚಿವಾಲಯ, ಭಾರತ ಸರ್ಕಾರ, ಆಧುನಿಕ ತಂತ್ರಜ್ಞಾನದ ಅಳವಡಿಕೆಯೊಂದಿಗೆ ಅನುಷ್ಠಾನಗೊಳಿಸಿರುವ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಯ ವಿಸ್ತರಣೆ, ನವೀಕರಣ ಹಾಗೂ ಆಧುನೀಕರಣ ಕಾಮಗಾರಿಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿತ್ತು. ನಮ್ಮ ಸರ್ಕಾರವೇ ಪ್ರಾರಂಭಿಸಿ ಅನುಷ್ಠಾನ ಮಾಡಿದ್ದ ಯೋಜನೆಯನ್ನು ಉದ್ಘಾಟನೆ ಮಾಡಲು ಪ್ರಧಾನ ಮಂತ್ರಿಗಳನ್ನು ರಾಜ್ಯ ಬಿಜೆಪಿ ಸರ್ಕಾರ ಕರೆದುಕೊಂಡು ಬರುತ್ತಿದೆ. ಆಡಳಿತಾರೂಢ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ಬಿಟ್ಟರೆ ಒಂದೇ ಒಂದು ಹೊಸ ಕಾರ್ಯಕ್ರಮವನ್ನು ಮಾಡಿ ಅನುಷ್ಠಾನಗೊಳಿಸಲಿಲ್ಲ ಎಂದು ಟೀಕಿಸಿದ್ದಾರೆ.

ಕಂದಾಯ ಗ್ರಾಮ ಯೋಜನೆಯೂ ನಮ್ಮದೇ: ಅನೇಕ ದಶಕಗಳ ಕಾಲ ಲಂಬಾಣಿ ತಾಂಡಾ, ಗೊಲ್ಲರು ಮುಂತಾದ ಪಶುಪಾಲಕ ಸಮುದಾಯಗಳು ಹಾಗೂ ಇತರರು ವಾಸಿಸುವ ಹಟ್ಟಿ, ಪಾಳ್ಯ, ಹಾಡಿ, ಮಜರೆ , ಕಾಲೋನಿ ಮುಂತಾದ ಸ್ವತಂತ್ರ ಅಸ್ತಿತ್ವವಿಲ್ಲದ, ಮುಖ್ಯ ಕಂದಾಯ ಗ್ರಾಮಗಳ ಜೊತೆ ಸೇರಿ ಹೋಗಿ ಅಭಿವೃದ್ಧಿಯನ್ನೆ ಕಾಣದಾಗಿದ್ದ ಅನೇಕ ಹಿಂದುಳಿದ ಮತ್ತು ದಲಿತ ಸಮುದಾಯಗಳ ಜನರ ಕಲ್ಯಾಣಕ್ಕೆಂದು ನಮ್ಮ ಸರ್ಕಾರ ಸ್ವತಂತ್ರ ಕಂದಾಯ ಗ್ರಾಮಗಳ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ, ಆಗ ಈ ಯೋಜನೆಗೆ ಬಿಜೆಪಿಯ ಹಲವರು ವಿರೋಧ ಮಾಡಿದ್ದರು ಎಂದಿದ್ದಾರೆ.

ಶತಮಾನಗಳ ಕಾಲದಿಂದ ವಾಸಿಸುತ್ತಿದ್ದರೂ ಈ ಜಾಗಗಳ ಮೇಲೆ ಈ ದಮನಿತ ಸಮುದಾಯಗಳಿಗೆ ಯಾವುದೇ ಹಕ್ಕುಗಳು ಇರಲಿಲ್ಲ. ಅರಣ್ಯ ಭೂಮಿ, ಸರ್ಕಾರಿ ಭೂಮಿ ಹಾಗೂ ಇತರೆ ಯಾರದೊ ಖಾಸಗಿ ಭೂಮಿಯಲ್ಲಿ ಈ ಜನರು ವಾಸಿಸುತ್ತಿದ್ದರು. ಅದೆಷ್ಟೊ ವರ್ಷಗಳಿಂದ ವಾಸಿಸುತ್ತಿದ್ದರೂ ಸಹ ಜಾಗ ಖಾಲಿ ಮಾಡುವಂತೆ ಅನೇಕರಿಗೆ ಚಿತ್ರಹಿಂಸೆಗಳನ್ನು ಮಾಡಿದ್ದ ಉದಾಹರಣೆಗಳೂ ಇವೆ. ಇದನ್ನು ತಪ್ಪಿಸುವ ಉದ್ದೇಶದಿಂದ ನಮ್ಮ ಕಾಂಗ್ರೆಸ್ ಸರ್ಕಾರವು ಈ ಸಮಸ್ಯೆಯನ್ನು ಅಧ್ಯಯನ ಮಾಡಿ ವರದಿ ನೀಡಲು ನರಸಿಂಹಯ್ಯ ಸಮಿತಿಯನ್ನು ನೇಮಕ ಮಾಡಿತ್ತು.

ಭೂ ಸುಧಾರಣಾ ಕಾಯ್ದೆಯ 38ಎ ಗಳಿಗೆ ತಿದ್ದುಪಡಿ ತಂದೆವು: ನರಸಿಂಹಯ್ಯನವರ ಸಮಿತಿ ವರದಿ ನೀಡಿದ ಕೂಡಲೇ ನಾವು ಭೂ ಕಂದಾಯ ಕಾಯ್ದೆಯ ಸೆಕ್ಷನ್ 94ಡಿ ಮತ್ತು ಭೂ ಸುಧಾರಣಾ ಕಾಯ್ದೆಯ 38ಎ ಗಳಿಗೆ ತಿದ್ದುಪಡಿ ತಂದೆವು. ಇಷ್ಟನ್ನು ಮಾಡಿ ಸುಮ್ಮನಾಗಲಿಲ್ಲ. 2017 ರಿಂದ ಅನುಷ್ಠಾನಕ್ಕೆ ಮುಂದಾದೆವು. ಕೇವಲ 11 ತಿಂಗಳಲ್ಲಿ 2800ಕ್ಕೂ ಅಧಿಕ ದಾಖಲೆ ರಹಿತ ಗ್ರಾಮಗಳನ್ನು ಗುರುತಿಸಿ ಅವುಗಳನ್ನು ಕಂದಾಯ ಗ್ರಾಮ ಮಾಡಲು 2300 ಪ್ರಸ್ತಾವನೆಗಳನ್ನು ಜಿಲ್ಲಾಧಿಕಾರಿಗಳ ಮೂಲಕ ತರಿಸಿಕೊಂಡು 1300ಕ್ಕೂ ಹೆಚ್ಚಿನ ಗ್ರಾಮಗಳನ್ನು ಕಂದಾಯ ಗ್ರಾಮ ಎಂದು ಅಧಿಸೂಚನೆ ಹೊರಡಿಸಿದ್ದೆವು.

ಸ್ವಂತ ಕೆಲಸ ಮಾಡಿ ಗೊತ್ತಿಲ್ಲದ ಬಿಜೆಪಿಯವರು ನಾವು ಮಾಡಿದ್ದರ ಕ್ರೆಡಿಟ್​ ತೆಗೆದುಕೊಳ್ಳಲು ಹೊರಟಿದ್ದಾರೆ. ಇದಕ್ಕಿಂತ ದುರಂತ ಬೇರೇನಾದರೂ ಇದೆಯೆ? ಎಂದು ನರೇಂದ್ರ ಮೋದಿಯವರೆ ಹೇಳಬೇಕು ಎಂದು ಟೀಕಿಸಿದರು.

ಓದಿ: 'ನ್ಯಾಯ ಬೇಕು ಮೋದಿ' ಪೋಸ್ಟರ್ ಅಭಿಯಾನದಲ್ಲಿ ಪ್ರಧಾನಿಗೆ 12 ಪ್ರಶ್ನೆ ಕೇಳಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.