ETV Bharat / state

ಅಗ್ನಿಪಥ ಯೋಜನೆಗೆ ವಿರೋಧ: ನಾಳೆ ದೆಹಲಿಯಲ್ಲಿ ರಾಜ್ಯ 'ಕೈ' ನಾಯಕರಿಂದ ಪ್ರತಿಭಟನೆ - ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿರುವ ಕಾಂಗ್ರೆಸ್​ ನಾಯಕರು

ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್​ ನಾಯಕರು ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

Congress leaders to protest in Delhi
ಅಗ್ನಿಪಥ ಯೋಜನೆಗೆ ಕಾಂಗ್ರೆಸ್​ನಿಂದ ವಿರೋಧ
author img

By

Published : Jun 21, 2022, 5:34 PM IST

Updated : Jun 21, 2022, 5:47 PM IST

ಬೆಂಗಳೂರು: ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರೋಧಿಸಿ ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಲು ಡಿ.ಕೆ.ಶಿವಕುಮಾರ್ ಈಗಾಗಲೇ ಅಲ್ಲಿಗೆ ತೆರಳಿದ್ದು, ಸಿದ್ದರಾಮಯ್ಯ ಮಂಗಳವಾರ ಸಂಜೆ ಪ್ರಯಾಣ ಬೆಳೆಸುವರು. ಅನೇಕ ರಾಜ್ಯಗಳ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಕೇಂದ್ರ ಸರ್ಕಾರ ಇಡಿ ಮೂಲಕ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಡಿಕೆಶಿ ದಿಲ್ಲಿಯ ಎಐಸಿಸಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು. ಇವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಸಂಸದ ಡಿ.ಕೆ.ಸುರೇಶ್, ರಾಜ್ಯಸಭೆ ಸದಸ್ಯರಾದ ಜಿ.ಸಿ.ಚಂದ್ರಶೇಖರ್, ಎಲ್.ಹನುಮಂತಯ್ಯ, ಮುಖಂಡರಾದ ನಾಗರಾಜ್ ಛಬ್ಬಿ, ವಿನಯ್ ಕಾರ್ತಿಕ್ ಮತ್ತಿತರರು ಸಾಥ್‌​​ ಕೊಟ್ಟರು.

ಇದನ್ನೂ ಓದಿ: ಸಿದ್ದರಾಮಯ್ಯರ ಟೀಕೆಗೆ ಯಾವುದೇ ಅರ್ಥವಿಲ್ಲ : ಮಾಜಿ ಸಿಎಂ ಜಗದೀಶ್ ಶೆಟ್ಟರ್

Last Updated : Jun 21, 2022, 5:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.