ETV Bharat / state

ಬೈಕ್‌ ಟ್ಯಾಕ್ಸಿ ಸೇವೆಗೆ ವಿರೋಧ: ನಾಳೆ ನಗರದಲ್ಲಿ ಆಟೋ ಸೇವೆ ವ್ಯತ್ಯಯ - auto drivers strike

ಕಾನೂನುಬಾಹಿರ ವೈಟ್‌ಬೋರ್ಡ್ ಟ್ಯಾಕ್ಸಿ ರದ್ದು ಮಾಡಬೇಕೆಂದು ಒತ್ತಾಯಿಸಿ ಆಟೋ ಚಾಲಕರು ನಾಳೆ ಮುಖ್ಯಮಂತ್ರಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿರುವುದರಿಂದ ನಾಳೆ ನಗರದಲ್ಲಿ ಆಟೋ ಸೇವೆ ವ್ಯತ್ಯಯವಾಗಲಿದೆ.

opposition-to-bike-taxi-service-auto-service-will-be-disrupted-in-the-city-tomorrow
ಬೈಕ್‌ ಟ್ಯಾಕ್ಸಿ ಸೇವೆಗೆ ವಿರೋಧ: ನಾಳೆ ನಗರದಲ್ಲಿ ಆಟೋ ಸೇವೆ ವ್ಯತ್ಯಯ
author img

By

Published : Mar 19, 2023, 5:16 PM IST

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಾಳೆ ಬೆಂಗಳೂರು ನಗರದಲ್ಲಿ ಆಟೋ ಚಾಲಕರು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿರುವುದರಿಂದ ಆಟೋ ಸೇವೆ ವ್ಯತ್ಯಯವಾಗಲಿದೆ. ಅಂದಾಜು 2 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿರುವುದರಿಂದ ಪ್ರಯಾಣಿಕರು ಪರದಾಡುವ ಸಾಧ್ಯತೆ ಇದೆ.

ಆಟೋ ಚಾಲಕರಿಗೆ ನ್ಯಾಯ ಒದಗಿಸಬೇಕು, ಕಾನೂನು ಬಾಹಿರವಾಗಿ ಬೈಕ್‌ ಟ್ಯಾಕ್ಸಿಯಿಂದ ಆಟೋ ಚಾಲಕರಿಗೆ ಬಾಡಿಗೆ ಸರಿಯಾಗಿ ಸಿಗುತ್ತಿಲ್ಲ. ನ್ಯಾಯಬದ್ಧವಾಗಿ ಸರ್ಕಾರಕ್ಕೆ ಕಳೆದ 60 ವರ್ಷಗಳಿಂದ ತೆರಿಗೆ ಕಟ್ಟುತ್ತಿದ್ದೇವೆ. ಆದರೆ, ಕಾನೂನುಬಾಹಿರವಾಗಿ ಬೈಕ್ ಟ್ಯಾಕ್ಸಿಗಳು ಸೇವೆ ನೀಡುತ್ತಿದ್ದರು ರಾಜ್ಯ ಸರ್ಕಾರ ಕ್ರಮಕೈಗೊಳ್ಳದೆ ಕಾರ್ಪೊರೇಟ್ ಕಂಪನಿಗಳ ಪರವಾಗಿ ನಿಂತಿದೆ. ಇದರಿಂದ ಆಟೋ ಚಾಲಕರ ಜೀವನ ದುಸ್ತರವಾಗಿದೆ. ಕೂಡಲೇ ಬೈಕ್‌ ಸೇವೆ ನೀಡುತ್ತಿರುವ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡು ಆಟೋ ಚಾಲಕರಿಗೆ ನ್ಯಾಯ ಒದಗಿಸಬೇಕು ಎಂದು ಬೆಂಗಳೂರು ಚಾಲಕರ ಸಂಘಟನೆಗಳ ಒಕ್ಕೂಟದ ಸಂಚಾಲಕ ಎಂ ಮಂಜುನಾಥ್ ಹೇಳಿದ್ದಾರೆ.

ವಾಹನಗಳಿಗೆ ಕಪ್ಪು ಬಾವುಟ ಕಟ್ಟಿ ಪ್ರತಿಭಟನೆ : ಕಾನೂನು ಬಾಹಿರ ವೈಟ್‌ಬೋರ್ಡ್ ಟ್ಯಾಕ್ಸಿ ರದ್ದು ಮಾಡಬೇಕು, ರಾಪಿಡೋ ಸೇರಿದಂತೆ ವಿವಿಧ ಬೈಕ್‌ ಟ್ಯಾಕ್ಸಿ ಸೇವೆಯನ್ನು ನಿಷೇಧಿಸಬೇಕು ಎಂದು ಮೂರು ದಿನಗಳ ಗಡುವು ನೀಡಿದ್ದೆವು. ವಾಹನಗಳಿಗೆ ಕಪ್ಪು ಬಾವುಟ ಕಟ್ಟಿ ಪ್ರತಿಭಟನೆ ನಡೆಸಿದ್ದೆವು. ಆದರೆ ನಮ್ಮ ಬೇಡಿಕೆ ಈಡೇರದ ಕಾರಣ ನಾಳೆ ಆಟೋ ಸೇವೆ ಬಂದ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

24 ಗಂಟೆ ಆಟೋ ಸೇವೆ ಬಂದ್ : ಆಟೋ ಚಾಲಕರಿಗೆ ಬೈಕ್‌ ಟ್ಯಾಕ್ಸಿಗಳಿಂದ ಸಾಕಷ್ಟು ಅನ್ಯಾಯವಾಗುತ್ತಿದೆ. ಈ ಕುರಿತು ಸರ್ಕಾರದ ಗಮನ ಸೆಳೆಯಲು ಇಂದು ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12ರವರೆಗೆ ಆಟೋ ಸೇವೆ ಬಂದ್ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಕನ್ನಡ ಪರ ಸಂಘಟನೆಗಳ ಬೆಂಬಲ : ಒಂದು ವೇಳೆ ರಾಜ್ಯ ಸರ್ಕಾರ ಯಾವುದೇ ನಿರ್ಧಾರವನ್ನು ಕೈಗೊಳ್ಳದಿದ್ದರೆ, ಈ ಮುಷ್ಕರವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸುತ್ತೇವೆ. ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗುತ್ತದೆ. ಬೆಂಗಳೂರಿನಲ್ಲಿ 21 ಆಟೋ ಚಾಲಕರ ಸಂಘಟನೆಗಳಿದ್ದು, ಎಲ್ಲ ಸಂಘಟನೆಗಳು ಈ ಬಂದ್‌ನಲ್ಲಿ ಪಾಲ್ಗೊಳ್ಳಲಿವೆ. ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸೇರಿ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ ಎಂದು ಎಂ ಮಂಜುನಾಥ್ ತಿಳಿಸಿದ್ದಾರೆ.

ಚಾಲಕರ ಬದುಕು ಆರ್ಥಿಕ ಸಂಕಷ್ಟಗಳಿಗೆ ಸಿಲುಕಿದೆ: ಮುಖ್ಯವಾಗಿ ಆಪ್ ಆಧಾರಿತ ಸಾರಿಗೆ ವ್ಯವಸ್ಥೆ ನೀಡುವ ಕಂಪನಿಗಳು ಹೊಸದಾಗಿ ಸಾರಿಗೆ ಕ್ಷೇತ್ರಕ್ಕೆ ಬಂದು ಬೇಕಾ ಬಿಟ್ಟಿಯಾಗಿ ಪ್ರಯಾಣಿಕರಿಗೆ ಆಫರ್​​​ಗಳನ್ನು ಹಾಗೂ ಚಾಲಕರಿಗೆ ಇನ್‌ಸೆಂಟಿವ್‌ ಹೆಸರಿನಲ್ಲಿ ಆಮಿಷಗಳನ್ನು ಒಡ್ಡಿ ದುರಾಸೆ ತೋರಿಸುತ್ತಿದೆ. ಇದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರ ಬದುಕು ಆರ್ಥಿಕ ಸಂಕಷ್ಟಗಳಿಗೆ ಸಿಲುಕಿದೆ.

ಇದನ್ನೂ ಓದಿ: ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ.. ಯೋಜನೆಗೆ ಮಾ.23 ರಂದು ಸಿಎಂ ಚಾಲನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.