ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಕ್ಕೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದೆರಡು ದಿನಗಳಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮಂಗಳೂರಿನ ರಸ್ತೆಗಳು ಜಲಾವೃತ: ನಗರದಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳು ಮತ್ತು ಕಟ್ಟಡಗಳಿಗೆ ನೀರು ನುಗ್ಗಿದೆ. ಕಳೆದ 24 ಗಂಟೆಗಳಲ್ಲಿ 11 ಮನೆಗಳಿಗೆ ತೀವ್ರ ಹಾನಿಯಾಗಿದ್ದು, 77 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ತಿಳಿದುಬಂದಿದೆ.
9 ಲಕ್ಷ ಹೆಕ್ಟೇರ್ ಬೆಳೆ ಹಾನಿ: ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ರಾಜ್ಯ ವಿಪತ್ತು ಪರಿಹಾರ ಪಡೆಗಳ 86 ತಂಡ ಮತ್ತು 50 ನಾಗರಿಕ ರಕ್ಷಣಾ ತಂಡ ಸಕ್ರಿಯವಾಗಿದೆ. ಜಿಲ್ಲೆಯಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. 9 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಹಳ್ಳದಲ್ಲಿ ಭ್ರೂಣ ಪತ್ತೆ ಕೇಸ್: ಕುಟುಂಬ ಕಲ್ಯಾಣ ಅಧಿಕಾರಿಯ ಹೆಚ್ಚುವರಿ ಅಧಿಕಾರ ಮೊಟಕು!