ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ರಾಜ್ಯದಲ್ಲಿ ಬುಧವಾರ ಹಲವೆಡೆ ಉತ್ತಮ ಮಳೆಯಾಗಿದ್ದು, ಗುರುವಾರ ಸಂಜೆ ವೇಳೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಕೂಡ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ್, ಹಾವೇರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಸೂಚನೆ ನೀಡಲಾಗಿದೆ. ಉಳಿದಂತೆ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹೇಳಿದೆ.
ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ: ಬೆಂಗಳೂರಿನಲ್ಲಿ ಗುರುವಾರ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಓದಿ: ವಾರದೊಳಗೆ ಬಿಬಿಎಂಪಿ ವಾರ್ಡ್ ಮೀಸಲು ಪಟ್ಟಿ ಪ್ರಕಟಿಸಿ.. ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ