ETV Bharat / state

ಅರೆನ್ಯಾಯಿಕ ನ್ಯಾಯಾಲಯ ವಿಚಾರಣೆಯಲ್ಲಿ ಜಿ.ಪಂ ಉಪಕಾರ್ಯದರ್ಶಿಗಳ‌ ಕಡ್ಡಾಯ ಹಾಜರಾತಿಗೆ ಆದೇಶ - etv bharata kannada

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಎ) 48(4) ಮತ್ತು 48(5)ರ ಅಡಿ ಜರುಗುವ ವಿಚಾರಣೆಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸುತ್ತೋಲೆ ಹೊರಡಿಸಲಾಗಿದೆ.

Order for compulsory attendance of Zilla Panchayat Deputy Secretaries in quasi judicial court
ಅರೆನ್ಯಾಯಿಕ ನ್ಯಾಯಾಲಯ ವಿಚಾರಣೆಯಲ್ಲಿ ಜಿ.ಪಂ ಉಪಕಾರ್ಯದರ್ಶಿಗಳ‌ ಕಡ್ಡಾಯ ಹಾಜರಾತಿಗೆ ಆದೇಶ
author img

By

Published : Aug 18, 2022, 7:12 PM IST

ಬೆಂಗಳೂರು: ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅರೆನ್ಯಾಯಿಕ ನ್ಯಾಯಾಲಯದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳ ಕಡ್ಡಾಯ ಹಾಜರಾತಿಗೆ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಎ) 48(4) ಮತ್ತು 48(5)ರ ಅಡಿ ಜರುಗುವ ವಿಚಾರಣೆಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸುತ್ತೋಲೆ ಹೊರಡಿಸಲಾಗಿದೆ.

ಗ್ರಾಮ ಪಂಚಾಯತ್​ಗಳ ಅಧ್ಯಕ್ಷರು ಮತ್ತು ಸದಸ್ಯರು ಅಧಿಕಾರ ದುರುಪಯೋಗ ಮತ್ತು ಹಣ ದುರಪಯೋಗ ಪಡಿಸಿಕೊಂಡ ಪ್ರಕರಣದಡಿ ಮತ್ತು ನಿರಂತರವಾಗಿ ಗ್ರಾಮ ಪಂಚಾಯತ್ ಸಭೆಗಳಿಗೆ ಗೈರು ಹಾಜರಾಗುವ ಮತ್ತು ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸದಸ್ಯತ್ವ ಹೊಂದುವ ಪ್ರಕರಣಗಳಲ್ಲಿ ಅಪರ ಮುಖ್ಯ ಕಾರ್ಯದರ್ಶಿಯವರ ಅರೆನ್ಯಾಯಿಕ ನ್ಯಾಯಲಯದಲ್ಲಿ ವಿಚಾರಣೆ ನಡೆಸಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ ವಿಚಾರಣೆಯನ್ನು ಜರುಗಿಸುವಾಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಪರವಾಗಿ ಹಿರಿಯ ಅಧಿಕಾರಿಗಳು ವಿಚಾರಣೆಗೆ ಗೈರಾಗುತ್ತಿರುವುದನ್ನು ಗಮನಿಸಿ ಈ ನಿರ್ದೇಶನ ಹೊರಡಿಸಲಾಗಿದೆ.

ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಹೊರಡಿಸಲಾಗುವ ನೋಟಿಸನ್ನು ಸಂಬಂಧಪಟ್ಟವರಿಗೆ ಜಾರಿಗೊಳಿಸಿ ಅದರ ಸ್ವೀಕೃತಿಯನ್ನು ದಿನಾಂಕದೊಂದಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪಡೆದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್ ಇವರ ಮುಖಾಂತರ ಸರ್ಕಾರಕ್ಕೆ ಸಲ್ಲಿಸಬೇಕು.

ಇದನ್ನೂ ಓದಿ: ಸಾವರ್ಕರ್ ಫೋಟೋ ಮುಸ್ಲಿಂ ಏರಿಯಾದಲ್ಲಿ ಇದ್ದಾಗ ಕೋಪ ಬರುವುದಿಲ್ಲವೇ?: ಶಾಸಕ ಯತೀಂದ್ರ ಸಿದ್ದರಾಮಯ್ಯ

ಜಿಲ್ಲಾ ಪಂಚಾಯತ್​ನಲ್ಲಿನ ಸಂಬಂಧಪಟ್ಟ ಉಪ ಕಾರ್ಯದರ್ಶಿ ಪ್ರಕರಣಕ್ಕೆ ಸಂಬಂಧಿಸಿ ಪೂರಕ ಮಾಹಿತಿ, ದಾಖಲೆಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ತಾಲೂಕು ಪಂಚಾಯತಿಯಿಂದ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣ ಮಾಹಿತಿಯೊಂದಿಗೆ ಹಾಗೂ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತ್​ ಅಭಿವೃದ್ಧಿ ಅಧಿಕಾರಿಯವರೊಂದಿಗೆ ವಿಚಾರಣೆ ಕಾಲಕ್ಕೆ ಹಾಜರಾಗಬೇಕು ಎಂದು ಸೂಚಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.