ETV Bharat / state

ರಾಜ್ಯ ಸರ್ಕಾರದ ಮತ್ತೊಂದು ಗ್ಯಾರಂಟಿ 10 ಕೆಜಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ ಆದೇಶ

ರಾಜ್ಯ ಸರ್ಕಾರದ ಮತ್ತೊಂದು ಗ್ಯಾರಂಟಿ 10 ಕೆಜಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

order-to-implement-annabhagya-yojana
ರಾಜ್ಯ ಸರ್ಕಾರದ ಮತ್ತೊಂದು ಗ್ಯಾರಂಟಿ 10 ಕೆಜಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ ಆದೇಶ
author img

By

Published : Jun 3, 2023, 10:48 PM IST

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಮತ್ತೊಂದು ಗ್ಯಾರಂಟಿ ಯೋಜನೆ 10 ಕೆಜಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ, ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗಿರುವ ಅಂತ್ಯೋದಯ ಅನ್ನ ಯೋಜನೆ (AAY) ಮತ್ತು ಆಧ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಆಹಾರ ಧಾನ್ಯವನ್ನು ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶುಕ್ರವಾರ ನಡೆದ ಸಂಪುಟ ಸಭೆಯ ನಿರ್ಣಯದಂತೆ 10 ಕೆ.ಜಿ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಜುಲೈ 1ರಂತೆ ಅನ್ವಯವಾಗುವಂತೆ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಬಿಜೆಪಿ ಸರ್ಕಾರ 7 ಕೆಜಿ ಕೊಡುವ ಅಕ್ಕಿಯನ್ನು 5 ಕೆಜಿಗೆ ಕಡಿತಗೊಳಿಸಿತ್ತು. ಅಕ್ಕಿ ಸಂಗ್ರಹ ಇಲ್ಲದ ಕಾರಣ ಜುಲೈ 1 ರಿಂದ ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಸೇರಿ ತಲಾ 10 ಕೆಜಿ ಆಹಾರ ಧಾನ್ಯ ವಿತರಿಸಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗಿರುವ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಕ್ಕೆ ಪ್ರತಿ ತಿಂಗಳು ಫಲಾನುಭವಿಗಳ ಪರಿಗಣನೆಗೆ ತೆಗೆದುಕೊಳ್ಳದೇ 35 ಕೆ.ಜಿ ಆಹಾರ ಧಾನ್ಯವನ್ನು ಹಾಗೂ ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯವನ್ನು ಉಚಿತವಾಗಿ ಒದಗಿಸುತ್ತಿದೆ.

ಇದರ ಜೊತೆಗೆ ರಾಜ್ಯ ಸರ್ಕಾರ ವತಿಯಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನವನ್ನು ರಾಜ್ಯ ಸರ್ಕಾರದ ವೆಚ್ಚದಲ್ಲಿ ಉಚಿತವಾಗಿ ವಿತರಿಸಲಾಗುತ್ತಿದೆ. ಜನವರಿ 2, 2023 ರ ಸರ್ಕಾರದ ಆದೇಶದಂತೆ ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುತ್ತಿರುವ 5 ಕೆ.ಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಆದೇಶಿಸಲಾಗಿತ್ತು.

ಜೂನ್ 2 ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 10 ಕೆ.ಜಿ ಆಹಾರ ಧಾನ್ಯವನ್ನು ವಿತರಿಸಲು ತೀರ್ಮಾನಿಸಲಾಗಿತ್ತು. ಅದರಂತೆ ಇದೀಗ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗಿರುವ ಅಂತ್ಯೋದಯ ಅನ್ನ ಯೋಜನೆ (AAY), ಆದ್ಯತಾ ಕುಟುಂಬ ಪಡಿತರ ಚೀಟಿಗಳು ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ ಆಹಾರ ಧಾನವನ್ನು ಜುಲೈ 1 ರಿಂದ ಅನ್ವಯವಾಗುವಂತೆ ಉಚಿತವಾಗಿ ವಿತರಿಸಲು ಆದೇಶಿಸಿದೆ.

ಇದನ್ನೂ ಓದಿ: ಯುವನಿಧಿ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ : ಷರತ್ತು ಮತ್ತು ನಿಬಂಧನೆಗಳು ಹೀಗಿವೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.