ಬೆಂಗಳೂರು: ರಾಜ್ಯದಲ್ಲಿ ವಾರಾಂತ್ಯದಲ್ಲೂ ಎಲ್ಲಾ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಈ ಹಿಂದಿನ ಆದೇಶವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿದೆ.
ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ಕಾರ್ಯ ನಿರ್ವಹಿಸುವಂತೆ ಜ.4ರಂದು ಸೂಚಿಸಲಾಗಿತ್ತು. ಅದರಂತೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕಾರ್ಯನಿರ್ವಹಿಸಲು ನಿರ್ದೇಶನ ನೀಡಲಾಗಿತ್ತು.
ಆದರೆ ಇದೀಗ ಸರ್ಕಾರ ಆ ಆದೇಶವನ್ನು ಹಿಂಪಡೆದಿದೆ. ವಾರಾಂತ್ಯದಲ್ಲಿ ಅಂದರೆ ಶನಿವಾರವೂ ಎಂದಿನಂತೆ ಕಚೇರಿ ಕಾರ್ಯನಿರ್ವಹಣೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೂಚನೆ ನೀಡಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ರಾಜ್ಯದಲ್ಲಿ ಇಂದು ದಿನದ ಕೋವಿಡ್ ಸಕ್ರಿಯ ಪ್ರಕರಣದಲ್ಲಿ ಭಾರಿ ಇಳಿಕೆ ಕಂಡುಬಂದಿದ್ದು, ನಿನ್ನೆಗೆ ಹೋಲಿಸಿದರೆ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಸುಮಾರು 10 ಸಾವಿರ ವ್ಯತ್ಯಾಸ ಕಂಡುಬಂದಿದೆ. 38,083 ಕೋವಿಡ್ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 36,92,496 ಇದೆ. 67,236 ಜನರು ಸೋಂಕಿನಿಂದ ಗುಣಮುಖರಾಗಿರಾಗಿದ್ದಾರೆ.
ಇದನ್ನೂ ಓದಿ: Budget 2022: ಈ ಸಲವೂ ಕಾಗದ ರಹಿತ ಬಜೆಟ್, ಮೊಬೈಲ್ ಅಪ್ಲಿಕೇಶನ್ನಲ್ಲೂ ಲಭ್ಯ