ETV Bharat / state

ಕೊಳಚೆ ಪ್ರದೇಶ ಅಭಿವೃದ್ಧಿ ಸರ್ಕಾರದ ಧ್ಯೇಯ: ಬಿಎಸ್​ವೈ ಸ್ಪಷ್ಟನೆ​​ - ಬಜೆಟ್ ಮಂಡನೆ

2020-21ರ ಬಜೆಟ್​​ ಅನ್ನು ಸಿಎಂ ಯಡಿಯೂರಪ್ಪ ಸದನದಲ್ಲಿ ಮಂಡಿಸಿದ್ದು, ಈ ವರ್ಷದ ಬಜೆಟ್​​ನಲ್ಲಿ ರಾಜ್ಯದಲ್ಲಿರುವ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

develop slums
ಕೊಳಚೆ ಪ್ರದೇಶಗಳ ಅಭಿವೃದ್ಧಿ
author img

By

Published : Mar 5, 2020, 3:14 PM IST

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹತ್ತು ಮಹಾನಗರ ಪಾಲಿಕೆಗಳಲ್ಲಿ ಅಧಿಸೂಚಿತವಲ್ಲದ ಹಲವಾರು ಕೊಳಗೇರಿ ಪ್ರದೇಶಗಳು ಇರುತ್ತವೆ. ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಇರುವ ಇಂತಹ ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿಪಡಿಸುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಈ ಉದ್ದೇಶಕ್ಕಾಗಿ 2020-21ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಬಜೆಟ್​​ ಮಂಡನೆ ವೇಳೆ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಎಂದು ಇದೇ ವೇಳೆ ಹೇಳಿದ್ದಾರೆ.

ಇನ್ನು ಸರ್ವರಿಗೂ ಸೂರು ಕಲ್ಪಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಬಡವರಿಗೆ ಹಂಚಿಕೆಯಾಗಿರುವ ಸಾಕಷ್ಟು ಮನೆಗಳು ಇನ್ನೂ ಪೂರ್ಣಗೊಳ್ಳದೆ ನನೆಗುದಿಗೆ ಬಿದ್ದಿರುವುದು ನಮ್ಮ ಸರ್ಕಾರದ ಗಮನಕ್ಕೆ ಬಂದಿರುವುದರಿಂದ ಅಪೂರ್ಣ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಿ ವಸತಿರಹಿತರಿಗೆ ಹಂಚಿಕೆ ಮಾಡುವುದನ್ನು ಆದ್ಯತೆಯನ್ನಾಗಿ ಪರಿಗಣಿಸಿದೆ. ಅದಕ್ಕಾಗಿ 2019-20ನೇ ಸಾಲಿನಲ್ಲಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ 1,000 ಕೋಟಿ ರೂ.ಗಳ ಹೆಚ್ಚುವರಿ ಆರ್ಥಿಕ ನೆರವನ್ನು ಸರ್ಕಾರದ ಖಾತ್ರಿಯೊಂದಿಗೆ ಸಾಲದ ಮುಖಾಂತರ ಒದಗಿಸಲಾಗಿದೆ. 2020-21ನೇ ಸಾಲಿನಲ್ಲಿ ಇಂತಹ ಎರಡು ಲಕ್ಷ ಮನೆಗಳನ್ನು ಸುಮಾರು 2500 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹಣಕಾಸು ಸಚಿವರು ಭರವಸೆ ನೀಡಿದ್ದಾರೆ.

ರಾಜ್ಯ ಸರ್ಕಾರವು ಹಲವಾರು ವರ್ಷಗಳಿಂದ ಲಕ್ಷಾಂತರ ಕುಟುಂಬಗಳಿಗೆ ವಿವಿಧ ವಸತಿ ಯೋಜನೆಗಳಡಿ ಮನೆ ನಿರ್ಮಿಸಲು ಸಹಾಯಧನವನ್ನು ನೀಡುತ್ತಲೇ ಬಂದಿದೆ. ಇಂತಹ ಫಲಾನುಭವಿಗಳು ತಮ್ಮ ನಿವೇಶನವನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ 10 ವರ್ಷಗಳ ಕಾಲ ಅಡಮಾನ ಇಡಬೇಕಾಗುತ್ತದೆ. 10 ವರ್ಷಗಳ ಅವಧಿ ಪೂರ್ಣಗೊಂಡರೂ ಹಲವಾರು ಪ್ರಕರಣಗಳಲ್ಲಿ ಅಡಮಾನವನ್ನು ಹಿಂಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಮ್ಮ ಸರ್ಕಾರವು, ಮನೆಗಳನ್ನು ನಿರ್ಮಿಸಿಕೊಂಡು ಹತ್ತು ವರ್ಷವಾಗಿದ್ದಲ್ಲಿ ಅವರು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಅಡ ಇಡಲಾದ ನಿವೇಶನವನ್ನು ಡೀಮ್ಡ್ ರಿಲೀಸ್ ಎಂದು ಪರಿಗಣಿಸಲಿದೆ ಎಂದು ಬಿಎಸ್​​​ವೈ ಹೇಳಿದ್ದಾರೆ.

ಹಿಂದಿನ ವರ್ಷಗಳ ಆಯವ್ಯಯ ಘೋಷಣೆಯಂತೆ ರಾಜ್ಯದಲ್ಲಿ ಈಗಾಗಲೇ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿ ಪೂರ್ವ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡಲು 276 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದ್ದು, ಈ ಶಾಲೆಗಳ ಮೂಲಭೂತ ಸೌಕರ್ಯಗಳಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 2019-20ನೇ ಸಾಲಿನಲ್ಲಿ ಭೀಕರ ಅತಿವೃಷ್ಟಿಯಿಂದ ಹಲವಾರು ಶಾಲಾ ಕೊಠಡಿಗಳು ತೀವ್ರವಾಗಿ ಹಾನಿಗೊಳಗಾಗಿವೆ. ಇಂತಹ ಶಾಲೆಗಳನ್ನು ಪುನರ್ ನಿರ್ಮಾಣ ಮಾಡಲು 26 ಜಿಲ್ಲೆಗಳ 3,386 ಸರ್ಕಾರಿ ಶಾಲೆಗಳ 6,469 ಶಾಲಾ ಕೊಠಡಿಗಳ ಕಾಮಗಾರಿಯನ್ನು ನಬಾರ್ಡ್ ಸಹಯೋಗದೊಂದಿಗೆ 758 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಸರ್ಕಾರ ನಿರ್ಧರಿಸಿ ಅದಕ್ಕಾಗಿ ಹಣವನ್ನ ಬಜೆಟ್​ನಲ್ಲಿ ಮೀಸಲಿಡಲಾಗಿದೆ.

ಶಾಸಕರುಗಳಿಂದ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮೂರು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಲು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮಕೈಗೊಳ್ಳಲಾಗುವುದು ಎಂದು ಬಜೆಟ್​ನಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.