ETV Bharat / state

ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆ: ಸಚಿವ ಪ್ರಭು ಚವ್ಹಾಣ್ - ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆ

ಗುಜರಾತ್​ ಮತ್ತು ಉತ್ತರಪ್ರದೇಶದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಅನುಷ್ಠಾನಗೊಳಿಸಲಾಗಿದೆ. ಅದರಂತೆ ರಾಜ್ಯದಲ್ಲೂ ನಿಷೇಧ ಮಾಡಲಾಗುವುದೆಂದು ಬಿಜೆಪಿ ಪಕ್ಷದ ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಾಳೆ ಆರಂಭವಾಗಲಿರುವ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆಗೆ ಸರ್ಕಾರ ಮುಂದಾಗಿದೆ.

ಸಚಿವ ಪ್ರಭು ಚವ್ಹಾಣ್
Minister Prabhu Chauhan
author img

By

Published : Dec 6, 2020, 8:38 PM IST

ಬೆಂಗಳೂರು : ಪ್ರಣಾಳಿಕೆಯಲ್ಲಿ ಹೇಳಿರುವಂತೆ ಸಂಪೂರ್ಣ ಗೋ ಹತ್ಯೆ ನಿಷೇಧಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, 2010ರ ಮಸೂದೆಯನ್ನು ಇನ್ನಷ್ಟು ಬಿಗಿಗೊಳಿಸಿ ನಾಳೆಯಿಂದ ಆರಂಭವಾಗುವ ಅಧಿವೇಶನದಲ್ಲಿ ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುಜರಾತ್ ಮತ್ತು ಉತ್ತರಪ್ರದೇಶ ಕಾಯ್ದೆಯ ಕೆಲ ಅಂಶಗಳನ್ನು ಪರಿಗಣಿಸಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

ಈ ಕಾಯ್ದೆಯನ್ನು ಅನುಷ್ಠಾನಗೊಳಿಸಿರುವ ಉತ್ತರ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಿಗೆ ಭೇಟಿ ನೀಡಿ ಕಾಯ್ದೆಯ ಅಧ್ಯಯನ ನಡೆಸಲಾಗಿದೆ. ಅಲ್ಲಿನ ಕಾಯ್ದೆಯ ರೂಪುರೇಷೆ, ಕಾಯ್ದೆ ಅನುಷ್ಠಾನದಲ್ಲಿ ಅಲ್ಲಿನ ಸರ್ಕಾರಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಅಧಿಕಾರಿಗಳೊಂದಿಗೆ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್​ ಅವರ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಓದಿ : ತನ್ನ ಕಿಡ್ನ್ಯಾಪ್ ಮಾಡಿದವರಿಗೇ ಧನ್ಯವಾದ ಹೇಳ್ಬೇಕು ಅಂತವ್ರೆ ವರ್ತೂರು​: ಏನಿದರ ರಾಜಕೀಯ ಮರ್ಮ!?

ಗೋ ಹತ್ಯೆ ನಿಷೇಧ ಆದ ನಂತರ ಉಭಯ ರಾಜ್ಯಗಳು ಕೈಗೊಂಡಿರುವ ಯೋಜನೆಗಳ ಬಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗಿದೆ. ನಾಳೆಯಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ನಮ್ಮ ಸರ್ಕಾರ ಗೋ ಹತ್ಯೆ ನಿಷೇಧ ಕಠಿಣ ಮಸೂದೆಯನ್ನು ಮಂಡಿಸಲಿದೆ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲು ಬದ್ಧವಾಗಿದ್ದೇವೆ ಎಂದಿದ್ದಾರೆ.

2010 ರಲ್ಲಿ ಅಂದಿನ ನಮ್ಮ ಮುಖ್ಯಮಂತ್ರಿಗಳು ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆದ ನಂತರ ಮಸೂದೆಯನ್ನು ರಾಷ್ಟ್ರಪತಿಗಳ ಅನುಮೋದನೆಯನ್ನು ಕಳುಹಿಸಲಾಗಿತ್ತು. ಕೆಲವೊಂದು ತಿದ್ದುಪಡಿಗಳನ್ನು ಸೂಚಿಸಿ ಮಸೂದೆ ವಾಪಸ್ಸಾಯಿತಾದರೂ, ಕಾಂಗ್ರೆಸ್ ಸರ್ಕಾರವು ಮಸೂದೆಯನ್ನು ಹಿಂಪಡೆದು ಹಳೆಯ ಕಾಯ್ದೆಯನ್ನೆ ಮುಂದುವರೆಸಿತ್ತು. ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗಿರುವ ಪೂಜ್ಯನೀಯ ಭಾವನೆಯನ್ನು ನಮ್ಮ ಸರ್ಕಾರವು ಗೌರವಿಸಲಿದೆ ಮತ್ತು ಸಂವಿಧಾನದ ಆಶಯದಂತೆ ಗೋ ಸಂರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.