ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ನಮ್ಮ ಕಾರ್ಯಕರ್ತರು ಇದ್ದಾರೆ. ಪ್ರತಿ ರಾಜ್ಯದ ಒಂದು ಕ್ಷೇತ್ರದಲ್ಲಾದರೂ ನಮ್ಮ ಶಾಸಕರು ಇರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಕರೆ ನೀಡಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಧ್ಯಕ್ಷರಾಗಿ ಮರು ನೇಮಕ ಮಾಡಿದ್ದಕ್ಕೆ ಧನ್ಯವಾದ ಅರ್ಪಿಸಿದರು. ನಿನ್ನೆ ರಾಷ್ಟ್ರೀಯ ಕಾರ್ಯಕಾರಿಣಿ ನಡೆದಿದೆ. ಇಂದು ಮಹಾ ಅಧಿವೇಶನದಲ್ಲಿ 3 ನಿರ್ಣಯ ಅಂಗೀಕಾರವಾಗಿದೆ. ಕಾರ್ಯಕ್ರಮಕ್ಕೆ ಬಂದಿರುವ ಕೇರಳ ಮಂತ್ರಿಗಳಿಗೂ ಧನ್ಯವಾದ ತಿಳಿಸುವುದಾಗಿ ಹೇಳಿದರು.
ಇದೊಂದು ಅತ್ಯುತ್ತಮ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ. ಲಕ್ಷಾಂತರ ಕಾರ್ಯಕರ್ತರು ಈ ಪಕ್ಷದ ಬೆನ್ನೆಲುಬಾಗಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಬಗ್ಗೆ ಚರ್ಚೆ ಬೇಡ. ನಮ್ಮ ಕೆಲಸವನ್ನು ನಾವು ಪ್ರಾಮಾಣಿಕವಾಗಿ ಮಾಡಬೇಕು. ಹೆಚ್ ಡಿ ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಜನತಾ ಜಲಧಾರೆ ಮಾಡಿದ್ದರು. ಇವೆಲ್ಲವೂ ಜನರ ಅಭಿವೃದ್ಧಿ ಕಾರ್ಯಕ್ರಮಗಳು ಎಂದರು.
ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ರಾಜಕೀಯ: ಹೆಚ್.ಡಿ ಕುಮಾರಸ್ವಾಮಿ