ETV Bharat / state

ದೇವೇಗೌಡರ ಸ್ಪರ್ಧೆ ಬಗ್ಗೆ ನಮ್ಮ ಪಕ್ಷ ನಿರ್ಧಾರ ಕೈಗೊಳ್ಳಲಿದೆ: ಶ್ರೀರಾಮುಲು

ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​​.ಡಿ.ದೇವೆಗೌಡ ಬಿಜೆಪಿಯಿಂದ ಸ್ಪರ್ಧಿಸುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

Sriramulu
ಸಚಿವ ಶ್ರೀರಾಮುಲು ಹೇಳಿಕೆ
author img

By

Published : Jun 6, 2020, 1:18 PM IST

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ ರಾಜ್ಯಸಭೆಗೆ ಸ್ಪರ್ಧಿಸುವ ವಿಚಾರವಾಗಿ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 38ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅರಸು ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಒಂದೊಮ್ಮೆ ದೇವೇಗೌಡರು ಬಿಜೆಪಿಯಿಂದ ಕಣಕ್ಕಿಳಿಯುವುದಾದರೆ ಅದರ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.

ನಮ್ಮ ಪಕ್ಷದಲ್ಲಿ ಟಿಕೆಟ್​​ ಹಂಚಿಕೆ ವಿಚಾರವಾಗಿ ಯಾವುದೇ ಭಿನ್ನಮತ, ಭಿನ್ನಾಭಿಪ್ರಾಯವಿಲ್ಲ, ಕೇವಲ ಅಭಿಪ್ರಾಯಗಳಿವೆ ಅಷ್ಟೇ ಎಂದ ಅವರು, ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೋರ್ ಕಮಿಟಿ ಸದಸ್ಯರಿಗೆ ಬಿಟ್ಟಿದ್ದು. ಅಂತಿಮ ತೀರ್ಮಾನಗಳನ್ನು ಅವರೆಲ್ಲರೂ ಸೇರಿ ಕೈಗೊಳ್ಳಲಿದ್ದಾರೆ ಎಂದರು.

ಸಚಿವ ಶ್ರೀರಾಮುಲು ಹೇಳಿಕೆ

ಟಿಕೆಟ್​​ ನೀಡುವ ವಿಚಾರವಾಗಿ ಇಬ್ಬರನ್ನು ಆಯ್ಕೆ ಮಾಡುವ ಸಂಬಂಧ ಇವತ್ತು ತೀರ್ಮಾನ ಮಾಡಲಾಗುತ್ತದೆ. ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದಾರೆ. ಆದರೆ, ಒಬ್ಬರನ್ನು ಮಾತ್ರ ಆಯ್ಕೆ ಮಾಡಬೇಕಾಗಿದೆ. ಉಳಿದವರಿಗೆ ಬೇರೆ ಅವಕಾಶ ಕಲ್ಪಿಸಲಾಗುವುದು. ಸಮಾಧಾನ ಪಡಿಸುವ ಕೆಲಸವನ್ನು ನಾಯಕರು ಮಾಡಲಿದ್ದಾರೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ರಾಮುಲು ಸ್ಪಷ್ಟಪಡಿಸಿದರು.

ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ದುಬಾರಿ ಹಣ ವಸೂಲಿ ಮಾಡುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು, ನಮ್ಮ ಸರ್ಕಾರಿ ಆಸ್ಪತ್ರೆಗಳು ಖಾಲಿ ಇವೆ. ಅವು ಭರ್ತಿಯಾದರೆ ಖಾಸಗಿ ವೈದ್ಯಕೀಯ ಆಸ್ಪತ್ರೆಗಳ ಸಹಕಾರ ಪಡೆಯುತ್ತೇವೆ. ಆದರೆ, ಕೆಲವರು ನಮಗೆ ತಿಳಿಯದ ಹಾಗೆ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಸಂದರ್ಭ ಖಾಸಗಿ ಆಸ್ಪತ್ರೆಗಳು ಎಷ್ಟು ಶುಲ್ಕ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಎರಡು-ಮೂರು ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ.

ಖಾಸಗಿ ಆಸ್ಪತ್ರಗೆಳು ದುಬಾರಿ ಶುಲ್ಕ ವಸೂಲಿ ಮಾಡುತ್ತಿವೆ ಎಂಬ ಸಣ್ಣ ದೂರು ಬಂದರೂ ಸಹ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಕೊರೊನಾ ಹೆಸರಿನಲ್ಲಿ ಖಾಸಗಿ ನರ್ಸಿಂಗ್ ಹೋಂಗಳು ದಂಧೆ ಮಾಡುವುದಕ್ಕೆ ಸರ್ಕಾರ ಬಿಡುವುದಿಲ್ಲ ಎಂದು ರಾಮುಲು ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.