ಬೆಂಗಳೂರು: ಡಾ. ಜಿ. ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲಿನ ಐಟಿ ದಾಳಿಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕರು, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಇದು ರಾಜಕೀಯ ದ್ವೇಷದಿಂದ ಮಾಡುತ್ತಿರುವ ದಾಳಿ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಪರಮೇಶ್ವರ್ ನಿವಾಸದ ಮೇಲಿನ ಐಟಿ ದಾಳಿ ಖಂಡನೀಯ ಎಂದು ಕಿಡಿಕಾರಿದರು.
ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿಯವರ ಮೇಲೆ ಯಾವ ದಾಳಿಯೂ ನಡೆಯುವುದಿಲ್ಲ. ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂಥ ಕೆಲಸ ನಡೆಯುತ್ತಿದೆ. ಕಾಂಗ್ರೆಸ್ ಮುಖಂಡರನ್ನೇ ಟಾರ್ಗೆಟ್ ಮಾಡುತ್ತಿರುವುದು ಸರಿಯಾದ ಕ್ರಮವಲ್ಲವೆಂದು ಎಂದರು.
ಇದೇ ವೇಳೆ ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧಕ್ಕೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದ ರಾಮಲಿಂಗಾರೆಡ್ಡಿ, ವಿಧಾನಸಭೆ ಮತ್ತು ವಿಧಾನ ಪರಿಷತ್ನಲ್ಲಿ ಮಾಧ್ಯಮಗಳಿಗೆ ಪ್ರವೇಶವಿತ್ತು. ಏಕಾಏಕಿ ನಿರ್ಬಂಧ ಹೇರಿರುವುದು ಸರಿಯಲ್ಲ ಎಂದರು.