ETV Bharat / state

ಸಿಎಎ ವಿರೋಧಿಸಿ ಪ್ರತಿಭಟನೆ, ನಾಳೆ ಬೆಂಗಳೂರಿಗೆ ಒವೈಸಿ ಭೇಟಿ: ಶಾಂತಿಯುತವಾಗಿ ಪ್ರತಿಭಟಿಸುವಂತೆ ಪೊಲೀಸರ ಎಚ್ಚರಿಕೆ

ನಾಳೆ ಫ್ರೀಡಂ ಪಾರ್ಕ್​ನಲ್ಲಿ ಸಿಎಎ ಹಾಗೂ ಎನ್​​ಆರ್​ಸಿ ವಿರೋಧಿಸಿ ನಡೆಯಲಿರುವ ಪ್ರತಿಭಟನೆಗೆ, ಹೈದರಾಬಾದ್ ಸಂಸದ ಅಸಾದುದ್ದೀನ್​ ಒವೈಸಿ ಬೆಂಗಳೂರಿಗೆ ಬರಲಿದ್ದಾರೆ.

OYC's Arrival in Bangalore
ಸಂಸದ ಅಸಾದುದ್ದೀನ್​ ಒವೈಸಿ
author img

By

Published : Feb 19, 2020, 7:06 PM IST

ಬೆಂಗಳೂರು: ಸಿಎಎ ಹಾಗೂ ಎನ್​​ಆರ್​ಸಿ ವಿರೋಧಿಸಿ ನಾಳೆ ಫ್ರೀಂಡಂಪಾರ್ಕ್​ನಲ್ಲಿ ನಡೆಯುವ ಪ್ರತಿಭಟನೆಗೆ ಹೈದರಾಬಾದ್ ಸಂಸದ ಅಸಾದುದ್ದೀನ್​ ಒವೈಸಿ ಬೆಂಗಳೂರಿಗೆ ಬರಲಿದ್ದಾರೆ.

ಮುಂಜಾಗ್ರತ ಕ್ರಮವಾಗಿ ನಗರ ಪೊಲೀಸರು ಬಿಗಿಭದ್ರತೆ ಕೈಗೊಂಡಿದ್ದಾರೆ. ವಿವಿಧ ಸಂಘ ಸಂಸ್ಥೆಗಳು ನಾಳೆ ಸಂಜೆ 4 ಗಂಟೆಗೆ ಫ್ರೀಡಂಪಾರ್ಕ್​ನಲ್ಲಿ‌ ಪ್ರತಿಭಟನೆ ಹಮ್ಮಿಕೊಂಡಿದ್ದು, ಸುಮಾರು 4 ರಿಂದ 5 ಸಾವಿರ ಪ್ರತಿಭಟನಾಕಾರರು ಸೇರುವ ಸಾಧ್ಯತೆಯಿದೆ.

ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕೆಂದು ಈಗಾಗಲೇ ಆಯೋಜಕರಿಗೆ ಸೂಚಿಸಲಾಗಿದೆ. ಅಲ್ಲದೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ವಾಹನ ಸಂಚಾರಕ್ಕೆ ಯಾವುದೇ ಅಡೆತಡೆಯಾಗದಂತೆ ಕ್ರಮ ಕೈಗೊಳ್ಳಬೇಕು. ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಬೇಕು‌ ಎಂದು ಷರತ್ತುಗಳನ್ನು ವಿಧಿಸಲಾಗಿದೆ. ಒಂದು ವೇಳೆ ನಿಯಮ ಮೀರಿದರೆ ಆಯೋಜರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.