ಬೆಂಗಳೂರು: ಕಂಟೇನ್ಮೆಂಟ್ ಝೋನ್ಗಳಲ್ಲಿ ಒಂದಾಗಿರುವ ಪಾದರಾಯನಪುರದಲ್ಲಿ ಕೊರೊನಾ ಹಾವಳಿ ಜೋರಾಗಿದೆ. ಇಲ್ಲಿನ ಕಾರ್ಪೊರೇಟರ್ಗೆ ಕೊರೊನಾ ಸೋಂಕು ತಗುಲಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇವರ ಸಂಪರ್ಕದಲ್ಲಿದ್ದ 38 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಒಟ್ಟು 19 ಜನರು ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದರೆ, ಉಳಿದ 19 ಜನರು ದ್ವಿತೀಯ ಸಂಪರ್ಕ ಹೊಂದಿದ್ದಾರೆ. ಪ್ರಾಥಮಿಕ ಸಂಪರ್ಕ ಹೊಂದಿದ್ದ ಕುಟುಂಬಸ್ಥರು, ಕಾರು ಚಾಲಕ, ಕೆಲಸದವರಿಗೆ ಹೋಟೆಲ್‌ನಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ. ಇನ್ನು ದ್ವಿತೀಯ ಸಂಪರ್ಕಿತರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.
ಕಳೆದ 10 ದಿನಗಳಲ್ಲಿ ಕಾರ್ಪೊರೇಟರ್ ಅನೇಕ ಕಡೆಗಳಲ್ಲಿ ಓಡಾಡಿದ್ದಾರೆ. ಹೀಗಾಗಿ ಇನ್ನಷ್ಟು ಮಾಹಿತಿಯನ್ನು ಪಡೆದು ಉಳಿದ ಸಂಪರ್ಕಿತರನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.