ETV Bharat / state

ಪದ್ಮವಿಭೂಷಣ ಬಯಸದೇ ಬಂದ ಭಾಗ್ಯ, ಕನ್ನಡಿಗರಿಗೆ ಈ ಪ್ರಶಸ್ತಿ ಅರ್ಪಣೆ: ಮಾಜಿ ಸಿಎಂ ಎಸ್ ಎಂ ಕೃಷ್ಣ

ನಿನ್ನೆ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪುರಸ್ಕಾರಗಳನ್ನು ಘೋಷಿಸಿದೆ. ಈ ಹಿನ್ನೆಲೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾದ ಮಾಜಿ ಸಿಎಂ ಎಸ್​ ಎಂ ಕೃಷ್ಣ ಅವರನ್ನು ಸಚಿವ ಅಶ್ವತ್ಥ ನಾರಾಯಣ ಅವರು ಅಭಿನಂದಿಸಿದ್ದಾರೆ.

Minister Ashwattha Narayan congratulated SM Krishna.
ಎಸ್​ ಎಂ ಕೃಷ್ಣ ಅವರನ್ನು ಸಚಿವ ಅಶ್ವತ್ಥ ನಾರಾಯಣ ಅಭಿನಂದಿಸಿದರು.
author img

By

Published : Jan 26, 2023, 4:18 PM IST

Updated : Jan 26, 2023, 5:54 PM IST

ಎಸ್​ ಎಂ ಕೃಷ್ಣ ಅವರನ್ನು ಸಚಿವ ಅಶ್ವತ್ಥ ನಾರಾಯಣ ಅಭಿನಂದಿಸಿದರು.

ಬೆಂಗಳೂರು: ಪದ್ಮವಿಭೂಷಣ ಪುರಸ್ಕಾರ ಬಂದಿದ್ದಕ್ಕೆ ಬಹಳ ಸಂತೋಷ ಆಗುತ್ತಿದೆ. ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯ, ಮತ್ತು ಈ ಪ್ರಶಸ್ತಿಯನ್ನು ಕಳೆದ 6 ದಶಕದಲ್ಲಿ ನನಗೆ ಬೆಂಬಲಿಸಿದ 7 ಕೋಟಿ ಕನ್ನಡಿಗರಿಗೆ ನಮ್ರತೆಯಿಂದ ಅರ್ಪಿಸುತ್ತೇನೆ ಎಂದು ಮಾಜಿ ಸಿಎಂ ಎಸ್. ಎಂ ಕೃಷ್ಣ ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಪ್ರಶಸ್ತಿಗಳು ನಿವೃತ್ತಿ ಅದವರಿಗೆ ಕೊಡಬೇಕು ಅನ್ನೋ ನಿಯಮ ಏನಿತ್ತು? ಆದರೂ ನನಗೆ ಕೊಟ್ಟಿದ್ದಾರೆ. ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಋಣಿಯಾಗಿದ್ದೇನೆ. ಮತ್ತೆ ನನ್ನ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಇಂದು ನನಗೆ ಬಹಳ ಸಂತೋಷವಾಗಿದೆ. ನನ್ನೊಂದಿಗೆ ನನ್ನ ಆಸೆ ಆಕಾಂಕ್ಷೆಗಳೂ ನಿವೃತ್ತವಾಗಿವೆ ಎಂದರು.

ಪ್ರಶಸ್ತಿಯ ಆಯ್ಕೆಯ ಮಾನದಂಡ ಆಯಾ ಕಾಲಘಟ್ಟದಲ್ಲಿ ಕಾಲಘಟ್ಟಕ್ಕೆ ತಕ್ಕಂತೆ ಬದಲಾಗಿದೆ. ಇತ್ತೀಚೆಗಷ್ಟೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದೇನೆ. ಅದರ ಸಮೀಪದಲ್ಲೇ ಈ ಪ್ರಶಸ್ತಿ ಬಂದಿದೆ. ನನಗೆ ಬಹಳ ಸಂತೋಷ ಉಂಟು ಮಾಡಿದೆ. ಆರು ದಶಕಗಳಿಂದ ರಾಜಕೀಯವಾಗಿ ಸಾಕಿ, ಸಲಹಿ, ಆಶಿರ್ವಾದ ಮಾಡಿದ ಕನ್ನಡದ ಏಳು ಕೋಟಿ ಜನರಿಗೆ ನಮ್ರತೆಯಿಂದ ಈ ಪ್ರಶಸ್ತಿ ಸಮರ್ಪಣೆ ಮಾಡಿತ್ತೇನೆ ಎಂದರು.

ಡಿಜಿಟಲೀಕರಣದ ಹಿರಿಮೆಯಲ್ಲಿ ಕೃಷ್ಣ ಅವರ ಪಾತ್ರ ಹಿರಿದು- ಅಶ್ವತ್ಥನಾರಾಯಣ ಮೆಚ್ಚುಗೆ: ಇಂದು ದೇಶದಲ್ಲಿ ಡಿಜಿಟಲೀಕರಣ ಯಶಸ್ವಿಯಾಗಿರುವುದರ ಹಿಂದೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹಿರಿದಾದ ಪಾಲೂ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಮೆಚ್ಚುಗೆ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾದ ಹಿನ್ನೆಲೆಯಲ್ಲಿ ಅವರನ್ನು ಸಚಿವರು ಸದಾಶಿವನಗರದ ಮನೆಯಲ್ಲಿ ಭೇಟಿ ಮಾಡಿ, ಅಭಿನಂದಿಸಿದರು.

ನಂತರ ಮಾತನಾಡಿದ ಅವರು, ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ಭೂಮಿ ಸಾಫ್ಟ್‌ವೇರ್ ಜಾರಿಗೊಳಿಸುವ ಮೂಲಕ ಕಂದಾಯ ಇಲಾಖೆಯಲ್ಲಿ ಡಿಜಿಟಲ್ ಕ್ರಾಂತಿ ಮಾಡಿದರು. ಇಂದು ಇಡೀ ದೇಶವೇ ಡಿಜಿಟಲ್ ಇಂಡಿಯಾ ಆಗಿ ಪರಿವರ್ತಿತವಾಗಿದೆ ಎಂದು ಅವರು ನೆನಪಿಸಿಕೊಂಡರು. ಕೃಷ್ಣ ಅವರು ರಾಜ್ಯದ ಹಿರಿಯ ಮುತ್ಸದ್ದಿ ಆಗಿದ್ದಾರೆ. ಅವರ ದೂರದೃಷ್ಟಿಯ ಫಲವಾಗಿ ಬೆಂಗಳೂರು ಇಂದು ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ ಎಂದು ಅವರು ಬಣ್ಣಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೃಷ್ಣ ಅವರು, "ನೀವು ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನನಗೆ ಕೊಟ್ಟ ಮೇಲೆ, ಉಳಿದ ಪುರಸ್ಕಾರಗಳು ನನ್ನನ್ನು ಅರಸಿಕೊಂಡು ಬರುತ್ತಿವೆ" ಎಂದು ನುಡಿದರು. ಇದಕ್ಕೆ ಸಚಿವರು ಕೃತಜ್ಞತೆ ವ್ಯಕ್ತಪಡಿಸಿದರು.

ಕರ್ನಾಟಕದ ಒಟ್ಟು ಎಂಟು ಮಂದಿಗೆ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಪದ್ಮ ಪುರಸ್ಕಾರವನ್ನು ನಿನ್ನೆ ಘೋಷಣೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಎಸ್ ​ಎಂ ಕೃಷ್ಣ ಅವರಿಗೆ ಪದ್ಮವಿಭೂಷಣ, ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ, ಖಾದರ್ ವಲ್ಲಿ ದುಡೇಕುಲಾ, ರಾಣಿ ಮಾಚಯ್ಯ, ನಾಡೋಜ ಪಿಂಡಿಪನಹಳ್ಳಿ ಮುನಿವೆಂಕಟಪ್ಪ, ಶಾ ರಶೀದ್​ ಅಹ್ಮದ್ ಖಾದ್ರಿ ಮತ್ತು ಎಸ್​.ಸುಬ್ಬರಾಮನ್​ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಎಂಟು ಕನ್ನಡಿಗರಿಗೆ ಪದ್ಮ ಪುರಸ್ಕಾರ: ಎಸ್​ಎಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ

Last Updated : Jan 26, 2023, 5:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.